Haveri Mega Dairy: ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ ಮೆಗಾ ಡೈರಿ ಸ್ಥಾಪನೆ, ರಾಜ್ಯದಲ್ಲಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ

Karnataka Budget 2022 Updates: ರಾಜ್ಯದಲ್ಲಿ ಹೊಸದಾಗಿ 100 ಪಶು ಆಸ್ಪತ್ರೆಗಳ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೂ ಅಸ್ತು ಅಂದಿದೆ. ಹಾಲು ಉತ್ಪಾದಕರಿಗೆ ಸಾಲ ನೀಡುವ ಉದ್ದೇಶದೊಂದಿಗೆ 100 ಕೋಟಿ ರೂಪಾಯಿ ಷೇರು ಬಂಡವಾಳದಲ್ಲಿ ಇದು ಅಸ್ತಿತ್ವಕ್ಕೆ ಬರಲಿದೆ.

Haveri Mega Dairy: ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ ಮೆಗಾ ಡೈರಿ ಸ್ಥಾಪನೆ, ರಾಜ್ಯದಲ್ಲಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ
ಸಿಎಂ ಬೊಮ್ಮಾಯಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 12, 2022 | 8:25 PM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ತಮ್ಮ ಅಧಿಕಾರಾವಧಿಯ 9ನೇ ತಿಂಗಳಲ್ಲಿ ಚೊಚ್ಚಲ ಬಜೆಟ್​ ಮಂಡನೆ ಮಾಡಿದ್ದಾರೆ. ರಾಜ್ಯದಲ್ಲಿ ಹೊಸದಾಗಿ 100 ಪಶು ಆಸ್ಪತ್ರೆಗಳ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೂ ಅಸ್ತು ಅಂದಿದೆ. ಹಾಲು ಉತ್ಪಾದಕರಿಗೆ ಸಾಲ ನೀಡುವ ಉದ್ದೇಶದೊಂದಿಗೆ 100 ಕೋಟಿ ರೂಪಾಯಿ ಷೇರು ಬಂಡವಾಳದಲ್ಲಿ ಇದು ಅಸ್ತಿತ್ವಕ್ಕೆ ಬರಲಿದೆ. ರಾಜ್ಯದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ 100 ಗೋಶಾಲೆ ಆರಂಭಿಸಲಾಗುವುದು. ಗೋಶಾಲೆಗಳಲ್ಲಿನ ಗೋವುಗಳ ದತ್ತು ಪಡೆಯಲು ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ ನೀಡಲಾಗುವುದು. ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ ಮೆಗಾ ಡೈರಿ ಸ್ಥಾಪನೆ (Mega Milk Dairy at Haveri) ಮಾಡಲಾಗುವುದು. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಲಾಗುವುದು. ವಲಸೆ ಕುರಿಕಾರರ ಕುಟುಂಬಕ್ಕೆ ₹ 5 ಲಕ್ಷ ವಿಮಾ ಸೌಲಭ್ಯ ಒದಗಿಸಲಾಗುವುದು. ಆಳ ಸಮುದ್ರದಲ್ಲಿ ಮೀನುಗಾರಿಕೆ ಉತ್ತೇಜನಕ್ಕೆ ಮತ್ಸ್ಯ ಸಿರಿ ಯೋಜನೆ ಜಾರಿಗೆ. ‘ಮತ್ಸ್ಯ ಸಿರಿ’ ಯೋಜನೆಯಡಿ 100 ಆಳ ಸಮುದ್ರ ಮೀನುಗಾರಿಕಾ ಹಡಗುಗಳಿಗೆ ನೆರವು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕರ್ನಾಟಕದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಕರ್ನಾಟಕ ರಾಜ್ಯದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು. ಐಐಟಿ ಮಾದರಿಯಲ್ಲಿ ಕೆಐಟಿ ಸ್ಥಾಪನೆ ಮಾಡಲಾಗುವುದು. ಉನ್ನತ ಶಿಕ್ಷಣಕ್ಕೆ ಉಚಿತ ಆನ್​ಲೈನ್ ಕೋಚಿಂಗ್ ಯೋಜನೆ ನೀಡಲಾಗುವುದು ಎಂದು ಶಿಕ್ಷಣ ಕ್ಷೇತ್ರದ ವಿಶೇಷ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಇಂದು (ಮಾರ್ಚ್ 4) ಚೊಚ್ಚಲ ಕರ್ನಾಟಕ ಬಜೆಟ್​ ಮಂಡನೆ ಮಾಡುತ್ತಿದ್ದಾರೆ.

ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ ಮಾಡಲಾಗುವುದು. ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಲಾಗುವುದು. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.

ಯುವಜನ ಮತ್ತು ಕ್ರೀಡೆ: ಕುಸ್ತಿ ಕ್ರೀಡಾಪಟುಗಳಿಗೆ ನೀಡುತ್ತಿರುವ ಮಾಸಾಶನ 1000 ರೂಗಳಿಗೆ ಹೆಚ್ಚಳ ಯುವಕರ ಸ್ವ-ಉದ್ಯೋಗ, ಆರ್ಥಿಕ ಚಟುವಟಿಕೆ ಪ್ರೋತ್ಸಾಹಕ್ಕೆ ನಿರ್ಧಾರ ಮಾಡಲಾಗಿದೆ. ಪ್ರತೀ ಗ್ರಾ.ಪಂನಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸ್ವಸಹಾಯ ಗುಂಪು, ಜಿಲ್ಲಾ ಮಟ್ಟದಲ್ಲಿ ಕ್ರೀಡಾಂಗಣ ಉನ್ನತೀಕರಣಕ್ಕೆ 100 ಕೋಟಿ ರೂಪಾಯಿ ನೀಡಿಕೆ, ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳ ಉತ್ತೇಜನಕ್ಕೆ ಕ್ರೀಡಾ ಅಂಕಣ ಸ್ಥಾಪನೆ ಮಾಡಲಾಗುವುದು ಎಂದು ಹೇಳಲಾಗಿದೆ. ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 504 ಕೋಟಿ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುವುದು. ಸಾಹಸ ಕ್ರೀಡೆಗೆ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿ ನವೀಕರಣ ಮಾಡಲಾಗುವುದು ಹಾಗೂ ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ವಿವಿ ಗೇಮ್ಸ್‌ 2021 ಆಯೋಜನೆ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ.

ಕೇಂದ್ರದ ಪ್ರಾಯೋಜಕತ್ವದಲ್ಲಿ NSDF ಯೋಜನೆಅಡಿ ಕ್ರೀಡಾ ಅಕಾಡೆಮಿ ಸ್ಥಾಪನೆ ಮಾಡಲಾಗುವುದು. ಶಿವಮೊಗ್ಗದಲ್ಲಿ ಕ್ರೀಡಾ ಅಕಾಡೆಮಿ ಸ್ಥಾಪಿಸಲು 20 ಕೋಟಿ ರೂ ಅನುದಾನ ನೀಡಲಾಗುವುದು. ಅಮೃತ ಕ್ರೀಡಾ ದತ್ತು ಯೋಜನೆ ಅಡಿ ಒಟ್ಟು 75 ಕ್ರೀಡಾಪಟುಗಳಿಗೆ ನೆರವು ನೀಡಲಾಗುವುದು. 2024ರ ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್ ಗೆ 75 ಕ್ರೀಡಾಪಟುಗಳಿಗೆ ತರಬೇತಿ ನೀಡಲಾಗುವುದು. 75 ಕ್ರೀಡಾಪಟುಗಳನ್ನು ತಯಾರಿ ಮಾಡಲು 10 ಲಕ್ಷ ರೂಪಾಯಿ ಮೀಸಲು ಇಡಲಾಗುವುದು. ಅಲ್ಲದೆ, ಕುಸ್ತಿ ಕ್ರೀಡಾಪಟುಗಳಿಗೆ ನೀಡುತ್ತಿರುವ ಮಾಸಾಶನ 1000 ರೂಗಳಿಗೆ ಹೆಚ್ಚಳ ಮಾಡಿ ಘೋಷಿಸಲಾಗಿದೆ.

Published On - 2:55 pm, Fri, 4 March 22

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ