Karnataka Rains: ಭಾನುವಾರವೂ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಶನಿವಾರ(ಸೆ.23) ಬೆಂಗಳೂರು ನಗರದ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ. ಯಲಹಂಕ, ಜಕ್ಕೂರು ವ್ಯಾಪ್ತಿ ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸುರಿದ ಮಳೆ ಪ್ರಮಾಣದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದ್ದು ಚೌಡೇಶ್ವರಿ ವಾರ್ಡ್​ನಲ್ಲಿ 21.50 ಮಿಮೀ ಮಳೆಯಾಗಿದೆ.

Karnataka Rains: ಭಾನುವಾರವೂ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಮಳೆImage Credit source: The Hans India
Follow us
TV9 Web
| Updated By: ಆಯೇಷಾ ಬಾನು

Updated on:Sep 24, 2023 | 8:18 AM

ಬೆಂಗಳೂರು, ಸೆ.24: ಶನಿವಾರ ರಾತ್ರಿ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿದೆ (Karnataka Rain). ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ರಾಯಚೂರು ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು ಭಾನುವಾರ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ (India Meteorological Department). ಇನ್ನು ಮತ್ತೊಂದೆಡೆ ಬೆಂಗಳೂರಿನಲ್ಲಿ ಸುರಿದ ಮಳೆ ಪ್ರಮಾಣದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದ್ದು ಚೌಡೇಶ್ವರಿ ವಾರ್ಡ್​ನಲ್ಲಿ 21.50 ಮಿಮೀ ಮಳೆಯಾಗಿದೆ (Bengaluru Rain).

ಶನಿವಾರ(ಸೆ.23) ಬೆಂಗಳೂರು ನಗರದ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ. ಯಲಹಂಕ, ಜಕ್ಕೂರು ವ್ಯಾಪ್ತಿ ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನ ಯಾವ್ಯಾವ ಭಾಗದಲ್ಲಿ ಎಷ್ಟೆಷ್ಟು ಮಳೆ?

ಇಂದು ಕೂಡ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಇಂದು (ಭಾನುವಾರ) ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಮೂರು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ವಿಜಯಪುರ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಸೆಪ್ಟೆಂಬರ್ 27ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಇಲ್ಲದೆ ಕಂಗಾಲಾಗಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:15 am, Sun, 24 September 23

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ