AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗ್ರಾಮಾಂತರದಲ್ಲಿ ನೂತನ ಕಾರಾಗೃಹ ನಿರ್ಮಾಣ, ನೂತನ ಕೆಎಸ್​ಆರ್​ಪಿ ಮಹಿಳಾ ಘಟಕ ಆರಂಭಕ್ಕೆ ಅಸ್ತು

Karnataka Budget 2022 Updates: ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ. ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ

ಬೆಂಗಳೂರು ಗ್ರಾಮಾಂತರದಲ್ಲಿ ನೂತನ ಕಾರಾಗೃಹ ನಿರ್ಮಾಣ, ನೂತನ ಕೆಎಸ್​ಆರ್​ಪಿ ಮಹಿಳಾ ಘಟಕ ಆರಂಭಕ್ಕೆ ಅಸ್ತು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಾಂದರ್ಭಿಕ ಚಿತ್ರ)
TV9 Web
| Edited By: ಸಾಧು ಶ್ರೀನಾಥ್​|

Updated on:Mar 04, 2022 | 1:43 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ತಮ್ಮಚೊಚ್ಚಲ ಬಜೆಟ್​ ಮಂಡನೆ ಮಾಡುತ್ತಿದ್ದಾರೆ. ಇದರಲ್ಲಿ ಪೊಲೀಸ್ ಗೃಹ ಯೋಜನೆಗಾಗಿ 2ನೇ ಹಂತದಲ್ಲಿ 250 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ತೆಗೆದಿರಿಸಲಾಗಿದೆ. ರಾಜ್ಯದಲ್ಲಿ ನೂತನ ಕೆಎಸ್​ಆರ್​ಪಿ (KSRP) ಮಹಿಳಾ ಕಂಪನಿ ಆರಂಭಕ್ಕೆ ಅಸ್ತು ಅನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ವಿಮಾನ ಮೊತ್ತ ಹೆಚ್ಚಳ ಮಾಡಲಾಗಿದೆ. 1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ದಾವಣಗೆರೆಯಲ್ಲಿ SDRF ಆರಂಭಕ್ಕೆ ಅಂಕಿತ ಹಾಕಲಾಗಿದೆ. ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ. ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ (CM Bommai Budget).

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ: ಇದರಲ್ಲಿ ಕೃಷಿ ಮತ್ತು ಕೃಷಿ ಪೂರಕ ಚಟುವಟಿಕೆಗೆ 33,700 ಕೋಟಿ ರೂಪಾಯಿ ಬಜೆಟ್​​ನಲ್ಲಿ ತೆಗೆದಿರಿಸಲಾಗಿದೆ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 68,479 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಆರ್ಥಿಕ ಅಭಿವೃದ್ಧಿ ಉತ್ತೇಜನಕ್ಕೆ 55, 657 ಕೋಟಿ ರೂಪಾಯಿ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂಪಾಯಿ (Bangalore Development). ಸಂಸ್ಕೃತಿ ಪರಂಪರೆ, ನೈಸರ್ಗಿಕ ಸಂಪನ್ಮೂಲ ರಕ್ಷಣೆಗೆ 3,102 ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ. ಆಡಳಿತ ಸುಧಾರಣೆ, ಸಾರ್ವಜನಿಕ ಸೇವೆಗೆ ₹ 56,710 ಕೋಟಿ ನಿಗದಿಪಡಿಸಲಾಗಿದೆ. ಮಹಿಳಾ ಸಬಲೀಕರಣ ಕ್ಷೇಮಾಭಿವೃದ್ಧಿಗೆ ₹ 43,188 ಕೋಟಿ ನೀಡಲಾಗಿದೆ. ಮಕ್ಕಳ ಅಭ್ಯುದಯಕ್ಕೆ 40,944 ಕೋಟಿ ರೂಪಾಯಿ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ

Also Read: Video: ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ನೋಡಲು ಬಂದ ಕುಟುಂಬದ ಸದಸ್ಯರು; ಸಿಎಂ ಪತ್ನಿ, ಮಗ, ಮಗಳು ವಿಧಾನಸೌಧಕ್ಕೆ

Also Read: Karnataka Budget 2022: ಆಶಾ ಕಾರ್ಯಕರ್ತರು, ಬಿಸಿಯೂಟ ತಯಾರಿಕರಿಗೆ ಗೌರವ ಧನ ಹೆಚ್ಚಳ

Published On - 1:23 pm, Fri, 4 March 22

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!