Karnataka Rains: ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಈಗಾಗಲೇ ಜಲಪಾತ, ಡ್ಯಾಂ, ನದಿಗಳಿಗೆ ಜೀವ ಕಳೆ ಬಂದಿದೆ. ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗೂ ಬೀದರ್, ಕಲ್ಬುರ್ಗಿ, ಯಾದಗಿರಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Karnataka Rains: ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Jul 08, 2024 | 2:40 PM

ಬೆಂಗಳೂರು, ಜುಲೈ. 08: ಕರಾವಳಿಯಲ್ಲಿ ಟ್ರಫ್ (ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಸಮಸ್ಯೆ) ಉಂಟಾಗಿರುವ ಹಿನ್ನಲೆ‌ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಐದು ದಿನಗಳ ಕಾಲ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ (Karnataka Rain). ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 11 ರವರೆಗೂ ಮಳೆ ಇರಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮಳೆಯ ಅಲರ್ಟ್ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿಗೆ ಇಂದಿನಿಂದ ಜುಲೈ 10ರ ವರೆಗೆ ಯಲ್ಲೋ ಅಲರ್ಟ್ ನೀಡಿದ್ದು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಬೀದರ್, ಕಲ್ಬುರ್ಗಿ, ಯಾದಗಿರಿ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ನೀಡಿದ್ದು ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಐದು ದಿನದ ಮಳೆಯ ಅಲರ್ಟ್ ನೀಡಿದ್ದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ನಿರಂತರ ಗಾಳಿ ಮತ್ತು ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ, ಮುಂಬೈಯಲ್ಲಿ ಕುಂಭದ್ರೋಣ

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಇಂದು ಯಲ್ಲೋ ಅಲರ್ಟ್ ನೀಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗ 30 ರಿಂದ 40 ಕಿಲೋಮೀಟರ್ ಪ್ರತಿ ಘಂಟೆಗೆ ಬೀಸಲಿದೆ. ಇನ್ನು ಬೆಂಗಳೂರು ನಗರದಲ್ಲಿ ಮುಂದಿನ 48ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ. ಇನ್ನು ಸರಾಸರಿ ಸಮುದ್ರ ಮಟ್ಟದಲ್ಲಿರುವ ಆಫ್- ಕೇರಳ ಟ್ರಫ್ ಈಗ ದಕ್ಷಿಣ ಗುಜರಾತ್-ಕರ್ನಾಟಕ ಕರಾವಳಿಯಲ್ಲಿ ಹಾದು ಹೋಗುತ್ತಿರುವ ಹಿನ್ನೆಲೆ ಇನ್ನು ಐದು ದಿನ ಮಳೆ ಇರಲಿದೆ.‌

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ