ಬೆಂಗಳೂರು: ಕೊರೊನಾ ಸೋಂಕಿನ ವಿರುದ್ಧ ಹೋರಾಡಲು 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್, 15-18 ವಯಸ್ಸಿನ 3.50 ಲಕ್ಷ ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಮಕ್ಕಳಿಗೆ ಲಸಿಕೆ ಹಾಕುವುದರಲ್ಲಿ ದೇಶದಲ್ಲಿ 3ನೇ ಸ್ಥಾನದಲ್ಲಿದ್ದೇವೆ. ರಾಜ್ಯದಲ್ಲಿ ಈಗಾಗಲೇ ಶೇ.25ರಷ್ಟು ಮಕ್ಕಳಿಗೆ ಲಸಿಕೆ ನೀಡಿದ್ದೇವೆ. ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ ಅಂತ ತಿಳಿಸಿದ್ದಾರೆ.
ಮುಂದುವರಿದು ಮಾತನಾಡಿದ ಸುಧಾಕರ್, ಒಮಿಕ್ರಾನ್ ಬಗ್ಗೆ ಯಾವುದೇ ಆತಂಕ ಬೇಡ. ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೆ ಪರಿಣಾಮ ಕಡಿಮೆ. ಕೊರೊನಾ ಮೂರನೇ ಅಲೆ ದೀರ್ಘ ಕಾಲ ಇರುವುದಿಲ್ಲ. ಒಮಿಕ್ರಾನ್ನಿಂದ ಶ್ವಾಸಕೋಶಕ್ಕೆ ತೊಂದರೆಯಾಗಲ್ಲ ಎಂದು ಹೇಳಿದರು.
ನಿನ್ನೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಜನರಿಗೆ ಮನವಿ ಮಾಡುತ್ತೇನೆ. 4-6 ವಾರಗಳು ಹೆಚ್ಚು ಸೋಂಕು ಹರಡುತ್ತದೆ. ಈ ಅಲೆ ದೀರ್ಘ ಕಾಲ ಇರುವುದಿಲ್ಲ. ವೇಗವಾಗಿ ಹರಡುತ್ತದೆ ಮತ್ತು ಬೇಗ ಮುಕ್ತಾಯ ಆಗುತ್ತದೆ. ಹೀಗಾಗಿ ಕನಿಷ್ಠ 4-6 ವಾರ ಜನ ಎಚ್ಚರಿಕೆವಹಿಸಬೇಕು. ಕೊರೊನಾ ಬಂದರು ಯಾರು ಆತಂಕ ಪಡುವುದು ಬೇಡ. ಓಮಿಕ್ರಾನ್ ಶ್ವಾಸಕೋಶಕ್ಕೆ ಹೋಗುವುದು ಕಡಿಮೆ. ಗಂಟಲಲ್ಲಿ ಮಾತ್ರ ಇರುತ್ತದೆ. ಹೀಗಾಗಿ ಯಾರು ಆತಂಕ ಪಡಬೇಕಿಲ್ಲ ಅಂತ ಸಚಿವರು ತಿಳಿಸಿದ್ದಾರೆ.
ಕೊರೊನಾ ವಾರಿಯರ್ಸ್ಗೆ 3ನೇ ಡೋಸ್ ಲಸಿಕೆ ಕೊಡುತ್ತೇವೆ. ಫ್ರಂಟ್ ಲೈನ್ ವಾರಿಯರ್ಸ್ಗೂ 3 ನೇ ಡೋಸ್ ಲಸಿಕೆ ಕೊಡುತ್ತೇವೆ ಎಂದು ತಿಳಿಸಿದ ಸುಧಾಕರ್, ಜನರು, ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಸಹಕಾರ ಮುಖ್ಯ. ಆರೋಗ್ಯದ ತುರ್ತು ಪರಿಸ್ಥಿತಿ ಇರುವುದರಿಂದ ಜನರು, ರಾಜಕೀಯ ಪಕ್ಷಗಳು ಸಹಕಾರ ಕೊಡಬೇಕು. ಕಾಂಗ್ರೆಸ್ಗೆ ಜನರ ಹಿತ ಕಾಪಾಡುವ ಮನಸ್ಸು ಇದೆ ಅಂತ ಭಾವಿಸುತ್ತೇನೆ. ಹೀಗಾಗಿ ಪಾದಯಾತ್ರೆ ಮಾಡಬೇಕಾ ಅಂತ ಯೋಚನೆ ಮಾಡಲಿ ಎಂದರು.
ಮಹಾರಾಷ್ಟ್ರ ಸೇರಿದಂತೆ ಅನೇಕ ಕಡೆ ಏನ್ ಆಗಿದೆ ಅಂತ ಎಲ್ಲರಿಗೂ ಗೊತ್ತು. ಅನೇಕ ವರ್ಷ ಅವರು ಅಧಿಕಾರ ನಡೆಸಿದ್ದಾರೆ. ಇಂತಹ ಸಮಯದಲ್ಲಿ ಹೇಗೆ ನಡೆದುಕೊಳ್ಳಬೇಕು ಅಂತ ಅವರು ಅರ್ಥ ಮಾಡಕೊಳ್ಳಬೇಕು. ಜನರು ಎಲ್ಲಾ ನೋಡುತ್ತಿದ್ದಾರೆ. ಎಲ್ಲವನ್ನು ಜನ ಅರ್ಥ ಮಾಡಿಕೊಳ್ಳುತ್ತಾರೆ. ಸಿಎಂ, ಮಂತ್ರಿ ಆದವರು ಅ ಪಕ್ಷದಲ್ಲಿ ಇದ್ದಾರೆ. ಅವರು ಹಠ ಮುಂದುವರಿಸಿದರೆ ಕಾನೂನು ಪ್ರಕಾರ ಕ್ರಮ ಆಗುತ್ತೆ ಅಂತ ಹೇಳಿದ್ದಾರೆ.
ಇದನ್ನೂ ಓದಿ
ಪಂಜಾಬ್‌ನಲ್ಲಿ ಇಂದು ₹ 42,750 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
Published On - 11:32 am, Wed, 5 January 22