AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್!

Monsoon 2026:ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಹವಾಮಾನ ಇಲಾಖೆಯು ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯ 'ಆರೆಂಜ್ ಅಲರ್ಟ್' ಘೋಷಿಸಿದೆ. ಬೆಂಗಳೂರು, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಆಲಿಕಲ್ಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ಇದ್ದು, ಮೇ 19ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

Karnataka Weather Forecast: ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್!
ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಚಿಕ್ಕಮಗಳೂರಿನಲ್ಲಿ ‘ಆರೆಂಜ್ ಅಲರ್ಟ್’! Image Credit source: google Gemini
ಭಾವನಾ ಹೆಗಡೆ
|

Updated on:May 17, 2026 | 7:22 AM

Share

ಬೆಂಗಳೂರು, ಮೇ 17: ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Weather) ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಮಲೆನಾಡು ಭಾಗ ಹಾಗೂ ಪಶ್ಚಿಮಘಟ್ಟಗಳ ಸಾಲಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಿಡಿಲು ಮತ್ತು 40-50 ಕಿ.ಮೀ ವೇಗದ ಗಾಳಿಯ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ.

ಮುಖ್ಯಾಂಶಗಳು

  • ಮುಂದಿನ ನಾಲ್ಕು ದಿನ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ.
  • ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ.
  • ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್​

ಎಲ್ಲೆಲ್ಲಿ ಮಳೆ?

ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಭಾರಿ ಮಳೆ/ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಜೂನ್ 19ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ (ಕೆಲವೊಮ್ಮೆ 60 ಕಿ.ಮೀ ವರೆಗೆ) ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಮೇ 19ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಮುಂದಿನ 5 ದಿನಗಳ ಕಾಲ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ತರ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಸಿಡಿಲು ಮತ್ತು ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 am, Sun, 17 May 26

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!