Karnataka Rain: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ; ಮತದಾನಕ್ಕೆ ಮಳೆ ಅಡ್ಡಿ, ನಾಳೆಯಿಂದ ಐದು ದಿನ ಕರ್ನಾಟಕದಲ್ಲಿ ಭಾರೀ ಮಳೆ

Weather Forecast: ಬಂಗಾಲಕೊಲ್ಲಿಯಲ್ಲಿ ಸುಳಿಗಾಳಿ ಉಂಟಾದ ಪರಿಣಾಮ ನಾಳೆ (ಮೇ 10ರಂದು) ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ.

Karnataka Rain: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ; ಮತದಾನಕ್ಕೆ ಮಳೆ ಅಡ್ಡಿ, ನಾಳೆಯಿಂದ ಐದು ದಿನ ಕರ್ನಾಟಕದಲ್ಲಿ ಭಾರೀ ಮಳೆ
ಬಂಗಾಲಕೊಲ್ಲಿಯಲ್ಲಿ ಉಂಟಾಗುವ ಚಂಡಮಾರುತದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟದ ವಿವಿಧೆಡೆ ಮಳೆ
Follow us
Rakesh Nayak Manchi
|

Updated on:May 09, 2023 | 3:10 PM

ಬೆಂಗಳೂರು: ಬಂಗಾಲಕೊಲ್ಲಿಯಲ್ಲಿ ಸುಳಿಗಾಳಿ ಉಂಟಾದ ಪರಿಣಾಮ ನಾಳೆ (ಮೇ 10ರಂದು) ಚಂಡಮಾರುತ (Cyclone) ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ಬೆಂಗಳೂರು (Bangalore Rain) ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗಲಿದೆ (Karnataka Rain) ಎಂದು ಹವಮಾನ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಹವಮಾನ ಇಲಾಖೆ ತಜ್ಞ ಎ ಪ್ರಸಾದ್, ಗಾಳಿದಿಕ್ಕಿನಲ್ಲಿ ಸಮುದ್ರಮಟ್ಟದಿಂದ 1.5 ಕಿಲೋ ಮೀಟರ್​ನಷ್ಟು ಸುಳಿ ಉಂಟಾಗಿದೆ. ಜೊತೆಗೆ ತೀವ್ರವಾದ ವಾಯುಭಾರ ಕುಸಿತವಾಗಿದೆ. ಇದರ ಪ್ರಭಾವದಿಂದಾಗಿ ನಾಳೆ ಚಂಡಮಾರುವಾಗುವ ಸಾಧ್ಯಾತೆ ಇದೆ ಎಂದು ಎಚ್ಚರಿಸಿದ್ದಾರೆ.

ಚಂಡಮಾರುತದ ಪ್ರಭಾವದಿಂದ ರಾಜ್ಯ – ರಾಜಧಾನಿಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು (ಮೇ 9) ಕಾರವಳಿ ಭಾಗದ ಉತ್ತರ ಕನ್ನಡ, ದಕ್ಷಣ ಕನ್ನಡ ಜಿಲ್ಲೆಗಳಿಗೆ ಮಳೆ ಇದ್ದು, ಇಂದು ಎರಡು ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ನೀಡಿಲಾಗಿದೆ. ಇನ್ನು, ದಕ್ಷಣ ಒಳನಾಡಿನ ಕೊಡಗು, ಹಾಸನ್ , ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಒಟ್ಟು ಮೂರು ದಿನಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: ಮೇ.10ರ ಮತದಾನಕ್ಕೆ ಮಳೆ ಅಡ್ಡಿ ಆತಂಕ: ವಿಸ್ತರಣೆಯಾಗುತ್ತಾ ಮತದಾನದ ಸಮಯ? ಆಯುಕ್ತ ತುಷಾರ್​ ಗಿರಿನಾಥ್ ಸ್ಪಷ್ಟನೆ

ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. ರಾಜ್ಯದ ವಿವಿಧ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ನಾಳೆ ನಡೆಯುವ ಮತದಾನಕ್ಕೆ ಅಡ್ಡಿಯಾಗಲಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದ್ದೇವೆ. ನಾಳೆ ಬೆಳಗ್ಗೆಯಿಂದ ಮೊಡ ಕವಿದ ವಾತಾವರಣ ಇರಲಿದ್ದು, ಮಧ್ಯಹ್ನದ ನಂತರ ಮಳೆಯಾಗುವ ಸಾಧ್ಯಾತೆ ಇದೆ. ಸಂಜೆಯ ನಂತರ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪ್ರಸಾದ್ ಹೇಳಿದ್ದಾರೆ.

ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ

ರಾಜ್ಯಾದ್ಯಂತ ಇನ್ನೂ 5 ದಿನಗಳ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಜಿಲ್ಲೆಯಲ್ಲಿ ಮಳೆಯಾಗುವ ಲಕ್ಷಣವಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರದಲ್ಲಿ ಮಳೆ ಸಂಭವ ಇದೆ. ಬೆಂಗಳೂರು ನಗರದಲ್ಲಿ 4 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Tue, 9 May 23