AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ಇರುವ ಎಲ್ಲಾ ವಾಹನ ನೋಂದಣಿ ಅರ್ಜಿ ನವೆಂಬರ್ ಒಳಗೆ ವಿಲೇವಾರಿ ಮಾಡಿ: ಆರ್​ಟಿಒಗಳಿಗೆ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನವೆಂಬರ್ 30ರೊಳಗೆ ಎಲ್ಲಾ ಬಾಕಿ ವಾಹನ ನೋಂದಣಿ ಅರ್ಜಿಗಳನ್ನು ಇತ್ಯರ್ಥಪಡಿಸಲು ಆರ್ಟಿಓಗಳಿಗೆ ಸೂಚಿಸಿದ್ದಾರೆ. ಅವರು ಬಸ್ಸುಗಳಲ್ಲಿ ತುರ್ತು ನಿರ್ಗಮನ ಬಾಗಿಲು ಕಡ್ಡಾಯಗೊಳಿಸಿ, ಸುರಕ್ಷತೆಗೆ ಆದ್ಯತೆ ನೀಡುವಂತೆ ತಿಳಿಸಿದ್ದಾರೆ. ಅದಲ್ಲದೆ ಅಖಿಲ ಭಾರತ ಪರವಾನಗಿ ಬಸ್ಸುಗಳಿಗೆ ತೆರಿಗೆ ವಿಧಿಸುವ ಮೂಲಕ ಇಲಾಖೆಯ ಆದಾಯ ಗುರಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಬಾಕಿ ಇರುವ ಎಲ್ಲಾ ವಾಹನ ನೋಂದಣಿ ಅರ್ಜಿ ನವೆಂಬರ್ ಒಳಗೆ ವಿಲೇವಾರಿ ಮಾಡಿ: ಆರ್​ಟಿಒಗಳಿಗೆ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ
ನವೆಂಬರ್ ಮುಗಿಯುವುದರೊಳಗೆ ಬಾಕಿ ಇರುವ ಎಲ್ಲಾ ವಾಹನ ನೋಂದಣಿ ಅರ್ಜಿಗಳನ್ನು ಪೂರ್ಣಗೊಳಿಸಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ
ಭಾವನಾ ಹೆಗಡೆ
|

Updated on: Nov 14, 2025 | 8:44 AM

Share

ಬೆಂಗಳೂರು, ನವೆಂಬರ್ 14: ರಾಜ್ಯದಲ್ಲಿ ಬಾಕಿಯಿರುವ ಎಲ್ಲಾ ವಾಹನ ನೋದಣಿ ಅರ್ಜಿಗಳನ್ನು ಪೂರ್ಣಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆರ್ಟಿಓ (RTO) ಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ (ನ.13)ದಂದು ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಸಾಕಷ್ಟು ನೋಂದಣಿ ಹರ್ಜಿಗಳು ಬಾಕಿ ಇವೆ. ಅದರ ಜೊತೆಗೆ ಶೇ. 50 ರಷ್ಟು ಹೊಸ ನೋಂದಣಿಅರ್ಜಿಗಳು ಸಲ್ಲಿಕೆಯಾಗಿವೆ. ನವೆಂಬರ್ 30ರೊಳಗೆ ಈ ಎಲ್ಲಾ ಅಜಿರ್ಗಳನ್ನು ಪರಿಶೀಲಿಸಿ ಇತ್ಯರ್ಥಪಡಿಸಬೇಕು ಎಂದರು. ಅರ್ಜಿಗಳ ಡಿಜಿಟಲೀಕರಣದಲ್ಲಿ ಕೆಲವು ಸಾಫ್ಟ್ ವೇರ್ ದೋಷಗಳು ಎದುರಾಗಿದ್ದು, ಇಲಾಖೆ ಆ ದೋಷಗಳನ್ನು ಸರಿಪಡಿಸುವ ಪ್ರಯತ್ನದಲ್ಲಿದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುರಕ್ಷತೆಗೆ ಹೆಚ್ಚಿನ ಕ್ರಮ ವಹಿಸಲು ಸೂಚನೆ

ಫಿಟ್ನೆಸ್ ಪ್ರಮಾಣಪತ್ರ ನೀಡುವ ಸಂದರ್ಭದಲ್ಲಿ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲನ್ನು ಅಳವಡಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಲೋಕಲ್ ಬಸ್ ಆಗಿರಲಿ, ಐಷಾರಾಮಿ ಬಸ್ ಆಗಿರಲಿ ತುರ್ತು ನಿರ್ಗಮನದ ಬಾಗಿಲು ಕಡ್ಡಾಯವಾಗಿದೆ. ಹಲವಾರು ಬಸ್​​ಗಳಲ್ಲಿ ಕೇವಲ ತುರ್ತು ನಿರ್ಗಮದ ಕಿಟಕಿಗಳು ಮಾತ್ರವಿದ್ದು, ಮಕ್ಕಳಿಗೆ ಮತ್ತು ಹಿರಿಯ ನಾಗರಿಕರಿಗೆ ಇದರಿಂದ ತೊಂದರೆಯಾಗಬಹುದು. ಹೀಗಾಗಿ ತುರ್ತು ಬಾಗಿಲು ಅತ್ಯಗತ್ಯ. ವಾಹನ ಯಾವಾಗಲಾದರೂ ನೋಂದಣಿಯಾಗಿರಲಿ, ನಮ್ಮ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ನಮ್ಮ ನೀತಿ ನಿಯಮಗಳಿಗೆ ಬದ್ಧರಾಗಿರಲೇಬೇಕು ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದು, ಸಾರ್ವಜನಿಕ ಸಾರಿಗೆಗಳಲ್ಲಿ ಅತಿಯಾದ ವಾಣಿಜ್ಯ ವಸ್ತುಗಳ ಸಾಗಾಟ ಕಂಡುಬಂದಲ್ಲಿ ಇಲಾಖೆಯು ಕಠಿಣ ಕ್ರಮ ಕೈಗೊಳ್ಳುವಂತೆಯೂ ಆದೇಶಿಸಿದ್ದಾರೆ.

ಮುಂಬರುವ ವರ್ಷದಲ್ಲಿ ಹೆಚ್ಚಿನ ಆದಾಯದ ಗುರಿ

ಅಖಿಲ ಭಾರತ ಪ್ರವಾಸಿ ಪರವಾನಗಿ ಹೊಂದಿರುವ ಬಸ್​ಗಳ ಮೇಲೆ ತೆರಿಗೆ ವಿಧಿಸಲಿ ರಾಜ್ಯಾದ್ಯಂತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ರಾಜ್ಯದ ಶಾಲಾ ವಾಹನಗಳಿಗೆ ಫಿಟ್​ನೆಸ್ ಪ್ರಮಾಣ ಪತ್ರ ನೀಡುವ ಮೊದಲು ಸಂಪೂರ್ಣ ತಪಾಸಣೆ ನಡೆಸುವಂತೆ ಇಲಾಖೆಗೆ ಹೇಳಲಾಗಿದೆ. ಅದರೊಂದಿಗೆ ಶಾಲಾ ವಾಹನಗಳ ಮಾಸಿಕ ತಪಾಸಣೆಗಾಗಿ ವಿಶೇಷ ತಂಡವನ್ನು ನೇಮಿಸುವಂತೆಯೂ ಸೂಚಿಸಲಾಗಿದೆ. ಸಧ್ಯದ ಹಣಕಾಸು ವರ್ಷದಲ್ಲಿ ಸಾರಿಗೆ ಇಲಾಖೆಯು 7,451.45 ಕೋಟಿ ರೂ.ಗಳ ಆದಾಯ ಗಳಿಸಿದ್ದು, ಮುಂಬರುವ ಹಣಕಾಸು ವರ್ಷದಲ್ಲಿ ರಾಜ್ಯ ಸಾರಿಗೆ ಇಲಾಖೆಯು 14,457.73 ಕೋಟಿ ರೂ.ಗಳ ಆದಾಯ ಗಳಿಸುವಂತೆ ಸರ್ಕಾರ ಗುರಿ ನಿಗಡಿಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?