AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಗ್ರಹಣ ಮೋಕ್ಷ ಬಳಿಕ ದೇಗುಲಗಳಲ್ಲಿ ಶುದ್ಧೀಕರಣ, ವಿಶೇಷ ಪೂಜೆ!

ನಭೋಮಂಡಲದಲ್ಲಿ ಮಾರ್ಚ್ 4ರಂದು ಗೋಚರಿಸಿದ ಅಪರೂಪದ ರಕ್ತ ಚಂದ್ರಗ್ರಹಣವು ರಾಜ್ಯಾದ್ಯಂತ ಕುತೂಹಲ ಮೂಡಿಸಿತು. ಗ್ರಹಣದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ ಕರ್ನಾಟಕದ ಪ್ರಮುಖ ದೇವಾಲಯಗಳು, ಗ್ರಹಣ ಮೋಕ್ಷವಾದ ನಂತರ ಶುದ್ಧೀಕರಣ ಕಾರ್ಯಗಳನ್ನು ಕೈಗೊಂಡವು. ಗಂಗಾಜಲ, ಗೋಮೂತ್ರದಿಂದ ಪವಿತ್ರಗೊಳಿಸಿ, ವಿಶೇಷ ಪೂಜೆ, ಅಭಿಷೇಕ ಹಾಗೂ ಗ್ರಹಣ ಶಾಂತಿ ಹೋಮಗಳನ್ನು ನೆರವೇರಿಸುವ ಮೂಲಕ ಭಕ್ತಾದಿಗಳಿಗೆ ಪುನಃ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಚಂದ್ರಗ್ರಹಣ ಮೋಕ್ಷ ಬಳಿಕ ದೇಗುಲಗಳಲ್ಲಿ ಶುದ್ಧೀಕರಣ, ವಿಶೇಷ ಪೂಜೆ!
ಗವಿ ಗಂಗಾಧರೇಶ್ವರ ದೇವಾಲಯ
ಭಾವನಾ ಹೆಗಡೆ
|

Updated on: Mar 04, 2026 | 10:02 AM

Share

ಬೆಂಗಳೂರು, ಮಾರ್ಚ್​ 04: ನಭೋಮಂಡಲದಲ್ಲಿ ಅಪರೂಪದ ಖಗೋಳ ಕೌತುಕವಾಗಿ ರಕ್ತ ಚಂದ್ರಗ್ರಹಣ (Lunar Eclipse) ನಿನ್ನೆ ಸ್ಪಷ್ಟವಾಗಿ ಗೋಚರಿಸಿದೆ. ಭೂಮಿಯ ನೆರಳು ಚಂದ್ರನ ಮೇಲೆ ಸಂಪೂರ್ಣವಾಗಿ ಆವರಿಸಿದ ಪರಿಣಾಮ, ಬೆಳ್ಳಗೆ ಹೊಳೆಯುತ್ತಿದ್ದ ಚಂದ್ರನು ತಾಮ್ರದ ಕೆಂಪು ಬಣ್ಣದಲ್ಲಿ ಕಂಗೊಳಿಸಿದ್ದ. ಮಧ್ಯಾಹ್ನ 3 ಗಂಟೆ 13 ನಿಮಿಷಕ್ಕೆ ಆರಂಭವಾದ ವರ್ಷದ ಮೊದಲ ಕೇತುಗ್ರಸ್ತ ಚಂದ್ರಗ್ರಹಣ ಸಂಜೆ 6 ಗಂಟೆ 47 ನಿಮಿಷಕ್ಕೆ ಮೋಕ್ಷವಾಯಿತು. ಭಾರತಕ್ಕಿಂತ ಹೆಚ್ಚಾಗಿ ಅಮೆರಿಕದ ಕ್ಯಾಲಿಫೋರ್ನಿಯಾ, ಲಾಸ್ ಏಂಜೆಲಸ್ ಹಾಗೂ ಮೆಕ್ಸಿಕೋ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬ್ಲಡ್ ಮೂನ್ ಸ್ಪಷ್ಟವಾಗಿ ಕಾಣಿಸಿಕೊಂಡಿತು.

ಗ್ರಹಣದ ಹಿನ್ನಲೆಯಲ್ಲಿ ರಾಜ್ಯದ ಅನೇಕ ದೇವಾಲಯಗಳು ತಾತ್ಕಾಲಿಕವಾಗಿ ಬಂದ್ ಆಗಿದ್ದವು. ಗ್ರಹಣ ಮೋಕ್ಷವಾಗುತ್ತಿದ್ದಂತೆ ದೇವಾಲಯಗಳಲ್ಲಿ ಶುದ್ಧೀಕರಣ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ಜರುಗಿವೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಾಲಯದಲ್ಲಿ ಶುಚಿತ್ವ ಕಾರ್ಯ ನಡೆಸಿ ಮಹಾಪೂಜೆ ನೆರವೇರಿಸಲಾಯಿತು. ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಗಂಗಾಜಲ ಮತ್ತು ಗೋಮೂತ್ರದಿಂದ ಶುದ್ಧೀಕರಣ ಮಾಡಿ ಕ್ಷೀರಾಭಿಷೇಕ ಹಾಗೂ ಮಹಾಮಂಗಳಾರತಿ ನಡೆಯಿತು.

ಯಾವೆಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ?

ಕಲಬುರಗಿಯ ಶರಣ ಬಸವೇಶ್ವರ ದೇವಸ್ಥಾನದಲ್ಲೂ ಸ್ವಚ್ಛತಾ ಕಾರ್ಯದ ನಂತರ ಪೂಜಾ ವಿಧಿವಿಧಾನಗಳು ನಡೆದವು. ಶಿವಮೊಗ್ಗದ ಜೆಪಿಎನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ದೇಗುಲದಲ್ಲಿ ಗ್ರಹಣಮೋಕ್ಷದ ಬಳಿಕ ಅಭಿಷೇಕ ಮತ್ತು ಗ್ರಹಣ ಶಾಂತಿ ಹೋಮ ನೆರವೇರಿಸಲಾಯಿತು. ದಾವಣಗೆರೆಯ ದುರ್ಗಾಂಬಿಕಾ ದೇವಾಲಯದಲ್ಲಿ ವಿಶೇಷ ಅಲಂಕಾರ ಮತ್ತು ಪೂಜೆಗಳು ಜರುಗಿದವು.

ಮೈಸೂರಿನ ದೇವರಾಜ ಮೊಹಲ್ಲಾದ ಅಮೃತೇಶ್ವರ ದೇವಾಲಯದಲ್ಲಿ ಶುದ್ಧೀಕರಣ ಮಾಡಿ ಗ್ರಹಣದೋಷ ಹೋಮ ನಡೆಸಲಾಯಿತು. ಹಾಸನದ ಪ್ರಸನ್ನ ಗಣಪತಿ ದೇವಾಲಯದಲ್ಲಿ ನವಗ್ರಹ ಶಾಂತಿ ಹಾಗೂ ಜಪತಪ ಹೋಮಗಳು ನೆರವೇರಿದವು. ಕೊಪ್ಪಳದ ಹುಲಿಗೆಮ್ಮ ದೇವಾಲಯದಲ್ಲೂ ವಿಶೇಷ ಅಲಂಕಾರ ಮತ್ತು ಪೂಜಾ ಕೈಂಕರ್ಯಗಳು ನಡೆದವು.

ಇದನ್ನೂ ಓದಿ Mahakali Temple: ಗ್ರಹಣ ಕಾಲದಲ್ಲಿ ಬೆಂಗಳೂರಿನ ಈ ಕಾಳಿ ದೇವಾಲಯದಲ್ಲಿ ನಡೆಯುತ್ತೆ ವಿಶೇಷ ಪೂಜೆ

ಬೆಂಗಳೂರಿನ ಐತಿಹಾಸಿಕ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಗ್ರಹಣದ ವೇಳೆ ಯಜ್ಞಕಾರ್ಯಗಳು ನೆರವೇರಿದ್ದು, ಮೋಕ್ಷದ ಬಳಿಕ ಶಿವಲಿಂಗಕ್ಕೆ ವಿಶೇಷ ಅಭಿಷೇಕ ಮಾಡಲಾಯಿತು. ಗುಟ್ಟಹಳ್ಳಿಯ ಬಂಡೆ ಮಹಾಂಕಾಳಿ ದೇವಾಲಯದಲ್ಲಿ ಚಂದ್ರ ಹಾಗೂ ಕೇತು ಶಾಂತಿ ಹೋಮ, ಪೂರ್ಣಾಹುತಿ ಮತ್ತು ಕಳಸಾಭಿಷೇಕ ನೆರವೇರಿಸಲಾಯಿತು. ಸಾವಿರಾರು ಭಕ್ತರು ದರ್ಶನ ಪಡೆದರು. ಒಟ್ಟಾರೆ, ಗ್ರಹಣದ ನಂತರ ಎಲ್ಲಾ ಪ್ರಮುಖ ದೇವಾಲಯಗಳು ಪುನಃ ಭಕ್ತರಿಗೆ ತೆರೆಯಲ್ಪಟ್ಟಿದ್ದು, ಬೆಳಗ್ಗಿನಿಂದಲೇ ಶುದ್ಧೀಕರಣ ಮತ್ತು ಪೂಜಾ ಕಾರ್ಯಗಳು ಭಕ್ತಿಭಾವದಿಂದ ನಡೆಯುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ