AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಸ್ಟಿಂಗ್ ಆಪರೇಷನ್ ರಾಜ್ಯಪಾಲರ ಅಂಗಳಕ್ಕೆ: ಕಲ್ಲಹಳ್ಳಿ ಬರೆದ ಪತ್ರದ ವಿವರ ಇಲ್ಲಿದೆ

ರಾಜ್ಯ ರಾಜಕಾರಣದಲ್ಲಿ ನಡೆದ ಸ್ಟಿಂಗ್ ಆಪರೇಷನ್ ಕುರಿತು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಕಾರ್ಯಾಚರಣೆಯ ಹಿಂದಿನ ಸೂತ್ರಧಾರಿಗಳು, ಹಣಕಾಸು ನೆರವು, ಖಾಸಗಿ ಏಜೆನ್ಸಿಗಳ ಪಾತ್ರ ಹಾಗೂ ಯಾವುದೇ ಸಂಚು ಇದೆಯೇ ಎಂಬುದನ್ನು ನಿಷ್ಪಕ್ಷಪಾತ ತನಿಖೆಯಿಂದ ಪತ್ತೆಹಚ್ಚಲು ಮನವಿ ಮಾಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಸ್ಟಿಂಗ್ ಆಪರೇಷನ್ ರಾಜ್ಯಪಾಲರ ಅಂಗಳಕ್ಕೆ: ಕಲ್ಲಹಳ್ಳಿ ಬರೆದ ಪತ್ರದ ವಿವರ ಇಲ್ಲಿದೆ
ಸ್ಟಿಂಗ್ ಅಪರೇಷನ್Image Credit source: tv9 kannada
ಪ್ರದೀಪ್​ ಚಿಕ್ಕಾಟಿ
| Edited By: |

Updated on: Oct 09, 2026 | 4:06 PM

Share

ಮುಖ್ಯಾಂಶಗಳು

  • ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಅಪರೇಷನ್ ವಿಚಾರ
  • ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ
  • ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಮನವಿ

ಬೆಂಗಳೂರು, ಅಕ್ಟೋಬರ್​ 09: ರಾಜ್ಯ ರಾಜಕೀಯದಲ್ಲಿ ಸದ್ಯ ಸ್ಟಿಂಗ್ ಆಪರೇಷನ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಸ್ಟಿಂಗ್ ಆಪರೇಷನ್ ಆಗಬಹುದು ಎಚ್ಚರದಿಂದ ಇರಿ ಅಂತಾ ಕ್ಯಾಬಿನೆಟ್ ಸಭೆಯಲ್ಲೇ ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್​ ಕಿವಿಮಾತು ಹೇಳಿದ್ದರು. ಜೊತೆಗೆ ನನ್ನ ಮೇಲೆಯೇ ಟ್ರ್ಯಾಪ್‌ಗೆ ಯತ್ನ ನಡೆದಿದೆ ಅಂತಾ ಬಾಂಬ್ ಸಿಡಿಸಿದ್ದರು. ಸದ್ಯ ಈ ವಿಚಾರವಾಗಿ ಸಿಬಿಐ ತನಿಖೆಗೆ ನೀಡುವಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರಿಗೆ ಪತ್ರ ಬರೆಯುವ ಮೂಲಕ ಆಗ್ರಹಿಸಿದ್ದಾರೆ.

ಸಾರ್ವಜನಿಕ ವಲಯದಲ್ಲಿ ಚರ್ಚೆ ಮತ್ತು ಆತಂಕ

ಸದ್ಯ ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್, ಸ್ಟಿಂಗ್ ಆಪರೇಷನ್ ಮತ್ತು ರಾಜಕೀಯ ವ್ಯಕ್ತಿಗಳ ಖಾಸಗಿ ಸಂಭಾಷಣೆಗಳನ್ನು ರಹಸ್ಯವಾಗಿ ಚಿತ್ರೀಕರಿಸಿ ಸಾರ್ವಜನಿಕವಾಗಿ ಪ್ರಸಾರ ಮಾಡುವಂತಹ ಘಟನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಗಂಭೀರ ಚರ್ಚೆಗಳು ಮತ್ತು ಆತಂಕ ವ್ಯಕ್ತವಾಗುತ್ತಿವೆ.

ಇದನ್ನೂ ಓದಿ: ಸ್ಟಿಂಗ್ ಆಪರೇಷನ್ ವಿಡಿಯೋ ನನ್ನ ಮೊಬೈಲ್​​​ಗೂ ಬಂದಿದೆ: ಹೊಸ ಬಾಂಬ್ ಸಿಡಿಸಿದ ಅಶೋಕ್

ಸಿಎಂ ಡಿಕೆ ಶಿವಕುಮಾರ್​ ಸಚಿವ ಸಂಪುಟ ಸಭೆಯಲ್ಲಿ ಕೆಲವು ಸಚಿವರು ಮತ್ತು ರಾಜಕೀಯ ನಾಯಕರನ್ನು ಹನಿಟ್ರ್ಯಾಪ್ ಹಾಗೂ ಇತರ ವಿವಾದಗಳಲ್ಲಿ ಸಿಲುಕಿಸಲು ಖಾಸಗಿ ಏಜೆನ್ಸಿಗಳ ಮೂಲಕ ಸ್ಟಿಂಗ್ ಆಪರೇಷನ್ ನಡೆಸುವ ಪ್ರಯತ್ನಗಳ ಕುರಿತು ಎಚ್ಚರಿಕೆ ನೀಡಿರುವುದು ವರದಿಯಾಗಿದೆ. ಈ ಹೇಳಿಕೆಯ ನಿಖರ ವಿವರಗಳನ್ನು ಸಂಬಂಧಿತ ಅಧಿಕೃತ ದಾಖಲೆ ಅಥವಾ ವಿಶ್ವಾಸಾರ್ಹ ಸುದ್ದಿ ವರದಿಯ ಮೂಲಕ ಪರಿಶೀಲಿಸುವುದು ಅಗತ್ಯವಾಗಿದೆ.

LIVE TV

ಇಂತಹ ರಾಜಕೀಯ ಹಿನ್ನೆಲೆಯ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸ್ಪಿಂಗ್ ವಿಡಿಯೋಗಳ ಮೂಲ ಮತ್ತು ಅವುಗಳ ಹಿಂದೆ ಇರುವ ವ್ಯಕ್ತಿಗಳ ಪಾತ್ರವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡುವ ಅಗತ್ಯವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆಗೆ ಒತ್ತಾಯ 

ಸ್ಟಿಂಗ್​ ಆಪರೇಷನ್ ಯೋಜನೆ ರೂಪಿಸಿದವರು, ಖಾಸಗಿ ಏಜೆನ್ಸಿಗಳ ಸಂಭವನೀಯ ಪಾತ್ರ, ಹಣಕಾಸು ಮತ್ತು ತಾಂತ್ರಿಕ ನೆರವು ಒದಗಿಸಿದವರು ಹಾಗೂ ಇದರ ಹಿಂದೆ ಯಾವುದೇ ಪೂರ್ವಯೋಜಿತ ಸಂಚು, ಸಂಘಟಿತ ಜಾಲ ಅಥವಾ ಕಾನೂನುಬಾಹಿರ ಉದ್ದೇಶವಿದೆಯೇ ಎಂಬುದನ್ನು ಪತ್ತೆ ಮಾಡಬೇಕು. ಡಿಜಿಟಲ್​ ಫಾರೆನ್ಸಿಕ್ ಸಾಕ್ಷ್ಯಗಳ ಆಧಾರದ ಮೇಲೆ ಪತ್ತೆಹಚ್ಚುವ ಸಲುವಾಗಿ ಯಾವುದೇ ರಾಜಕೀಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದ ಸ್ವತಂತ್ರ, ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ಆಗಬೇಕು. ಹೀಗಾಗಿ ಸಿಬಿಐ ಮೂಲಕ ನಡೆಸುವ ಸಾಧ್ಯತೆಯನ್ನು ಪರಿಶೀಲಿಸಿ ಕರ್ನಾಟಕ ಸರ್ಕಾರಕ್ಕೆ ಸೂಕ್ತ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More