ಕಕರಸಾ ನಿಗಮದಲ್ಲಿ 26 ಬ್ಯಾಕ್ ಲಾಗ್ ಹುದ್ದೆಗಳಿಗೆ ನೇಮಕಾತಿ: ಆದೇಶ ಪ್ರತಿ ನೀಡಿದ ರಾಮಲಿಂಗಾರೆಡ್ಡಿ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 21, 2025 | 4:56 PM

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2017ರಲ್ಲಿ 36 ಹಿಂಬಾಕಿ ಹುದ್ದೆಗಳನ್ನು ಭರ್ತಿ ಮಾಡಿದೆ ಮತ್ತು 2024ರಲ್ಲಿ 1619 ಚಾಲಕರು ಮತ್ತು 100 ಮೃತರ ಆಶ್ರಿತರನ್ನು ನೇಮಿಸಿಕೊಂಡಿದೆ. ಒಟ್ಟಾರೆಯಾಗಿ ಕಳೆದ ಒಂದೂವರೆ ವರ್ಷದಲ್ಲಿ 1745 ನೇಮಕಾತಿಗಳಾಗಿವೆ. ಇದಲ್ಲದೆ, 1014 ಹೊಸ BS-VI ಬಸ್‌ಗಳನ್ನು ಸೇರಿಸಲಾಗಿದೆ ಮತ್ತು ಹೆಚ್ಚಿನ ಬಸ್‌ಗಳ ಖರೀದಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ.

ಕಕರಸಾ ನಿಗಮದಲ್ಲಿ 26 ಬ್ಯಾಕ್ ಲಾಗ್ ಹುದ್ದೆಗಳಿಗೆ ನೇಮಕಾತಿ: ಆದೇಶ ಪ್ರತಿ ನೀಡಿದ ರಾಮಲಿಂಗಾರೆಡ್ಡಿ
ಕಕರಸಾ ನಿಗಮದಲ್ಲಿ 26 ಬ್ಯಾಕ್ ಲಾಗ್ ಹುದ್ದೆಗಳಿಗೆ ನೇಮಕಾತಿ: ಆದೇಶ ಪ್ರತಿ ನೀಡಿದ ರಾಮಲಿಂಗಾರೆಡ್ಡಿ
Follow us on

ಬೆಂಗಳೂರು, ಜನವರಿ 21: 2017ನೇ ಸಾಲಿನಲ್ಲಿ ಎಸ್​ಸಿ, ಎಸ್​ಟಿ (SC/ST) ಮೀಸಲಾತಿಯ 36 ಹುದ್ದೆಗಳನ್ನು ಹಿಂಬಾಕಿ ಹುದ್ದೆಗಳೆಂದು ಗುರುತಿಸಲಾಗಿದೆ. ಅವುಗಳ ಪೈಕಿ 1 ಸಹಾಯಕ ಲೆಕ್ಕಿಗ, 8 ಕುಶಲಕರ್ಮಿ, 6 ಸಹಾಯಕ ಸಂಚಾರ ನಿರೀಕ್ಷಕ, 3 ತಾಂತ್ರಿಕ ಸಹಾಯಕ ಹಾಗೂ 7 ಕರಾಸಾ ಪೇದೆ ಹುದ್ದೆಗಳಿಗೆ ಒಟ್ಟು 25 ಅಭ್ಯರ್ಥಿಗಳು ಆಯ್ಕೆಗೊಂಡಿದ್ದಾರೆ. ಸದರಿ 26 ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಮೂಲಕ ಕಾರ್ಯಸ್ಥಳ ನಿಯೋಜನೆ ಮಾಡಲಾಗಿದೆ.

ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ನೇಮಕಾತಿ ಆದೇಶಗಳನ್ನು ವಿತರಣೆ ಮಾಡಿದ್ದಾರೆ.

ಇದನ್ನೂ ಓದಿ: ತಿರುಪತಿಯಲ್ಲಿ ಕಾಲ್ತುಳಿತ: ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

2024ನೇ ಸಾಲಿನಲ್ಲಿ 1619 ಚಾಲಕ ಹಾಗೂ ಚಾಲಕ-ಕಂ-ನಿರ್ವಾಹಕರನ್ನು ನೇರ ನೇಮಕಾತಿ ಮೂಲಕ ಹಾಗೂ 100 ಮೃತರಾವಲಂಬಿತರನ್ನು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಕಳೆದ ಒಂದುವರೆ ವರ್ಷದಲ್ಲಿ ‌ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಒಟ್ಟು 1745 ನೇಮಕಾತಿ ಮಾಡಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜ 5ರಿಂದ ಪರಿಷ್ಕೃತ ಟಿಕೆಟ್​ ದರ ಅನ್ವಯ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?

ನಿಗಮದಲ್ಲಿ 1014 ಹೊಸ BS-6 ಮಾದರಿಯ ಬಸ್ ಗಳನ್ನು ಸೇರ್ಪಡೆಗೊಳಿಸಲಾಗಿದ್ದು, 123 ನಗರ ಸಾರಿಗೆ ಬಸ್ ಹಾಗೂ 56 ಪ್ರೀಮಿಯಂ ಬಸ್ ಗಳ ಖರೀದಿಗೆ ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇಂದಿನ ಕಾರ್ಯಕ್ರಮದಲ್ಲಿ ಎಂ.ರಾಚಪ್ಪ (ಕ ಆ ಸೇ ಹಿರಿಯ ಶ್ರೇಣಿ), ವ್ಯವಸ್ಥಾಪಕ ನಿರ್ದೇಶಕರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.