ಕರ್ನಾಟಕ(Karnataka)ದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ( Meteorological Department) ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಬೆಂಗಳೂರು ನಗರ, ರಾಮನಗರ, ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣ, ಮಾಲೂರು, ಕೊಳ್ಳೇಗಾಲ, ಮೈಸೂರು, ಹೊಸೂರು, ಕೋಲಾರ, ಸೂತ್ತೂರು, ಸರಗೂರು, ಕುಣಿಗಲ್, ಕೃಷ್ಣರಾಜಪೇಟೆ, ಮದ್ದೂರು, ಬಂಡೀಪುರ, ಹರದನಹಳ್ಳಿಯಲ್ಲಿ ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋದ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್ ಇರುತ್ತದೆ.
ಇಂದು ಬೆಂಗಳೂರಿನ ಎಚ್ಎಎಲ್ನಲ್ಲಿ 21.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 21.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 21.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ತಮಿಳುನಾಡಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಅದರ ಪರಿಣಾಮ ಬೆಂಗಳೂರಿಗೂ ತಾಗಲಿದೆ. ತಮಿಳುನಾಡಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ, ಇದರ ಬೆನ್ನಲ್ಲೇ 5 ಜಿಲ್ಲೆಗಳಿಗೆ ಪ್ರವಾಹದ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಥೇಣಿ, ದಿಂಡಿಗಲ್, ಮಧುರೈ, ಶಿವಗಂಗಾ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಣೆಕಟ್ಟುಗಳು ತುಂಬಿ ಹರಿಯುತ್ತಿದ್ದು, ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ANI ಜೊತೆ ಮಾತನಾಡಿದ DAM ಅಧಿಕಾರಿ, ಅಧಿಕಾರಿಗಳು ಥೇಣಿಯ ವೈಗೈ ಅಣೆಕಟ್ಟಿನಿಂದ 4,230 ಅಡಿ ಹೆಚ್ಚುವರಿ ನೀರನ್ನು ಹೊರಹಾಕಿದ್ದಾರೆ ಮತ್ತು ತೇಣಿ, ದಿಂಡಿಗಲ್, ಮಧುರೈ, ಶಿವಗಂಗಾ ಮತ್ತು ರಾಮನಾಥಪುರಂ ಜಿಲ್ಲೆಗಳಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ