ಮಳೆಯಿಂದ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿ, ನಿರಾಶ್ರಿತರನ್ನು ಆರೈಕೆ ಮಾಡಿ: ಎಸ್ಡಿಆರ್ಎಫ್ ಸಭೆಯಲ್ಲಿ ಸೂಚನೆ
ಪರಿಹಾರ ಕಾರ್ಯಕ್ಕೆ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು. ಮಳೆ ಹಾನಿ ವರದಿ ಶೀಘ್ರವೇ ಸಲ್ಲಿಸಲು ಸಭೆಯಲ್ಲಿ ಸೂಚನೆ ನೀಡಲಾಗಿದೆ. ಎಸ್ಡಿಆರ್ಎಫ್ ಸಭೆಯಲ್ಲಿ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.
ಬೆಂಗಳೂರು: ಕರ್ನಾಟಕ ರಾಜ್ಯದ ಹಲವೆಡೆ ಮಳೆಯಿಂದ ಅಪಾರ ಹಾನಿ ಹಿನ್ನೆಲೆ ಜಿಲ್ಲಾಡಳಿತಗಳ ಜೊತೆ ಎಸ್ಡಿಆರ್ಎಫ್ ಸಭೆ ಮುಕ್ತಾಯ ಆಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಾಗಿದೆ. ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ಆಗಬೇಕು. ಅಧಿಕಾರಿಗಳು ಜಿಲ್ಲೆ, ತಾಲೂಕಿನಲ್ಲಿ ಅಲರ್ಟ್ ಆಗಿರಬೇಕು. ಪರಿಹಾರ ಕಾರ್ಯಕ್ಕೆ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು. ಮಳೆ ಹಾನಿ ವರದಿ ಶೀಘ್ರವೇ ಸಲ್ಲಿಸಲು ಸಭೆಯಲ್ಲಿ ಸೂಚನೆ ನೀಡಲಾಗಿದೆ. ಎಸ್ಡಿಆರ್ಎಫ್ ಸಭೆಯಲ್ಲಿ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.
ಮನೆ ಕಳೆದುಕೊಂಡಿರುವವರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿ. ಕಾಳಜಿ ಕೇಂದ್ರಗಳಲ್ಲಿ ನಿರಾಶ್ರಿತರನ್ನು ಆರೈಕೆ ಮಾಡಿ. ಯಾವುದೇ ಸಮಸ್ಯೆ ಆಗದಂತೆ ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಿ ಎಂದು ಎಸ್ಡಿಆರ್ಎಫ್ ಸಭೆಯಲ್ಲಿ ಜಿಲ್ಲಾಡಳಿತಗಳಿಗೆ ಸೂಚನೆ ಕೊಡಲಾಗಿದೆ. ವಿಧಾನಪರಿಷತ್ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ, ಚುನಾವಣಾ ಆಯೋಗದ ಕಣ್ಗಾವಲಿನಲ್ಲಿ ಸಭೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಆರ್. ಅಶೋಕ್, ಸಿಎಸ್ ರವಿಕುಮಾರ್, ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತಿ ವಹಿಸಿದ್ದಾರೆ.
ಶನಿವಾರ GST ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆ ಶನಿವಾರ (ನವೆಂಬರ್ 20) ಬೆಂಗಳೂರಿನಲ್ಲಿ GST ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆ ನಡೆಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ GST ಸಭೆ ನಡೆದಿದೆ. GST ಗ್ರೂಪ್ ಆಫ್ ಮಿನಿಸ್ಟರ್ಸ್ ಅಧ್ಯಕ್ಷರಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕೊವಿಡ್ ನಂತರ ಮೊದಲ ಬಾರಿಗೆ ಭೌತಿಕವಾಗಿ ಈ ಸಭೆ ನಡೆಯಲಿದೆ. ಕೊವಿಡ್ ಆರಂಭವಾದ ಬಳಿಕ ಈವರೆಗೆ ವರ್ಚುವಲ್ ಸಭೆ ನಡೆದಿರಲಿಲ್ಲ. ಮತ್ತೆ ಮೊದಲ ಬಾರಿಗೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಾಳೆ ಬೆಳಗ್ಗೆ 11ಕ್ಕೆ ಸಭೆ ನಡೆಯಲಿದೆ.
ಇದನ್ನೂ ಓದಿ: Karnataka Rains: ಕರ್ನಾಟಕದ ಹಲವೆಡೆ ನಿರಂತರ ಮಳೆ; ಯಾವ ಯಾವ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ? ವಿವರ ಇಲ್ಲಿದೆ