AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳು ಮಾಫಿಯಾ ಕುರಿತು ಸ್ವಯಂಪ್ರೇರಿತ PIL: ಪ್ರತಿಕ್ರಿಯಿಸಲು ರಾಜ್ಯ ಸರ್ಕಾರಕ್ಕೆ 4 ವಾರ ಕಾಲಾವಕಾಶ ಕೊಟ್ಟ ಹೈಕೋರ್ಟ್​​

ರಾಜ್ಯದಲ್ಲಿನ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ PIL ವಿಚಾರಣೆ ನಡೆಸಿದ್ದು, PIL ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಿದೆ. ಇದೊಂದು ಗಂಭೀರ ವಿಷಯವೆಂದು ಪರಿಗಣಿಸಿರುವ ಹೈಕೋರ್ಟ್, ಕೇಂದ್ರ ಸಂಸ್ಥೆ ಅಥವಾ ವಿಶೇಷ ತನಿಖಾ ದಳದಿಂದ ವಿಚಾರಣೆ ಅಗತ್ಯವೆಂದು ಅಭಿಪ್ರಾಯಪಟ್ಟಿದೆ. ರಾಜಕೀಯ ಪ್ರಭಾವ ಮತ್ತು ದೊಡ್ಡ ಹಣದ ವ್ಯವಹಾರದ ಬಗ್ಗೆಯೂ ಪೀಠ ಉಲ್ಲೇಖಿಸಿದೆ.

ಮರಳು ಮಾಫಿಯಾ ಕುರಿತು ಸ್ವಯಂಪ್ರೇರಿತ PIL: ಪ್ರತಿಕ್ರಿಯಿಸಲು ರಾಜ್ಯ ಸರ್ಕಾರಕ್ಕೆ 4 ವಾರ ಕಾಲಾವಕಾಶ ಕೊಟ್ಟ ಹೈಕೋರ್ಟ್​​
ಕರ್ನಾಟಕ ಹೈಕೋರ್ಟ್​​Image Credit source: Tv9 Kannada
ರಮೇಶ್​ ಎಮ್​.
| Edited By: |

Updated on: Feb 20, 2026 | 2:35 PM

Share

ಬೆಂಗಳೂರು, ಫೆಬ್ರವರಿ 20: ರಾಜ್ಯದ ವಿವಿಧ ನದಿ ಪಾತ್ರಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಆರೋಪಗಳ ಕುರಿತು ಸ್ವಯಂಪ್ರೇರಿತವಾಗಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ನಾಲ್ಕು ವಾರಗಳ ಅವಧಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚಾ ಅವರ ವಿಭಾಗೀಯ ಪೀಠ ಈ ಬಗ್ಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಿದೆ.

ಜನವರಿ 28ರಂದು ಪ್ರಕಟವಾದ ಮಾಧ್ಯಮ ವರದಿಗಳನ್ನು ಪರಿಗಣಿಸಿ ಜನವರಿ 31ರಂದು ಹೈಕೋರ್ಟ್ ವಿಭಾಗೀಯ ಪೀಠವು ಸ್ವಯಂಪ್ರೇರಿತ PIL ದಾಖಲಿಸಲು ಆದೇಶಿಸಿತ್ತು. ಇದೊಂದು ಗಂಭೀರ ವಿಷಯವಾಗಿದೆ. ಕೇಂದ್ರ ಸಂಸ್ಥೆ, ವಿಶೇಷವಾಗಿ ರಚಿಸಲಾದ ತನಿಖಾ ಸಂಸ್ಥೆ ಅಥವಾ ವಿಶೇಷ ತನಿಖಾ ತಂಡದಿಂದ ಮೂಲಕ ನ್ಯಾಯಾಲಯ ಮೇಲ್ವಿಚಾರಣೆಯಲ್ಲಿ ಇದರ ತನಿಖೆಯ ಅಗತ್ಯವಿದೆ ಎಂದು ಪೀಠ ಅಭಿಪ್ರಾಯಪಟ್ಟಿತ್ತು.

ಇದನ್ನೂ ಓದಿ: ಗೃಹ ಸಚಿವರೇ ಅಸಹಾಯಕರಾಗಿದ್ದಾರೆ; ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್

ಜನವರಿ 27ರಂದು ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಅಕ್ರಮ ಮರಳು ಗಣಿಗಾರಿಕೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದರು. ಇದನ್ನು ಉಲ್ಲೇಖಿಸಿದ ವಿಭಾಗೀಯ ಪೀಠ, ರಾಜ್ಯದ ಗೃಹ ಸಚಿವರೇ ಮರಳು ಮಾಫಿಯಾಗಳ ವಿರುದ್ಧ ಕ್ರಮ ಕೈಗೊಳ್ಳಲು ಅಸಹಾಯಕತೆಯನ್ನು ವ್ಯಕ್ತಪಡಿಸಿದರೆ, ರಾಜ್ಯದ ಆಡಳಿತದಿಂದ ಈ ಅಕ್ರಮ ಚಟುವಟಿಕೆಯನ್ನು ನಿಯಂತ್ರಿಸುವ ನಿರೀಕ್ಷೆ ಇಡಲು ಸಾಧ್ಯವಿಲ್ಲ ಎಂದು ಜನವರಿ 31ರ ಆದೇಶದಲ್ಲಿ ತಿಳಿಸಿತ್ತು.

ಮರಳು ತೆಗೆಯಲು ಟೆಂಡರ್‌ಗಳನ್ನು ಆಹ್ವಾನಿಸಿದ್ದರೂ ಅವುಗಳ ತೆರವು ಆಗಿಲ್ಲ ಎಂಬ ಮಾಧ್ಯಮಗಳ ವರದಿಯನ್ನೂ ಗಮನಿಸಿರುವ ಪೀಠ, ಈ ದೊಡ್ಡ ಹಣದ ವ್ಯವಹಾರದಲ್ಲಿ ಅನೇಕ ‘ದೊಡ್ಡ ಮೀನುಗಳು’ ಭಾಗಿಯಾಗಿದ್ದು, ಗಣಿಗಾರಿಕೆಯನ್ನು ಕಾನೂನುಬದ್ಧಗೊಳಿಸಲು ಆಸಕ್ತಿ ತೋರಿಸುತ್ತಿಲ್ಲ ಎಂದು ಹೇಳಿತ್ತು. ಇದಲ್ಲದೆ, ಕೃಷ್ಣಾ ನದಿ ತಟ ಪ್ರದೇಶದಲ್ಲಿ ರಾತ್ರಿ ವೇಳೆ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬ ವರದಿಗಳು, ಧೂಳು ಬೆಳೆಗಳ ಮೇಲೆ ಕುಳಿತು ರೈತರಿಗೆ ಹಾನಿ ಉಂಟಾಗುತ್ತಿದೆ ಎಂಬ ದೂರುಗಳು ಸೇರಿದಂತೆ ಹಲವು ವಿಷಯಗಳನ್ನು ಪೀಠ ಉಲ್ಲೇಖಿಸಿದೆ. ರಾಯಚೂರು ಜಿಲ್ಲೆಯ ಮಹಿಳಾ ಶಾಸಕಿ ಕರೇಮ್ಮ ಜಿ. ನಾಯಕ್ ಅವರು ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತು ಪ್ರಶ್ನೆ ಎತ್ತಿದ ಬಳಿಕ ಮರಳು ಮಾಫಿಯಾದಿಂದ ಜೀವ ಬೆದರಿಕೆ ಬಂದಿರುವುದಾಗಿ ಹೇಳಿದ ವರದಿಗಳನ್ನೂ ನ್ಯಾಯಪೀಠ ತನ್ನ ಆದೇಶದಲ್ಲಿ ಪ್ರಸ್ತಾಪಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ