AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮೂರು ಪ್ರತ್ಯೇಕ ಅಪಘಾತಗಳು: ಇಬ್ಬರಿಗೆ ಗಂಭೀರ ಗಾಯ, ಓರ್ವ ಸಾವು!

ಇಂದು ಬೆಂಗಳೂರು, ಬಳ್ಳಾರಿ ಮತ್ತು ನೆಲಮಂಗಲದಲ್ಲಿ ನಡೆದ ರಸ್ತೆ ಅಪಘಾತಗಳ ಕುರಿತು ವರದಿ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಪತ್ನಿಯ ಎದುರೇ ಪ್ರಾಣಬಿಟ್ಟಿದ್ದಾರೆ. ಬಳ್ಳಾರಿಯಲ್ಲಿ ಬೈಕ್-ಲಾರಿ ಡಿಕ್ಕಿ, ದಂಪತಿಗೆ ಗಾಯ. ನೆಲಮಂಗಲದಲ್ಲಿ ಐಷಾರಾಮಿ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಎಲ್ಲಾ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರಾಜ್ಯದಲ್ಲಿ ಮೂರು ಪ್ರತ್ಯೇಕ ಅಪಘಾತಗಳು: ಇಬ್ಬರಿಗೆ ಗಂಭೀರ ಗಾಯ, ಓರ್ವ ಸಾವು!
ರಾಜ್ಯದಲ್ಲಿ ಮೂರು ಪ್ರತ್ಯೇಕ ಅಪಘಾತಗಳು: ಇಬ್ಬರಿಗೆ ಗಂಭೀರ ಗಾಯ, ಓರ್ವ ಸಾವು!
ಭಾವನಾ ಹೆಗಡೆ
|

Updated on: Apr 12, 2026 | 1:58 PM

Share

ಬೆಂಗಳೂರು, ಏಪ್ರಿಲ್ 12: ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ರಸ್ತೆ ಅಪಘಾತಗಳು (Accidents) ನಡೆದಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಬೆಂಗಳೂರು, ಬಳ್ಳಾರಿ ಮತ್ತು ನೆಲಮಂಗಲದಲ್ಲಿ ಈ ಅಪಘಾತಗಳು ನಡೆದಿದ್ದು, ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಪತ್ನಿಯ ಎದುರೆ ಪ್ರಾಣಬಿಟ್ಟ ಪತಿ!

ಬೆಂಗಳೂರಿನ ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ದುರಂತದಲ್ಲಿ 45 ವರ್ಷದ ಶ್ಯಾಮ್ ದೊರೆ ಮೃತಪಟ್ಟಿದ್ದಾರೆ. ತಮಿಳುನಾಡಿಗೆ ತೆರಳಿ ಹಿಂದಿರುಗಿದ್ದ ಅವರು ಪತ್ನಿ ಜಯಶ್ರೀ ಎದುರೇ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಕಾರನ್ನು ರಿವರ್ಸ್ ತೆಗೆದುಕೊಳ್ಳುತ್ತಿದ್ದ ಅಪರಿಚಿತ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದ್ದು, ಅಲ್ಲೇ ನಿಂತಿದ್ದ ಬ್ಲಡ್ ಬ್ಯಾಂಕ್ ಬಸ್ ಹಾಗೂ ಕಾರಿನ ನಡುವೆ ಸಿಲುಕಿದ ಶ್ಯಾಮ್ ದೊರೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬ್ಯಾಟರಾಯಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ

ಇನ್ನೊಂದೆಡೆ, ಬಳ್ಳಾರಿ ತಾಲೂಕಿನ ಕಾರೇಕಲ್ಲು ಗ್ರಾಮದ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸುರೇಶ್ ಮತ್ತು ಶರಣಮ್ಮ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ, ಗಾಯಾಳುಗಳನ್ನು ಟ್ರಾಮಾ ಕೇರ್ ಸೆಂಟರ್‌ಗೆ ಕಳುಹಿಸಿದ್ದಾರೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನೆಲಮಂಗಲ ತಾಲೂಕು ಕಚೇರಿ ಎದುರು ಐಶಾರಾಮಿ ಕಾರು ಚಾಲಕ ಪಾರ್ಕಿಂಗ್ ನೆಪದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್ ಸಂಪೂರ್ಣ ಹಾನಿಗೊಳಗಾಗಿದ್ದು, ಸಂಚಾರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು