AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಶನಿವಾರ ಮುಂಜಾನೆ ತಡವಾಗಿ ಆರಂಭವಾಗಲಿವೆ ತರಗತಿಗಳು; ಏಕರೂಪದ ಶಾಲಾ ಅವಧಿ ಜಾರಿ

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಶನಿವಾರದ ಅವಧಿಯನ್ನು ಏಕರೂಪಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಶನಿವಾರದ ತರಗತಿಗಳು ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ ಮಾತ್ರ ನಡೆಯಲಿವೆ. ಈ ಹೊಸ ನಿಯಮದಿಂದ ಪೋಷಕರ ಗೊಂದಲ ನಿವಾರಣೆಯಾಗಲಿದ್ದು, ಶಿಕ್ಷಕರು ಆನ್‌ಲೈನ್ ಹಾಜರಾತಿ ದಾಖಲಿಸಲು ಸಹಕಾರಿಯಾಗಲಿದೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಶನಿವಾರ ಮುಂಜಾನೆ ತಡವಾಗಿ ಆರಂಭವಾಗಲಿವೆ ತರಗತಿಗಳು; ಏಕರೂಪದ ಶಾಲಾ ಅವಧಿ ಜಾರಿ
ಸಾಂದರ್ಭಿಕ ಚಿತ್ರImage Credit source: gettyimages.com
ವಿನಯ್​ ಕಾಶಪ್ಪನವರ್​
| Edited By: |

Updated on: Jun 27, 2026 | 11:04 AM

Share

ಮುಖ್ಯಾಂಶಗಳು

  • ಶನಿವಾರದ ಶಾಲಾ ಅವಧಿಯನ್ನು ಏಕರೂಪಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
  • ಇನ್ಮುಂದೆ ಶನಿವಾರ ಬೆಳಗ್ಗೆ 8:30 ರಿಂದ 12:30 ರವರೆಗೆ ಶಾಲೆ ನಡೆಯಲಿದೆ.
  • ಹೊಸ ನಿಯಮವು ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಅನ್ವಯಿಸುತ್ತದೆ.

ಬೆಂಗಳೂರು, ಜೂನ್ 27: ರಾಜ್ಯದ ಶಾಲಾ ಶಿಕ್ಷಣ (Education) ಮತ್ತು ಸಾಕ್ಷರತಾ ಇಲಾಖೆಯು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಿಗೆ ಬಿಗ್ ರಿಲೀಫ್ ನೀಡಿದ್ದು, ಶನಿವಾರದ ಶಾಲಾ ಅವಧಿಯನ್ನು ಏಕರೂಪಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ಅನ್ವಯವಾಗುವಂತೆ ಶನಿವಾರ ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ ಒಟ್ಟು 4 ಗಂಟೆಗಳ ಕಾಲ ಮಾತ್ರ ತರಗತಿಗಳನ್ನು ನಡೆಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಗೊಂದಲಕ್ಕೆ ತೆರೆ ಎಳೆದ ಇಲಾಖೆ

ಇದುವರೆಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಶನಿವಾರದ ಶಾಲಾ ಅವಧಿ ಪ್ರದೇಶವಾರು ವಿಭಿನ್ನವಾಗಿತ್ತು. ಕೆಲವು ಕಡೆಗಳಲ್ಲಿ ಬೆಳಗ್ಗೆ 7:30 ರಿಂದ 11:30ರವರೆಗೆ ತರಗತಿಗಳು ನಡೆದರೆ, ಇನ್ನು ಕೆಲವು ಶಾಲೆಗಳಲ್ಲಿ ಬೆಳಗ್ಗೆ 8:00 ರಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಸಮಯ ನಿಗದಿಪಡಿಸಲಾಗಿತ್ತು. ಈ ಭಿನ್ನತೆಯಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಸಮಯದಲ್ಲಿ ತೀವ್ರ ಗೊಂದಲ ಎದುರಿಸುತ್ತಿದ್ದರು. ಈಗ ಇಲಾಖೆಯು ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಕಡ್ಡಾಯವಾಗಿ ಹೊಸ ಸಮಯವನ್ನೇ ಪಾಲಿಸಬೇಕು ಎಂದು ಆದೇಶಿಸಿದೆ.

ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಅನುಕೂಲ

ಹೊಸ ನಿಯಮದಿಂದಾಗಿ ವಿದ್ಯಾರ್ಥಿಗಳು ಇನ್ಮುಂದೆ ಶನಿವಾರದ ದಿನದಂದು ಬೆಳ್ಳಂಬೆಳಗ್ಗೆ ಏಳುವ ಅವಸರ ತಪ್ಪಿದಂತಾಗಿದೆ. ಪೋಷಕರಿಗೂ ಸಹ ನಿಗದಿತ ಸಮಯದ ಕುರಿತು ಸ್ಪಷ್ಟತೆ ಸಿಕ್ಕಿರುವುದರಿಂದ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಶಿಕ್ಷಕರಿಗೂ ಈ ಆದೇಶದಿಂದ ದೊಡ್ಡ ಅನುಕೂಲವಾಗಲಿದೆ. ರಾಜ್ಯ ಸರ್ಕಾರವು ಈಗಾಗಲೇ ಕಡ್ಡಾಯಗೊಳಿಸಿರುವ ಶಿಕ್ಷಕರ ಆನ್‌ಲೈನ್ ಹಾಜರಾತಿ ವ್ಯವಸ್ಥೆಯನ್ನು ಸಕಾಲದಲ್ಲಿ ಅಪ್‌ಡೇಟ್ ಮಾಡಲು ಈ ಏಕರೂಪದ ಸಮಯ ಸಹಕಾರಿಯಾಗಲಿದೆ. ಇಡೀ ರಾಜ್ಯದಲ್ಲಿ ಒಂದೇ ಸಮಯದಲ್ಲಿ ಶಾಲೆ ಆರಂಭವಾಗುವುದರಿಂದ ಶಿಕ್ಷಕರು ಯಾವುದೇ ಗೊಂದಲವಿಲ್ಲದೆ ನಿಖರವಾಗಿ ಆನ್‌ಲೈನ್ ಹಾಜರಾತಿ ದಾಖಲಿಸಲು ಸಾಧ್ಯವಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ ನೀಟ್ ಸೋಲು ಜೀವನದ ಅಂತ್ಯವಲ್ಲ; ರೋಲ್ಸ್ ರಾಯ್ಸ್‌ನಲ್ಲಿ 72.3 ಲಕ್ಷ ರೂ. ಪ್ಯಾಕೇಜ್ ಪಡೆದು ಇತಿಹಾಸ ಸೃಷ್ಟಿಸಿದ 20ರ ಹರೆಯದ ರಿತುಪರ್ಣಾ!

ರಾಜ್ಯದ ಪ್ರತಿಯೊಂದು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಮಂಡಳಿಗಳು ಈ ಹೊಸ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ತರಬೇಕು ಮತ್ತು ಶನಿವಾರ ಬೆಳಗ್ಗೆ 8:30 ರಿಂದ 12:30 ರ ಸಮಯವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಇಲಾಖೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!