ಬೆಂಗಳೂರು, ಸೆ.24: ಶನಿವಾರ ರಾತ್ರಿ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿದೆ (Karnataka Rain). ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ರಾಯಚೂರು ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು ಭಾನುವಾರ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ (India Meteorological Department). ಇನ್ನು ಮತ್ತೊಂದೆಡೆ ಬೆಂಗಳೂರಿನಲ್ಲಿ ಸುರಿದ ಮಳೆ ಪ್ರಮಾಣದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದ್ದು ಚೌಡೇಶ್ವರಿ ವಾರ್ಡ್ನಲ್ಲಿ 21.50 ಮಿಮೀ ಮಳೆಯಾಗಿದೆ (Bengaluru Rain).
ಶನಿವಾರ(ಸೆ.23) ಬೆಂಗಳೂರು ನಗರದ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ. ಯಲಹಂಕ, ಜಕ್ಕೂರು ವ್ಯಾಪ್ತಿ ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು (ಭಾನುವಾರ) ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಮೂರು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ವಿಜಯಪುರ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಸೆಪ್ಟೆಂಬರ್ 27ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಇಲ್ಲದೆ ಕಂಗಾಲಾಗಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:15 am, Sun, 24 September 23