ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮಳೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ(Bengaluru Rain). ನಗರದಲ್ಲಿಂದು ಮೋಡಕವಿದ ವಾತಾವರಣ ಇರಲಿದ್ದು ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ದಿನಗಳ ಕಾಲ ಮಳೆಯಾಗಲಿದ್ದು ದಕ್ಷಿಣ ಒಳನಾಡಿನಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದೆ ಇಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಮತ್ತೊಂದೆಡೆ ಇಂದು ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ(Siddaramaiah), ಡಿಸಿಎಂ ಆಗಿ ಡಿಕೆ ಶಿವಕುಮಾರ್(DK Shivakumar) ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.
ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ. ಮೇ 22ರ ನಂತರ ಮಳೆಯ ತೀವ್ರತೆ ಹೆಚ್ಚಲಿದೆ. ಮೇ 23ರ ವೇಳೆಗೆ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ನಾಳೆ ಮಳೆ ಸಾಧ್ಯತೆ; ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅಡ್ಡಿಯ ಆತಂಕ
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಿಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮೊದಲ ಮೂರು ದಿನ ಸಾಧಾರಣ ಮಳೆ ಆರಂಭವಾಗಲಿದೆ. ಮುಂದಿನ ಐದು ದಿನಗಳ ಪೈಕಿ ಕೊನೆಯ ಎರಡು ದಿನ ಈ ಒಳನಾಡಿನ ಜಿಲ್ಲೆಗಳಿಗೆ ಕೊನೆಯ ಎರಡು ದಿನ ವ್ಯಾಪಕ ಮಳೆ ಬರುವ ಸಾಧ್ಯತೆ ಇದೆ. ಈ ವೇಳೆ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಸುರಿಸುವ ಮಾರುತಗಳು ಸಕ್ರಿಯವಾಗಿರಲಿವೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:38 am, Sat, 20 May 23