AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಹಲವೆಡೆ ನಿರಂತರ ಮಳೆ; ಯಾವ ಯಾವ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ? ವಿವರ ಇಲ್ಲಿದೆ

ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆ ಹಿನ್ನೆಲೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆ (ನವೆಂಬರ್ 20) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Karnataka Rains: ಕರ್ನಾಟಕದ ಹಲವೆಡೆ ನಿರಂತರ ಮಳೆ; ಯಾವ ಯಾವ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ? ವಿವರ ಇಲ್ಲಿದೆ
ಮಳೆಯಲ್ಲಿ ನೆನೆಯುತ್ತಾ ಹೆಜ್ಜೆ ಹಾಕುತ್ತಿರುವ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 19, 2021 | 8:47 PM

Share

ಬೆಂಗಳೂರು: ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆ ಹಿನ್ನೆಲೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆ (ನವೆಂಬರ್ 20) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ, ಕೋಲಾರ ಜಿಲ್ಲೆಯಲ್ಲಿ, ತುಮಕೂರು, ರಾಮನಗರ, ಮೈಸೂರು, ಧಾರವಾಡ, ಹಾವೇರಿ, ದಾವಣಗೆರೆ, ಕೊಪ್ಪಳ ಹಾಗೂ ಗದಗ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ ನಾಳೆ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ ಮುಂತಾದೆಡೆ ಅಪಾರ ಪ್ರಮಾಣದ ಬೆಳೆ ನಾಶ ಚಿಕ್ಕಬಳ್ಳಾಫುರ ಜಿಲ್ಲೆಯಾದ್ಯಂತ ಮಹಾ ಮಳೆ ಕಾರಣದಿಂದ ಜಿಲ್ಲೆಯಲ್ಲಿ 83 ಸಾವಿರ ಹೆಕ್ಟರ್ ನಲ್ಲಿದ್ದ ರಾಗಿ ಜೋಳ ನೆಲಗಡಲೆ ಭತ್ತ ಹಾನಿಯಾಗಿದೆ. 2600 ಹೆಕ್ಟರ್ ಪ್ರದೇಶದಲ್ಲಿದ್ದ ತರಕಾರಿ ಹೂ ಹಣ್ಣು ಬೆಳೆಗಳು ಹಾಳಾಗಿದೆ. ಜಿಲ್ಲೆಯಲ್ಲಿದ್ದ 24 ಸೇತುವೆಗಳು ಹಾನಿಯಾಗಿವೆ. 1 ಬೃಹತ್ ಕೆರೆ ಒಡೆದು ಹಾಳಾಗಿದೆ. ಸಣ್ಣ ನೀರಾವರಿ ಇಲಾಖೆಯ 80ರಷ್ಟು ಕೆರೆಗಳು ತುಂಬಿ ಕೋಡಿ ಹರಿದಿವೆ. ಜಿ.ಪಂ.ನ 1092 ಕೆರೆಗಳು ತುಂಬಿವೆ, ಜಿಲ್ಲೆಯ ನದಿ ನಾಳೆಗಳು ತುಂಬನಿ ಹರಿಯುತ್ತಿವೆ. ಈ ಬಗ್ಗೆ ಟಿವಿ9ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಮಾಹಿತಿ ನೀಡಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ ಮಳೆ ನೀರು ರೈತರ ಹೊಲಗಳಿಗೆ ನುಗ್ಗಿ ಹರಿಯುತ್ತಿದೆ. ಮಳೆ ನೀರು ಕೆರೆ ಹಳ್ಳದಂತೆ ಹರಿಯುತ್ತಿದೆ. ಕಟಾವಿಗೆ ಬಂದಿದ್ದ ಜೋಳದ ಹೊಲದಲ್ಲಿ ನೀರು ತುಂಬಿ ಹರಿದಿದೆ. ಹೀಗಾಗಿ ಜೋಳ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿ ರೈತರದ್ದಾಗಿದೆ. ಜಿಲ್ಲಾದ್ಯಂತ ಒಟ್ಟು 14 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದೆ. ಜೋಳ, ಭತ್ತ, ರಾಗಿ, ತೊಗರಿ, ಶೇಂಗಾ ಬೆಳೆ ಹಾನಿ ಆಗಿದೆ. ರೈತರ ಹೊಲಗಳು ಕೆರೆಯಂತಾಗಿದೆ. ಮಳೆಗೆ ಜಿಲ್ಲಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೇಶ್ ಪುರ ಗ್ರಾಮದ ಬಳಿ ಘಟನೆ ನಡೆದಿದೆ.

ಹಾಸನ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ನಾಶ ಆಗಿದೆ. 1,105 ಎಕರೆ ರಾಗಿ, 650 ಎಕರೆ ಜೋಳದ ಬೆಳೆ ನಾಶ ಉಂಟಾಗಿದೆ. ಕೃಷಿ, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾಸನ‌ ತಾಲೂಕಿನ ಎತ್ತಿನಕಟ್ಟೆ, ಕವಳಿಕೆರೆ, ಈಚನಹಳ್ಳಿ, ಮುದ್ಸನಹಳ್ಳಿ ಭಾಗದಲ್ಲಿ ಭಾರಿ ಮಳೆಯಿಂದ ಬೆಳೆ ನಾಶ ಉಂಟಾಗಿದೆ.

ಇದನ್ನೂ ಓದಿ: Karnataka Rains: ಕರ್ನಾಟಕ ರಾಜ್ಯಾದ್ಯಂತ ಭಾರೀ ಮಳೆ; ಅಪಾರ ಪ್ರಮಾಣದ ಬೆಳೆ, ಆಸ್ತಿ ಹಾನಿ- ವಿವರ ಇಲ್ಲಿದೆ

ಇದನ್ನೂ ಓದಿ: ಆಂಧ್ರ ಪ್ರದೇಶದಲ್ಲಿ ಮಳೆ ಅನಾಹುತದಿಂದ ಮೂವರ ಸಾವು, ಕಡಪ ಜಿಲ್ಲೆಯಲ್ಲಿ 30 ಜನ ನಾಪತ್ತೆ

Published On - 6:42 pm, Fri, 19 November 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!