ಬೆಂಗಳೂರು ಗ್ರಾಮಾಂತರದಲ್ಲಿ ನೂತನ ಕಾರಾಗೃಹ ನಿರ್ಮಾಣ, ನೂತನ ಕೆಎಸ್​ಆರ್​ಪಿ ಮಹಿಳಾ ಘಟಕ ಆರಂಭಕ್ಕೆ ಅಸ್ತು

| Updated By: ಸಾಧು ಶ್ರೀನಾಥ್​

Updated on: Mar 04, 2022 | 1:43 PM

Karnataka Budget 2022 Updates: ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ. ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ

ಬೆಂಗಳೂರು ಗ್ರಾಮಾಂತರದಲ್ಲಿ ನೂತನ ಕಾರಾಗೃಹ ನಿರ್ಮಾಣ, ನೂತನ ಕೆಎಸ್​ಆರ್​ಪಿ ಮಹಿಳಾ ಘಟಕ ಆರಂಭಕ್ಕೆ ಅಸ್ತು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಾಂದರ್ಭಿಕ ಚಿತ್ರ)
Follow us on

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ತಮ್ಮಚೊಚ್ಚಲ ಬಜೆಟ್​ ಮಂಡನೆ ಮಾಡುತ್ತಿದ್ದಾರೆ. ಇದರಲ್ಲಿ ಪೊಲೀಸ್ ಗೃಹ ಯೋಜನೆಗಾಗಿ 2ನೇ ಹಂತದಲ್ಲಿ 250 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ತೆಗೆದಿರಿಸಲಾಗಿದೆ. ರಾಜ್ಯದಲ್ಲಿ ನೂತನ ಕೆಎಸ್​ಆರ್​ಪಿ (KSRP) ಮಹಿಳಾ ಕಂಪನಿ ಆರಂಭಕ್ಕೆ ಅಸ್ತು ಅನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ವಿಮಾನ ಮೊತ್ತ ಹೆಚ್ಚಳ ಮಾಡಲಾಗಿದೆ. 1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ದಾವಣಗೆರೆಯಲ್ಲಿ SDRF ಆರಂಭಕ್ಕೆ ಅಂಕಿತ ಹಾಕಲಾಗಿದೆ. ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ. ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ (CM Bommai Budget).

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ:
ಇದರಲ್ಲಿ ಕೃಷಿ ಮತ್ತು ಕೃಷಿ ಪೂರಕ ಚಟುವಟಿಕೆಗೆ 33,700 ಕೋಟಿ ರೂಪಾಯಿ ಬಜೆಟ್​​ನಲ್ಲಿ ತೆಗೆದಿರಿಸಲಾಗಿದೆ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 68,479 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಆರ್ಥಿಕ ಅಭಿವೃದ್ಧಿ ಉತ್ತೇಜನಕ್ಕೆ 55, 657 ಕೋಟಿ ರೂಪಾಯಿ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂಪಾಯಿ (Bangalore Development). ಸಂಸ್ಕೃತಿ ಪರಂಪರೆ, ನೈಸರ್ಗಿಕ ಸಂಪನ್ಮೂಲ ರಕ್ಷಣೆಗೆ 3,102 ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ. ಆಡಳಿತ ಸುಧಾರಣೆ, ಸಾರ್ವಜನಿಕ ಸೇವೆಗೆ ₹ 56,710 ಕೋಟಿ ನಿಗದಿಪಡಿಸಲಾಗಿದೆ. ಮಹಿಳಾ ಸಬಲೀಕರಣ ಕ್ಷೇಮಾಭಿವೃದ್ಧಿಗೆ ₹ 43,188 ಕೋಟಿ ನೀಡಲಾಗಿದೆ. ಮಕ್ಕಳ ಅಭ್ಯುದಯಕ್ಕೆ 40,944 ಕೋಟಿ ರೂಪಾಯಿ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ

Also Read:
Video: ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ನೋಡಲು ಬಂದ ಕುಟುಂಬದ ಸದಸ್ಯರು; ಸಿಎಂ ಪತ್ನಿ, ಮಗ, ಮಗಳು ವಿಧಾನಸೌಧಕ್ಕೆ

Also Read:
Karnataka Budget 2022: ಆಶಾ ಕಾರ್ಯಕರ್ತರು, ಬಿಸಿಯೂಟ ತಯಾರಿಕರಿಗೆ ಗೌರವ ಧನ ಹೆಚ್ಚಳ

Published On - 1:23 pm, Fri, 4 March 22