ಗಣರಾಜ್ಯೋತ್ಸವ ದಿನಾಚರಣೆಗೆ ಕರ್ನಾಟಕದ ಸ್ತಬ್ದಚಿತ್ರ ಆಯ್ಕೆ; ಟ್ವೀಟ್ ಮೂಲಕ ಸಂತಸ ಹಂಚಿಕೊಂಡ ಸಿಎಂ ಬೊಮ್ಮಾಯಿ
ಗಣರಾಜ್ಯೋಯತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪಥಸಂಚಲನದಲ್ಲಿ ವಿವಿಧ ರಾಜ್ಯಗಳ ಟ್ಯಾಬ್ಲೋಗಳು ಭಾಗವಹಿಸುತ್ತವೆ. ಅದರಲ್ಲಿ ಕರ್ನಾಟಕದ ಸ್ತಬ್ಧಚಿತ್ರವು ಈ ಬಾರಿಯೂ ಆಯ್ಕೆ ಆಗಿದೆ.
ಬೆಂಗಳೂರು: ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಇದು ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗುತ್ತಿದೆ. 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ ಎಂದು ಅವರು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಗಣರಾಜ್ಯೋಯತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪಥಸಂಚಲನದಲ್ಲಿ ವಿವಿಧ ರಾಜ್ಯಗಳ ಟ್ಯಾಬ್ಲೋಗಳು ಭಾಗವಹಿಸುತ್ತವೆ. ಅದರಲ್ಲಿ ಕರ್ನಾಟಕದ ಸ್ತಬ್ಧಚಿತ್ರವು ಈ ಬಾರಿಯೂ ಆಯ್ಕೆ ಆಗಿದೆ.
ಈ ಮಧ್ಯೆ, ಕೇರಳದ ಬ್ರಹ್ಮರ್ಷಿ ನಾರಾಯಣಗುರುಗಳ ಸ್ತಬ್ದಚಿತ್ರ ಪಥಸಂಚಲನಕ್ಕೆ ಆಯ್ಕೆ ಆಗಿಲ್ಲ. ಈ ವಿಚಾರವಾಗಿ ಸಾಮಾಜಿಕ ಜಾಲತಾಣ ಸಹಿತ ವಿವಿಧೆಡೆ ಹಲವರ ವಿರೋಧ, ಭಿನ್ನಾಭಿಪ್ರಾಯಗಳು ಕೇಳಿಬಂದಿವೆ. ನಾರಾಯಣಗುರುಗಳ ಸ್ತಬ್ದಚಿತ್ರ ತಿರಸ್ಕರಿಸಿರುವ ನಿರ್ಧಾರವನ್ನು ಪುನಃ ಪರಿಶೀಲಿಸಬೇಕು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಕೂಡ ಸರಣಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಸ್ತಬ್ದಚಿತ್ರ ಆಯ್ಕೆ ಆಗಿರುವುದಕ್ಕೆ ಸಿಎಂ ಬೊಮ್ಮಾಯಿ ಸಂತಸ
Glad that our Tableaux on the theme ‘Karnataka, The Cradle of Traditional Handicrafts’ is selected for the Republic Day Parade. This is the 13th consecutive time that our Tableaux got selected. Out of the 12 selected states, ours is the only State from South India.
— Basavaraj S Bommai (@BSBommai) January 15, 2022
ಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ. ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿ ಜಾತಿ, ಮತಭೇದಗಳನ್ನು ಧಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು. “ಮನುಷ್ಯರೆಲ್ಲ ಒಂದೇ ಎಂದು ಹೇಳಿ ಒಂದೇ ಜಾತಿ, ಒಂದೇ ಮತ, ಒಬ್ಬರೇ ದೇವರು” ಎಂದು ಸಾರಿ ಆತ್ಮದಲ್ಲಿ ಅರಿವಿನ ಬೆಳಕು ಮೂಡಿಸಿದವರು.
ಅಂಥವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ. ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ. ಕೂಡಲೇ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್ʼಗೆ ಸಮಿತಿಯು ಅಂಗೀಕಾರ ಮಾಡಬೇಕು. ಕೂಡಲೇ ಸಂಬಂಧಪಟ್ಟ ಕೇಂದ್ರದ ಸಚಿವಾಲಯ ಮತ್ತು ಅಧಿಕಾರಿಗಳು ಈ ಅಚಾತುರ್ಯವನ್ನು ಸರಿ ಮಾಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಆಗ್ರಹ ವ್ಯಕ್ತಪಡಿಸಿದ್ದಾರೆ.
ಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ. 1/4 pic.twitter.com/GZK5OHxton
— H D Kumaraswamy (@hd_kumaraswamy) January 15, 2022
ಇದನ್ನೂ ಓದಿ: ಗಣರಾಜ್ಯೋತ್ಸವ ಪರೇಡ್ಗೆ ಕೇರಳದ ಜಟಾಯುಪಾರ ಮತ್ತು ಶ್ರೀ ನಾರಾಯಣ ಗುರು ಸ್ತಬ್ಧ ಚಿತ್ರ ತಿರಸ್ಕರಿಸಿದ ಕೇಂದ್ರ
ಇದನ್ನೂ ಓದಿ: ಗಣರಾಜ್ಯೋತ್ಸವದಂದು ಮೋದಿಗೆ ಧ್ವಜಾರೋಹಣ ಮಾಡಲು ಬಿಡುವುದಿಲ್ಲ; ಖಲಿಸ್ತಾನಿ ಗುಂಪಿನಿಂದ ಪ್ರಧಾನಿಗೆ ಬೆದರಿಕೆ