AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್​ವೇವ್ ಆತಂಕ! ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆತಂಕವಿದ್ದು, ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕರ್ನಾಟಕದಲ್ಲಿ ಬಿಸಿಲು ಹೆಚ್ಚಿರಲಿದ್ದು, ಅಲ್ಲಲ್ಲಿ ಬಿರುಗಾಳಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್​ವೇವ್ ಆತಂಕ! ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್​ವೇವ್ ಆತಂಕ!
ಭಾವನಾ ಹೆಗಡೆ
|

Updated on: May 13, 2026 | 7:34 AM

Share

ಬೆಂಗಳೂರು, ಮೇ 13: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather)  ಇಲಾಖೆ ತಿಳಿಸಿದೆ. ಇಷ್ಟು ದಿನ ತಂಪಾಗಿದ್ದ ಕರಾವಳಿಯಲ್ಲಿ ಈಗ ಮತ್ತೊಮ್ಮೆ ಹೀಟ್​ವೇವ್ ಆತಂಕ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಮುಖ್ಯಾಂಶಗಳು

  • ಮುಂದಿನ 4 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ
  • ಕರಾವಳಿಯಲ್ಲಿ ಹೀಟ್​ವೇವ್ ಆತಂಕ

ಎಲ್ಲೆಲ್ಲಿ ಮಳೆ?

ಕರಾವಳಿಯಲ್ಲಿ ಇಂದು ಹೀಟ್ ವೇವ್ ಅಲರ್ಟ್​ ನೀಡಲಾಗಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್​

ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್