AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ! ಯೆಲ್ಲೋ ಅಲರ್ಟ್​ ಘೋಷಣೆ

Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ! ಯೆಲ್ಲೋ ಅಲರ್ಟ್​ ಘೋಷಣೆ
ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ!Image Credit source: MediaForge AI
ಭಾವನಾ ಹೆಗಡೆ
|

Updated on:May 09, 2026 | 7:17 AM

Share

ಬೆಂಗಳೂರು, ಮೇ 09: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದ್ದು, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಖ್ಯಾಂಶಗಳು

  • ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ
  • ಕೊಡಗು ಸೇರಿದಂತೆ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಮಳೆ?

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉಳಿದಂತೆ ಬೆಂಗಳೂರು ಸೇರಿ ಮೈಸೂರು, ಬಳ್ಳಾರಿ, ಹಾಸನ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್​

ಇಂದು ಮತ್ತು ನಾಳೆ (ಮೇ 9, 10) ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:17 am, Sat, 9 May 26

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More