9ನೇ ತಿಂಗಳಲ್ಲಿ ಸಿಎಂ ಬೊಮ್ಮಾಯಿಯಿಂದ ಚೊಚ್ಚಲ ಬಜೆಟ್, ಹಸಿರು ಬೆಂಗಳೂರಿಗಾಗಿ ಎನ್​ಜಿಇಎಫ್ ಜಾಗದಲ್ಲಿ ಗ್ರೀನ್ ಎಕ್ಸ್‌ಪೋ ಸ್ಥಾಪನೆ

Karnataka Budget 2022 Updates: ನೆನೆಗುದಿಗೆ ಬಿದ್ದಿರುವ 73 ಕಿಮೀ ಉದ್ದದ ಫೆರಿಫೆರಲ್ ರಿಂಗ್ ರಸ್ತೆ 21,091 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. ಇನ್ನು ಬನಶಂಕರಿ ಜಂಕ್ಷನ್ ನಲ್ಲಿ 45 ಕೋಟಿ ರೂ ವೆಚ್ಚದಲ್ಲಿ ಸ್ಕೈ ವಾಕ್ ಬರಲಿದೆ. ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ ಅಭಿವೃದ್ಧಿ ಯೋಜನೆಯಡಿ ಯಲಹಂಕ ಬಳಿ ಜಾರಕಬಂಡೆ ಕಾವಲ್‌ನಲ್ಲಿ 350 ಎಕೆರೆಯ ಪಾರ್ಕ್ ಬರಲಿದೆ.

9ನೇ ತಿಂಗಳಲ್ಲಿ ಸಿಎಂ ಬೊಮ್ಮಾಯಿಯಿಂದ ಚೊಚ್ಚಲ ಬಜೆಟ್, ಹಸಿರು ಬೆಂಗಳೂರಿಗಾಗಿ ಎನ್​ಜಿಇಎಫ್ ಜಾಗದಲ್ಲಿ ಗ್ರೀನ್ ಎಕ್ಸ್‌ಪೋ ಸ್ಥಾಪನೆ
9ನೇ ತಿಂಗಳಲ್ಲಿ ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್, ಹಸಿರು ಬೆಂಗಳೂರಿಗಾಗಿ ಎನ್​ಜಿಇಎಫ್ ಜಾಗದಲ್ಲಿ ಗ್ರೀನ್ ಎಕ್ಸ್‌ಪೋ ಸ್ಥಾಪನೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 04, 2022 | 3:34 PM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ತಮ್ಮ ಚೊಚ್ಚಲ ಬಜೆಟ್​ ಮಂಡನೆ ಮಾಡುತ್ತಿದ್ದಾರೆ. ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ಆರಂಭಿಸಲಾಗುವುದು. ಬೆಂಗಳೂರಿನ ನಾಲ್ಕು ಭಾಗಗಳಲ್ಲೂ 500 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅಸ್ತಿತ್ವಕ್ಕೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ವಹಿಯಲ್ಲಿರುವ ಆರು ಲಕ್ಷಕ್ಕೂ ಹೆಚ್ಚು ಸ್ವತ್ತುಗಳನ್ನು ಎ ವಹಿಗೆ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು. ಸಿಂಗಾಪುರ ಮಾದರಿಯಲ್ಲಿ ಎನ್ ಜಿಇಎಫ್ ಗೆ (NGEF Green Expo) ಸೇರಿದ 105 ಎಕರೆಯಲ್ಲಿ ಸಿಂಗಾಪುರ್ ಮಾದರಿಯಲ್ಲಿ ಗ್ರೀನ್ ಎಕ್ಸ್ ಪೋ ನಿರ್ಮಾಣಕ್ಕೆ ಅಸ್ತು. ಗೋರೆಗುಂಟೆ ಪಾಳ್ಯ ಜಂಕ್ಷನ್ ನಲ್ಲಿ ಸಿಗ್ನಲ್ ಮುಕ್ತ ವಾಹನ ಸಂಚಾರಕ್ಕೆ ಗ್ರೇಡ್ ಸಪರೇಟರ್ ಮತ್ತು ಮೇಲ್ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ನೆನೆಗುದಿಗೆ ಬಿದ್ದಿರುವ 73 ಕಿಮೀ ಉದ್ದದ ಫೆರಿಫೆರಲ್ ರಿಂಗ್ ರಸ್ತೆ 21,091 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. ಇನ್ನು ಬನಶಂಕರಿ ಜಂಕ್ಷನ್ ನಲ್ಲಿ 45 ಕೋಟಿ ರೂ ವೆಚ್ಚದಲ್ಲಿ ಸ್ಕೈ ವಾಕ್ ಬರಲಿದೆ (Bangalore Development). ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ ಅಭಿವೃದ್ಧಿ ಯೋಜನೆಯಡಿ ಯಲಹಂಕ ಬಳಿ ಜಾರಕಬಂಡೆ ಕಾವಲ್‌ನಲ್ಲಿ 350 ಎಕೆರೆಯ ಪಾರ್ಕ್ ಬರಲಿದೆ (CM Bommai Budget).

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್​ ಮಂಡನೆ ಮಾಡುತ್ತಿದ್ದಾರೆ. ಇದರಲ್ಲಿ ಕೃಷಿ ಮತ್ತು ಕೃಷಿ ಪೂರಕ ಚಟುವಟಿಕೆಗೆ 33,700 ಕೋಟಿ ರೂಪಾಯಿ ಬಜೆಟ್​​ನಲ್ಲಿ ತೆಗೆದಿರಿಸಲಾಗಿದೆ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 68,479 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಆರ್ಥಿಕ ಅಭಿವೃದ್ಧಿ ಉತ್ತೇಜನಕ್ಕೆ 55, 657 ಕೋಟಿ ರೂಪಾಯಿ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂಪಾಯಿ. ಸಂಸ್ಕೃತಿ ಪರಂಪರೆ, ನೈಸರ್ಗಿಕ ಸಂಪನ್ಮೂಲ ರಕ್ಷಣೆಗೆ 3,102 ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ. ಆಡಳಿತ ಸುಧಾರಣೆ, ಸಾರ್ವಜನಿಕ ಸೇವೆಗೆ ₹ 56,710 ಕೋಟಿ ನಿಗದಿಪಡಿಸಲಾಗಿದೆ. ಮಹಿಳಾ ಸಬಲೀಕರಣ ಕ್ಷೇಮಾಭಿವೃದ್ಧಿಗೆ ₹ 43,188 ಕೋಟಿ ನೀಡಲಾಗಿದೆ. ಮಕ್ಕಳ ಅಭ್ಯುದಯಕ್ಕೆ 40,944 ಕೋಟಿ ರೂಪಾಯಿ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ನೂತನ ಕಾರಾಗೃಹ ನಿರ್ಮಾಣ ಇದರಲ್ಲಿ ಪೊಲೀಸ್ ಗೃಹ ಯೋಜನೆಗಾಗಿ 2ನೇ ಹಂತದಲ್ಲಿ 250 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ತೆಗೆದಿರಿಸಲಾಗಿದೆ. ರಾಜ್ಯದಲ್ಲಿ ನೂತನ ಕೆಎಸ್​ಆರ್​ಪಿ (KSRP) ಮಹಿಳಾ ಕಂಪನಿ ಆರಂಭಕ್ಕೆ ಅಸ್ತು ಅನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ವಿಮಾನ ಮೊತ್ತ ಹೆಚ್ಚಳ ಮಾಡಲಾಗಿದೆ. 1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ದಾವಣಗೆರೆಯಲ್ಲಿ SDRF ಆರಂಭಕ್ಕೆ ಅಂಕಿತ ಹಾಕಲಾಗಿದೆ. ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ. ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ.

Budget 2022 : GreenCity Bangaloreನಲ್ಲಿ ಲಾಲ್​ಬಾಗ್​ ರೀತಿ ಬೃಹತ್​ ವಾಜಪೇಯಿ ಪಾರ್ಕ್​​

Also Read: ಬೆಂಗಳೂರು ಗ್ರಾಮಾಂತರದಲ್ಲಿ ನೂತನ ಕಾರಾಗೃಹ ನಿರ್ಮಾಣ, ನೂತನ ಕೆಎಸ್​ಆರ್​ಪಿ ಮಹಿಳಾ ಘಟಕ ಆರಂಭಕ್ಕೆ ಅಸ್ತು

Also Read: Video: ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ನೋಡಲು ಬಂದ ಕುಟುಂಬದ ಸದಸ್ಯರು; ಸಿಎಂ ಪತ್ನಿ, ಮಗ, ಮಗಳು ವಿಧಾನಸೌಧಕ್ಕೆ

Published On - 2:30 pm, Fri, 4 March 22