BMTC: ಶಾಲೆ ಆರಂಭವಾಗಲಿರುವ 9-12ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

Karnataka School Reopen: ಶಾಲಾ ಕಾಲೇಜಿನ ಐಡಿ ಕಾರ್ಡ್ ತೋರಿಸಿಯೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ.

BMTC: ಶಾಲೆ ಆರಂಭವಾಗಲಿರುವ 9-12ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on:Aug 21, 2021 | 3:08 PM

ಬೆಂಗಳೂರು: ಆಗಸ್ಟ್ 23, ಸೋಮವಾರದಿಂದ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ- ಕಾಲೇಜು ಆರಂಭವಾಗಲಿರುವ (Karnataka School Reopen) ಕಾರಣ ಬಿಎಂಟಿಸಿ ಬಸ್​ಗಳಲ್ಲಿ (BMTC Bus) ವಿದ್ಯಾರ್ಥಿಗಳು ವಾಸಸ್ಥಳದಿಂದ ಶಾಲಾ- ಕಾಲೇಜಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. 2020-21 ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸ್ ಮತ್ತು ಈ ವರ್ಷದ ಶೈಕ್ಷಣಿಕ ದಾಖಲಾತಿ ಶುಲ್ಕ ಕಟ್ಟಿರುವ ರಶೀದಿ ತೋರಿಸಿ ವಿದ್ಯಾರ್ಥಿಗಳು ಬಿಎಂಟಿಸಿ ವ್ಯಾಪ್ತಿಯ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಅಥವಾ ಶಾಲಾ ಕಾಲೇಜಿನ ಐಡಿ ಕಾರ್ಡ್ ತೋರಿಸಿಯೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಿಎಂಟಿಸಿಯ ಮುಂದಿನ ಆದೇಶದವರೆಗೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಒದಗಿಸಲಾಗಿದೆ.

ವಿದ್ಯಾರ್ಥಿಗಳು ಪಾಲಿಸಬೇಕಾಗಿರುವ ಸಂಗತಿಗಳೇನು? ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಈಗಾಗಲೇ ಮಾರ್ಗಸೂಚಿ ನೀಡಿದ್ದು, ಹೇಗೆಲ್ಲಾ ತಯಾರಿ ಮಾಡಿಕೊಳ್ಳಬೇಕು? ಯಾವೆಲ್ಲಾ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದೆ. ಅದರಂತೆ ಪ್ರಮುಖ ನಿಯಮಗಳು ಇಂತಿವೆ:

1. ಶಾಲೆಯಲ್ಲಿ ಎರಡಕ್ಕಿಂತ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದರೆ ಒಂದು ವಾರ ಶಾಲೆ ಸೀಲ್​ಡೌನ್ 2. ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ಪ್ರಮಾಣ ಇರುವ ಜಿಲ್ಲೆಗಳಲ್ಲಿ ಶಾಲೆ ತೆರೆಯುವಂತಿಲ್ಲ 3. ಕೊರೊನಾ ಲಕ್ಷಣ ಕಂಡು ಬರುವ ಮಗುವನ್ನು ಶಾಲೆಗೆ ಕಳುಹಿಸುವಂತಿಲ್ಲ 4. ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ 5. ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆದಿರಬೇಕು 6. ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಶಾಲೆಗೆ ಬರಬೇಕು 7. ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ 72 ಗಂಟೆಗಳ ಅಂತರದಲ್ಲಿ ಪಡೆದ ಕೊವಿಡ್ ನೆಗೆಟಿವ್ ವರದಿ ಸಲ್ಲಿಸಬೇಕು 8. ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಇಲ್ಲ 9. ಆನ್ ಲೈನ್ ಹಾಗೂ ಆಫ್ ಲೈನ್ ಎರಡಕ್ಕೂ ಅವಕಾಶ ಸಾಧ್ಯತೆ 10. ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಕಲಿಕೆಗೆ ಅವಕಾಶ

ಶಾಲಾ ಪ್ರಾರಂಭದ ಪೂರ್ವದಲ್ಲಿ ಅನುಸರಿಸಬೇಕಾದ ಕ್ರಮಗಳು ಸುಮಾರು ಒಂದು ವರ್ಷದಿಂದ ಶಾಲೆ ತೆರೆಯದ ಕಾರಣ ಶಾಲಾರಂಭಕ್ಕೂ ಮೊದಲು ಇಡಿ ಶಾಲೆ ಸ್ವಚ್ಛಗೊಳಿಸಬೇಕು. ಶಾಲೆಯ ಇಡಿ ಅವರಣ ಸ್ಯಾನಿಟೈಸ್ ಮಾಡಬೇಕು. ಕುಡಿಯುವ ನೀರಿನ ಸೌಲಭ್ಯ ಮಾಡಬೇಕು. ಅದನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಶಾಲೆಯ ಶೌಚಾಲಯ ಶುಚಿಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಬೇಕು. ಶಾಲಾ ಕೊಠಡಿ, ಅಡುಗೆ, ದಾಸ್ತಾನು ಕೊಠಡಿ ಎಲ್ಲವನ್ನು ಶುಚಿಗೊಳಿಸಬೇಕು.

ಶಾಲಾ ವಾಹನಗಳಲ್ಲಿಯೂ ಸಹ ಸಾಮಾಜಿಕ ಅಂತರ ಕಾಪಾಡಬೇಕು. ಕೊಠಡಿಗಳಲ್ಲಿ ಎಲ್ಲ ವಸ್ತುಗಳನ್ನು ಸ್ಯಾನಿಟೈಸ್ ಮಾಡಬೇಕು. ಮಕ್ಕಳ ಆಗಮನ ಮತ್ತು ನಿರ್ಗಮನದ ದಾರಿ ಪ್ರತ್ಯೇಕವಾಗಿ ಮಾಡಬೇಕು. ಶಾಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಲು ಸೂಕ್ತ ಕ್ರಮಗಳನ್ನು ಅನುಸರಿಸಬೇಕು. ಶಾಲೆಯ ಅವರಣದಲ್ಲಿ ಬಾಕ್ಸ್ ನಿರ್ಮಾಣ ಮಾಡಬೇಕು. ವಿದ್ಯಾರ್ಥಿಗಳು ಸಾಮಾಜಿಕ ಅಂತರದೊಂದಿಗೆ ಶಾಲೆ ಪ್ರವೇಶ ಮಾಡಬೇಕು. ಶಾಲಾ ಪ್ರವೇಶಕ್ಕೆ ಮೊದಲು ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು.

ವಿದ್ಯಾರ್ಥಿಗಳೇ ನೆನಪಿಡಿ ಸಾಮಾಜಿಕ ಅಂತರ ಕಾಪಾಡುವುದರ ಜೊತೆ ಆಗಾಗ ಕೈ ತೊಳೆಯಬೇಕು. ಯೋಗ, ಪ್ರಾಣಾಯಾಮ, ವ್ಯಾಯಾಮವನ್ನು ರೂಢಿ ಮಾಡಿಕೊಳ್ಳಬೇಕು. ಮನೆಯಿಂದಲೇ ಊಟದ ಡಬ್ಬಿ ಹಾಗೂ ಕಾಯಿಸಿ ಆರಿಸಿದ ನೀರನ್ನು ತರಬೇಕು. ಬಿಸಿಯಾದ ಆಹಾರ ಪದಾರ್ಥ ಸೇವಿಸಬೇಕು. ಪೆನ್, ನೋಟ್ ಬುಕ್, ನೀರಿನ ಬಾಟಲ್ ಸೇರಿದಂತೆ ಯಾವುದೇ ವಸ್ತುವನ್ನು ಸಹಪಾಠಿಗಳೊಂದಿಗೆ ಹಂಚಿಕೊಳ್ಳಬಾರದು.

ಇದನ್ನೂ ಓದಿ: 

Afghanistan Crisis: ತಾಲಿಬಾನ್ ಗ್ಯಾಂಗ್​ ಜೊತೆ ಕಾಣಿಸಿಕೊಂಡ ಅಫ್ಘಾನಿಸ್ತಾನ್ ಕ್ರಿಕೆಟಿಗ

Afghanistan Photos: ಅಫ್ಘಾನಿಸ್ತಾನದಲ್ಲಿ ಹೆತ್ತವರಿಗೂ ಭಾರವಾದ ಮಕ್ಕಳು; ಬಂದೂಕಿನ ಸದ್ದಿನಲ್ಲಿ ಮಕ್ಕಳ ಆಕ್ರಂದನ ಕೇಳುವವರಾರು?

(Karnataka School Reopen BMTC bus free service for students in grades 9 to 12 starting school)

Published On - 2:53 pm, Sat, 21 August 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ