AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Updates: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ ಸಾಧ್ಯತೆ

ಕರ್ನಾಟಕ(Karnataka)ದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ( Meteorological Department) ಮಾಹಿತಿ ನೀಡಿದೆ.

Karnataka Rain Updates: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ ಸಾಧ್ಯತೆ
Karnataka Rain
TV9 Web
| Updated By: ನಯನಾ ರಾಜೀವ್|

Updated on: Nov 14, 2022 | 6:00 AM

Share

ಕರ್ನಾಟಕ(Karnataka)ದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ( Meteorological Department) ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಬೆಂಗಳೂರು ನಗರ, ರಾಮನಗರ, ಬೆಂಗಳೂರು ಎಚ್​ಎಎಲ್​ ವಿಮಾನ ನಿಲ್ದಾಣ, ಮಾಲೂರು, ಕೊಳ್ಳೇಗಾಲ, ಮೈಸೂರು, ಹೊಸೂರು, ಕೋಲಾರ, ಸೂತ್ತೂರು, ಸರಗೂರು, ಕುಣಿಗಲ್, ಕೃಷ್ಣರಾಜಪೇಟೆ, ಮದ್ದೂರು, ಬಂಡೀಪುರ, ಹರದನಹಳ್ಳಿಯಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋದ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್​ ಇರುತ್ತದೆ.

ಇಂದು ಬೆಂಗಳೂರಿನ ಎಚ್​ಎಎಲ್​ನಲ್ಲಿ 21.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 21.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 21.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ತಮಿಳುನಾಡಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಅದರ ಪರಿಣಾಮ ಬೆಂಗಳೂರಿಗೂ ತಾಗಲಿದೆ. ತಮಿಳುನಾಡಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ, ಇದರ ಬೆನ್ನಲ್ಲೇ 5 ಜಿಲ್ಲೆಗಳಿಗೆ ಪ್ರವಾಹದ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಥೇಣಿ, ದಿಂಡಿಗಲ್, ಮಧುರೈ, ಶಿವಗಂಗಾ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಣೆಕಟ್ಟುಗಳು ತುಂಬಿ ಹರಿಯುತ್ತಿದ್ದು, ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.

ANI ಜೊತೆ ಮಾತನಾಡಿದ DAM ಅಧಿಕಾರಿ, ಅಧಿಕಾರಿಗಳು ಥೇಣಿಯ ವೈಗೈ ಅಣೆಕಟ್ಟಿನಿಂದ 4,230 ಅಡಿ ಹೆಚ್ಚುವರಿ ನೀರನ್ನು ಹೊರಹಾಕಿದ್ದಾರೆ ಮತ್ತು ತೇಣಿ, ದಿಂಡಿಗಲ್, ಮಧುರೈ, ಶಿವಗಂಗಾ ಮತ್ತು ರಾಮನಾಥಪುರಂ ಜಿಲ್ಲೆಗಳಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್