AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಗೆ ದರ ನಿಗದಿ ನಿರ್ಧಾರ ಪ್ರಶ್ನಿಸಿ ರಿಟ್ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​​

ಕಬ್ಬಿನ ದರ ನಿಗದಿಪಡಿಸಿದ್ದ ಸರ್ಕಾರದ ಆದೇಶವನ್ನು ಸಕ್ಕರೆ ಕಾರ್ಖಾನೆಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಆದಾಗ್ಯೂ, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ ಮತ್ತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 3250 ರೂ. ದರದಿಂದ ಕಾರ್ಖಾನೆಗಳಿಗೆ ನಷ್ಟವಾಗುತ್ತದೆ ಎಂದು ವಾದಿಸಿವೆ. ನ್ಯಾಯಾಲಯವು ರೈತರಿಲ್ಲದೆ ಕಾರ್ಖಾನೆಗಳಿಲ್ಲ ಎಂದು ಹೇಳಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 17ಕ್ಕೆ ನಿಗದಿಪಡಿಸಿದೆ.

ಕಬ್ಬಿಗೆ ದರ ನಿಗದಿ ನಿರ್ಧಾರ ಪ್ರಶ್ನಿಸಿ ರಿಟ್ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​​
ಹೈಕೋರ್ಟ್​​ಗೆ ರಿಟ್​​ ಅರ್ಜಿ
ರಮೇಶ್​ ಎಮ್​.
| Edited By: |

Updated on:Dec 09, 2025 | 2:18 PM

Share

ಬೆಂಗಳೂರು, ಡಿಸೆಂಬರ್​​ 09: ಕಬ್ಬಿಗೆ ಸರ್ಕಾರದ ದರ ನಿಗದಿ ಪ್ರಶ್ನಿಸಿ ವಿವಿಧ ಸಕ್ಕರೆ ಕಾರ್ಖಾನೆಗಳಿಂದ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ಈ ಹಂತದಲ್ಲಿ ಮಧ್ಯಂತರ ತಡೆಯಾಜ್ಞೆ ಸಾಧ್ಯವಿಲ್ಲವೆಂದು ತಿಳಿಸಿದೆ. ಜೊತೆಗೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ಡಿಸೆಂಬರ್ 17ಕ್ಕೆ ನಿಗದಿಪಡಿಸಿದೆ.

ರಾಜ್ಯ ಸರ್ಕಾರ ಪ್ರತಿ ಮೆಟ್ರಿಕ್​​ ಟನ್​​ ಕಬ್ಬಿಗೆ 3250 ರೂ. ದರ ನಿಗದಿ ಮಾಡಿದೆ. ಕಟಾವು, ಸಾಗಾಣಿಕೆ ಸೇರಿದರೆ ಕಾರ್ಖಾನೆಗಳಿಗೆ 4,150 ರೂ. ವೆಚ್ಚವಾಗಲಿದ್ದು, ಕಾನೂನು ಪಾಲಿಸದೇ ರಾಜ್ಯ ಸರ್ಕಾರ ಏಕಪಕ್ಷೀಯ ಆದೇಶ ನೀಡಿದೆ. ಹೀಗಾಗಿ ಸಕ್ಕರೆ ಕಾರ್ಖಾನೆಗಳಿಗೆ ಭರಿಸಲಾಗದ ನಷ್ಟ ಉಂಟಾಗಲಿದೆ ಎಂದು ಹಲವು ಸಕ್ಕರೆ ಕಾರ್ಖಾನೆಗಳು ಆರೋಪಿಸಿದ್ದವು. ರೇಣುಕಾ ಶುಗರ್ಸ್, ನಿರಾಣಿ ಶುಗರ್ಸ್, ಜೆಮ್ ಶುಗರ್ಸ್, ಕೆಪಿಆರ್ ಶುಗರ್ಸ್, ಗೋದಾವರಿ ಬಯೋ ರಿಪೈನರೀಸ್ ಈ ಬಗ್ಗೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದವು. ಸೌತ್ ಇಂಡಿಯಾ ಶುಗರ್ ಮಿಲ್ಸ್​ ಅಸೋಸಿಯೇಷನ್ ಪರ ಹಿರಿಯ ವಕೀಲ ಹೆಚ್.ಎನ್. ಶಶಿಧರ್ ವಾದ ಮಂಡಿಸಿದ್ದರು. ಈ ವೇಳೆ ರೈತರು ಇಲ್ಲದೆ ನೀವ್ಯಾರೂ ಇಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಎಥೆನಾಲ್ ಸೇರಿ ಎಲ್ಲದರಲ್ಲೂ ಸಂಪಾದಿಸಿದರೂ ರೈತರಿಗೆ ಕೊಡಲು ಬಯಸಲ್ಲ ಎಂದು ನ್ಯಾ.ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಕೊನೆಗೂ ಫಲ, ಪ್ರತಿ ಟನ್ ಕಬ್ಬಿಗೆ 3,300 ರೂ ನಿಗದಿ

ಕಬ್ಬಿಗೆ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದ ವಿವಿಧೆಡೆ ರೈತರು ಬೀದಿಗಿಳಿದಿದ್ದರು. ಅನ್ನದಾತರ ಹೋರಾಟ ತೀವ್ರವಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ್ದ ರಾಜ್ಯ ಸರ್ಕಾರ ಈ ಬಗ್ಗೆ ಮಹತ್ವದ ಸಭೆ ನಡೆಸಿತ್ತು. ಟನ್​​ ಕಬ್ಬಿಗೆ 3,500 ರೂ. ಬೆಂಬಲ ಬೆಲೆ ಕೊಡಬೇಕೆಂಬ ರೈತರ ಪಟ್ಟಿನ ನಡುವೆ, ಪ್ರತಿ ಟನ್ ಕಬ್ಬಿಗೆ 3,300 ರೂ. ದರವನ್ನು ಸರ್ಕಾರ ನಿಗದಿಪಡಿಸಿತ್ತು. ಸಭೆ ಬಳಿಕ ಮಾತನಾಡಿದ್ದ ಸಿಎಂ, ಪ್ರತಿ ಟನ್ ಕಬ್ಬಿಗೆ 3,200 ರೂ. ದರ ನಿಗದಿ ಮಾಡಲಾಗಿದ್ದು, ಜೊತೆಗೆ 100 ರೂ. ಸೇರಿಸಿ ಕೊಡುತ್ತೇವೆ. ಅಂದರೆ ಸರ್ಕಾರದಿಂದ 50 ರೂ., ಕಾರ್ಖಾನೆಯಿಂದ 50 ರೂ. ನೀಡಲಾಗುತ್ತೆ ಎಂದಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:15 pm, Tue, 9 December 25

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್