AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಮುಂದಿನ 4 ದಿನಗಳಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯ ಮುನ್ಸೂಚನೆ!

Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕರ್ನಾಟಕದಲ್ಲಿ ಬಿಸಿಲು ಹೆಚ್ಚಿರಲಿದ್ದು, ಅಲ್ಲಲ್ಲಿ ಬಿರುಗಾಳಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.

ಕರ್ನಾಟಕ ಹವಾಮಾನ ವರದಿ: ಮುಂದಿನ 4 ದಿನಗಳಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯ ಮುನ್ಸೂಚನೆ!
ಮುಂದಿನ 4 ದಿನಗಳಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯ ಮುನ್ಸೂಚನೆ!
ಭಾವನಾ ಹೆಗಡೆ
|

Updated on: May 12, 2026 | 7:33 AM

Share

ಬೆಂಗಳೂರು, ಮೇ 12: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಮುಖ್ಯಾಂಶಗಳು

  • ಮುಂದಿನ 4 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ
  • ರಾಜ್ಯದಲ್ಲಿ ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಮಳೆ?

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ.ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಗರಿಷ್ಠ ತಾಪಮಾನ 33°C ದಾಟುವ ಸಾಧ್ಯತೆ ಇದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಮುಂದುವರಿಯಲಿದ್ದರೂ, ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34.8°C ಮತ್ತು ಕನಿಷ್ಠ ತಾಪಮಾನ 23.8°C ಆಸುಪಾಸಿನಲ್ಲಿರಲಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್​

ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಬಿಗ್ ಬಾಸ್: ನಾಮಿನೇಟ್ ಆದವರಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?
ಬಿಗ್ ಬಾಸ್: ನಾಮಿನೇಟ್ ಆದವರಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ