SSLC Time Table: ಎಸ್ಎಸ್ಎಲ್ಸಿ ಮುಖ್ಯಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ

ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಏಪ್ರಿಲ್ 1ರಂದು ಅರ್ಥ ಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4ರಂದು ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6ರಂದು ಸಮಾಜ ವಿಜ್ಞಾನ.

SSLC Time Table: ಎಸ್ಎಸ್ಎಲ್ಸಿ ಮುಖ್ಯಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jan 25, 2022 | 6:45 PM

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಮುಖ್ಯಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತೀರ್ಮಾನಿಸಿದೆ.

ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಏಪ್ರಿಲ್ 1ರಂದು ಅರ್ಥ ಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4ರಂದು ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6ರಂದು ಸಮಾಜ ವಿಜ್ಞಾನ, ಏ.8ರಂದು ತೃತೀಯ ಭಾಷೆ, ಏ.11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಪರೀಕ್ಷಾ ಸಮಯ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗಿದೆ.

ಮಹಾಮಾರಿ ಕೊರೊನಾ ನಡುವೆಯೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆಸುವುದಕ್ಕೆ ಈಗಾಗಲೇ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಸದ್ಯ ಈಗ ಮುಖ್ಯಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದರಂತೆ ಮಾರ್ಚ್ 28ರಿಂದ ಪರೀಕ್ಷೆ ಆರಂಭವಾಗಿ ಏಪ್ರಿಲ್ 11ರಂದು ಅಂತ್ಯಗೊಳ್ಳಲಿದೆ.

ದ್ವೀತಿಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪದವಿ ಪೂರ್ವ ಶಿಕ್ಷಣ ಇಲಾಖೆ 2021-22 ನೇ ಸಾಲಿನ ದ್ವೀತಿಯ ಪಿಯುಸಿಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆ ಪ್ರಕಾರ ಏಪ್ರಿಲ್ 16ರಿಂದ ಮೇ 4ರವರೆಗೆ ಪಿಯು ವಾರ್ಷಿಕ ಪರೀಕ್ಷೆ  ನಡೆಯಲಿದೆ. ಏಪ್ರಿಲ್​ 14 ಗಣಿತ, ಏಪ್ರಿಲ್​ 18 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಏ.20ರಂದು ಇತಿಹಾಸ, ಭೌತಶಾಸ್ತ್ರ, ಏಪ್ರಿಲ್ 22 ತರ್ಕಶಾಸ್ತ್ರ, ಏ.23ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಏ.25 ಅರ್ಥಶಾಸ್ತ್ರ ಪರೀಕ್ಷೆ ನಡೆಲಿದೆ.

ಇನ್ನೂ ಏ.26ರಂದು ಹಿಂದಿ, ಏಪ್ರಿಲ್​​ 28 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಏ.29 ಕನ್ನಡ, ಏ.30ರಂದು ಸಮಾಜಶಾಸ್ತ್ರ, ಕಂಪ್ಯೂಟರ್​​ ಸೈನ್ಸ್​, ಮೇ 2ರಂದು ಭೂಗೋಳ ಶಾಸ್ತ್ರ ಹಾಗೂ ಜೀವಶಾಸ್ತ್ರ ಪರೀಕ್ಷೆ, ಮೇ 4ರಂದು ಇಂಗ್ಲಿಷ್​​ ವಿಷಯದ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಯೇ ಅಂತಿಮವಾಗುವ ಸಾಧ್ಯತೆ!

Published On - 6:28 pm, Tue, 25 January 22

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ