ಮಾ.24 ರಂದು ಎದುರಾಗಲಿದೆ ಬಸ್ ಸಮಸ್ಯೆ; ಅನಿರ್ದಿಷ್ಟಾವಧಿ ಧರಣಿಗೆ ಸಾರಿಗೆ ನೌಕರರ ನಿರ್ಧಾರ
ಸಾರಿಗೆ ನಿಗಮ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ನಡೆಯಲಿದ್ದು ಧರಣಿ ಸಂಬಂಧ ಇಂದು ಕಾರ್ಮಿಕ ಇಲಾಖೆಗೆ ಸಾರಿಗೆ ನೌಕರರು ನೋಟಿಸ್ ನೀಡಲಿದ್ದಾರೆ.
ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ(Karnataka Assembly Elections 2023) ಕರ್ನಾಟಕ ಸರ್ಕಾರಕ್ಕೆ(Karnataka Government) ಟೆನ್ಷನ್ ಮೇಲೆ ಟೆನ್ಷನ್ ಶುರುವಾಗಿದೆ. ಸರ್ಕಾರಿ ನೌಕರರ ನಂತರ ಇದೀಗ ಸಾರಿಗೆ ನೌಕರರು ಮುಷ್ಕರಕ್ಕೆ ನಿರ್ಧರಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.24ರಿಂದ ಅನಿರ್ದಿಷ್ಟಾವಧಿ ಧರಣಿ ಮಾಡಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ.
ಸಾರಿಗೆ ನಿಗಮ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ನಡೆಯಲಿದ್ದು ಧರಣಿ ಸಂಬಂಧ ಇಂದು ಕಾರ್ಮಿಕ ಇಲಾಖೆಗೆ ಸಾರಿಗೆ ನೌಕರರು ನೋಟಿಸ್ ನೀಡಲಿದ್ದಾರೆ. ರಾಜ್ಯದ ನಾಲ್ಕು ನಿಗಮಗಳ ಬಸ್ಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ.
ಸಾರಿಗೆ ನೌಕರರ ಕೂಟ ಈಗಾಗಲೇ ಎರಡು ಬಾರಿ ಮುಷ್ಕರ ಮಾಡಿದೆ. ನಾಲ್ಕು ದಿನ ಫ್ರೀಡಂಪಾರ್ಕ್ ನಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರು. ಸದ್ಯ ನಾಳೆಯಿಂದ ಎಲ್ಲಾ ಘಟಕಗಳಲ್ಲಿ ಮುಷ್ಕರದ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಈ ಹಿಂದೆ ಸರ್ಕಾರ ಕೊಟ್ಟ ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸಲಿದ್ದಾರೆ. ಈ ಹಿಂದೆ ಸಾರಿಗೆ ನೌಕರರಿಗೆ ಸರ್ಕಾರ ಭರವಸೆಯನ್ನ ನೀಡಿತ್ತು. ಆದ್ರೆ ವೇತನ ವಿಚಾರವಾಗಿ ಕೊಟ್ಟ ಮಾತನ್ನ ಉಳಿಸಿಕೊಳ್ಳಲಿಲ್ಲ.
ಇದನ್ನೂ ಓದಿ: ಬೆಂಗಳೂರಿಗೆ ಎದುರಾಗಲಿದೆ ಹಾಲಿನ ಕೊರತೆ; ಹಾಲಿನ ಉತ್ಪಾದನೆ ಕಡಿಮೆಯಾಗಿದೆ ಎಂದು ಎಚ್ಚರಿಕೆ ನೀಡಿದ ಬಮುಲ್
ಬೇಡಿಕೆಗಳೇನು?
- ಆರನೇ ವೇತನ ಆಯೋಗದ ಮಾದರಿಯಲ್ಲಿ ವೇತನ ನೀಡುವಂತೆ ಆಗ್ರಹ
- ಮುಷ್ಕರದ ಸಮಯದಲ್ಲಿ ಮಾಡಿರೋ ವಜಾ, ಅಮಾನತು, ಪೋಲಿಸ್ ಕೇಸ್ ಹಿಂಪಡಿಬೇಕು
- 1 ಲಕ್ಷ 7 ಸಾವಿರ ನೌಕರರ ಸಂಘಕ್ಕೆ 23 ವರ್ಷಗಳಿಂದ ಚುನಾವಣೆ ಆಗಿಲ್ಲ, ಚುನಾವಣೆ ನಡೆಸಬೇಕು
- ಈ ಬಾರಿ ಕಾರ್ಮಿಕ ಸಂಘಟನೆಗಳ ಚುನಾವಣೆ ಮಾಡಲು ಒತ್ತಾಯ
- ಸಾರಿಗೆ ನಿಗಮಗಳ ಖಾಸಗೀಕರಣಕ್ಕೆ ವಿರೋಧ
- ಎಲೆಕ್ಟ್ರಿಕ್ ಬಸ್ಗಳ ನಿರ್ವಹಣೆ ಖಾಸಗೀಕರಣಕ್ಕೆ ವಿರೋಧ
- ಹೊರಗುತ್ತಿಗೆ ಆಧಾರದ ಮೇಲೆ ನೌಕರರ ನೇಮಕಕ್ಕೆ ವಿರೋಧ
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ