AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಐಆರ್ ಬಗ್ಗೆ ಇನ್ನೂ ಗೊಂದಲ ಇದೆಯಾ? 1950 ಸಹಾಯವಾಣಿಗೆ ಕರೆ ಮಾಡಲು ಮಹೇಶ್ವರ್ ರಾವ್ ಸೂಚನೆ

ಕರ್ನಾಟಕದಲ್ಲಿ ಎಸ್​ಐಆರ್ ಪ್ರಕ್ರಿಯೆ ಅಂತಿಮ ಹಂತ ತಲುಪಿರುವ ಬೆನ್ನಲ್ಲೇ ಮತದಾರರ ಗೊಂದಲಗಳಿಗೆ ಪರಿಹಾರ ಕಲ್ಪಿಸಲು 1950 ಹೆಲ್ಪ್‌ಲೈನ್ ಬಳಸುವಂತೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಎಂ. ಮಹೇಶ್ವರ್ ರಾವ್ ಸೂಚಿಸಿದ್ದಾರೆ. ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನೂ ಅವರು ನೀಡಿದ್ದಾರೆ.

ಎಸ್​ಐಆರ್ ಬಗ್ಗೆ ಇನ್ನೂ ಗೊಂದಲ ಇದೆಯಾ? 1950 ಸಹಾಯವಾಣಿಗೆ ಕರೆ ಮಾಡಲು ಮಹೇಶ್ವರ್ ರಾವ್ ಸೂಚನೆ
ಎಸ್​ಐಆರ್ ಅಂತಿಮ ಹಂತ: ಸಿಬ್ಬಂದಿಗೆ ಹೆಚ್ಚಿದ ಒತ್ತಡ (ಸಾಂದರ್ಭಿಕ ಚಿತ್ರ)Image Credit source: tv9
ಗಣಪತಿ ಶರ್ಮಾ
|

Updated on:Sep 18, 2026 | 11:10 AM

Share

ಮುಖ್ಯಾಂಶಗಳು

  • ಎಸ್​ಐಆರ್ ಗೊಂದಲಕ್ಕೆ 1950 ಹೆಲ್ಪ್‌ಲೈನ್‌ಗೆ ಕರೆ ಮಾಡಿ
  • ಅರ್ಹ ಮತದಾರರು ಹೊರಗುಳಿಯದಂತೆ ಮಹೇಶ್ವರ್ ರಾವ್ ಸೂಚನೆ
  • ಸೆಪ್ಟೆಂಬರ್ 23ಕ್ಕೆ ಹಕ್ಕು ಆಕ್ಷೇಪಣೆ ಸಲ್ಲಿಕೆ ಅಂತ್ಯ

ಬೆಂಗಳೂರು, ಸೆಪ್ಟೆಂಬರ್ 18: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಸಾರ್ವಜನಿಕರಿಗೆ ಯಾವುದೇ ಮಾಹಿತಿ, ಗೊಂದಲ ಅಥವಾ ಸಮಸ್ಯೆಗಳಿದ್ದರೆ 1950 ಹೆಲ್ಪ್‌ಲೈನ್‌ಗೆ ಕರೆ ಮಾಡುವಂತೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಸೂಚಿಸಿದ್ದಾರೆ. ಎಸ್​ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಮಹೇಶ್ವರ್ ರಾವ್, ಸಾರ್ವಜನಿಕರಿಂದ ಬರುವ ದೂರುಗಳನ್ನು ದಾಖಲಿಸಿಕೊಂಡು ಸೂಕ್ತ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದರು.

ತಮ್ಮ ವ್ಯಾಪ್ತಿಯಲ್ಲಿರುವ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಸಹಾಯಕ ಜಿಲ್ಲಾ ಚುನಾವಣಾಧಿಕಾರಿಗಳು (ADEO) ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು. ಎಸ್ಐಆರ್ ಪ್ರಕ್ರಿಯೆಯನ್ನು ನಿಯಮಾನುಸಾರ ಹಾಗೂ ಜವಾಬ್ದಾರಿಯಿಂದ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಅಧಿಕಾರಿಗಳೊಂದಿಗೆ ಸಹಕರಿಸಲು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮನವಿ

ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಚುನಾವಣಾ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಮಹೇಶ್ವರ್ ರಾವ್ ಮನವಿ ಮಾಡಿದರು. ಪಾರದರ್ಶಕ ಹಾಗೂ ಪರಿಣಾಮಕಾರಿ ಎಸ್​ಐಆರ್ ಪ್ರಕ್ರಿಯೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಎಸ್​ಐಆರ್ ಅಂತಿಮ ಹಂತ: ಸಿಬ್ಬಂದಿಗೆ ಹೆಚ್ಚಿದ ಒತ್ತಡ

ಕರ್ನಾಟಕದಲ್ಲಿ ಎಸ್​ಐಆರ್ ಪ್ರಕ್ರಿಯೆಯ ಅಂತಿಮ ಹಂತಕ್ಕೆ ಸಿದ್ಧತೆ ನಡೆಯುತ್ತಿದ್ದು, ಕರಡು ಮತದಾರರ ಪಟ್ಟಿಯಿಂದ 1.07 ಕೋಟಿ ಮತದಾರರನ್ನು ಹೊರಗಿಡಲಾಗಿದೆ. ವಿಚಾರಣೆ ಪ್ರಕ್ರಿಯೆಯನ್ನು ಸರಳಗೊಳಿಸಲಾಗುತ್ತಿದ್ದರೂ, ಹೊಸ ಮತದಾರರ ನೋಂದಣಿ ನಿಧಾನಗತಿಯಲ್ಲಿ ಸಾಗುತ್ತಿರುವುದು ಗಮನ ಸೆಳೆದಿದೆ. ಎಸ್​ಐಆರ್ ಜೊತೆಗೆ ಸರ್ಕಾರದ ‘ಪ್ರಜಾ ಸೇವಾ ಅಭಿಯಾನ’ ಸೇರಿದಂತೆ ವಿವಿಧ ನಾಗರಿಕ ಸೇವಾ ಕಾರ್ಯಕ್ರಮಗಳ ಜವಾಬ್ದಾರಿಯೂ ಇರುವುದರಿಂದ ಕಂದಾಯ ಇಲಾಖೆಯ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಅಧಿಕಾರಿಗಳು ಹಾಗೂ ನಾಗರಿಕ ಸಮಾಜದ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ.

ಸೆಪ್ಟೆಂಬರ್ 19 ಮತ್ತು 20ರಂದು ನಡೆಯಲಿರುವ ಹೊಸ ಮತದಾರರ ನೋಂದಣಿಯ ವಿಶೇಷ ಅಭಿಯಾನ ಮಹತ್ವದ್ದಾಗಿದೆ. ಮೊದಲ ಬಾರಿಗೆ ಮತದಾರರಾಗುವವರು ಹಾಗೂ ಗೈರುಹಾಜರಿ ಅಥವಾ ಸ್ಥಳಾಂತರದ ಕಾರಣ ಕರಡು ಪಟ್ಟಿಯಿಂದ ಹೊರಗುಳಿದವರು ಈ ಸಂದರ್ಭದಲ್ಲಿ ಫಾರ್ಮ್-6 ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಸೆಪ್ಟೆಂಬರ್ 23ರಂದು ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅಂತಿಮ ಗಡುವು ಇರುವ ಹಿನ್ನೆಲೆಯಲ್ಲಿ ಎಸ್​ಐಆರ್ ಸಂಬಂಧಿತ ಕಾರ್ಯಗಳಿಗೆ ಆದ್ಯತೆ ನೀಡುವಂತೆ ನಾಗರಿಕ ಸಮಾಜದ ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ: ಹಿರಿಯ ನಾಗರಿಕರು, ಅಸ್ವಸ್ಥರಿಗೆ ಚುನಾವಣಾ ಆಯೋಗದಿಂದ ಬಿಗ್ ರಿಲೀಫ್: ಮನೆ ಬಾಗಿಲಲ್ಲೇ ವಿಚಾರಣೆಗೆ ಅವಕಾಶ!

ಎಸ್​ಐಆರ್ ಪ್ರಕ್ರಿಯೆಗಾಗಿ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಒಳಗೊಂಡಂತೆ 60,923 ಬೂತ್ ಮಟ್ಟದ ಅಧಿಕಾರಿಗಳು (BLO), 224 ಚುನಾವಣಾ ನೋಂದಣಿ ಅಧಿಕಾರಿಗಳು (ERO) ಹಾಗೂ 4,262 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು (AERO) ಕಾರ್ಯನಿರ್ವಹಿಸುತ್ತಿದ್ದಾರೆ. ಸಹಾಯಕ ಆಯುಕ್ತರು, ತಹಶೀಲ್ದಾರ್‌ಗಳು, ಉಪ ತಹಶೀಲ್ದಾರ್‌ಗಳು, ಗ್ರೇಡ್-2 ತಹಶೀಲ್ದಾರ್‌ಗಳು, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳವರೆಗೆ ಕಂದಾಯ ಇಲಾಖೆಯ ಸಿಬ್ಬಂದಿ ಎಸ್​ಐಆರ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:28 am, Fri, 18 September 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’