AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸಿನ ಬಿಕ್ಕಟ್ಟಿನಲ್ಲಿ ರಾಜ್ಯದ 4 ರಸ್ತೆ ಸಾರಿಗೆ ನಿಗಮಗಳು: 8,000 ಕೋಟಿ ರೂ. ನಷ್ಟವೆಂದ ಸಚಿವ ಭೈರತಿ ಸುರೇಶ್!

ಕರ್ನಾಟಕದ ನಾಲ್ಕೂ ರಸ್ತೆ ಸಾರಿಗೆ ನಿಗಮಗಳು ಒಟ್ಟು 8,000 ಕೋಟಿ ರೂಪಾಯಿ ನಷ್ಟ ಎದುರಿಸುತ್ತಿವೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಡೀಸೆಲ್ ಬೆಲೆ ಏರಿಕೆಯಾಗಿದ್ದರೂ ಟಿಕೆಟ್ ದರ ಹೆಚ್ಚಿಸಿಲ್ಲ ಎಂದಿರುವ ಸಚಿವರು, ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಸಂಬಳ ನೀಡಲು ಹಣವಿಲ್ಲದ ಕಾರಣ ಹೊಸ ನೇಮಕಾತಿಗಳು ವಿಳಂಬವಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ಹಣಕಾಸಿನ ಬಿಕ್ಕಟ್ಟಿನಲ್ಲಿ ರಾಜ್ಯದ 4 ರಸ್ತೆ ಸಾರಿಗೆ ನಿಗಮಗಳು: 8,000 ಕೋಟಿ ರೂ. ನಷ್ಟವೆಂದ ಸಚಿವ ಭೈರತಿ ಸುರೇಶ್!
ಹಣಕಾಸಿನ ಬಿಕ್ಕಟ್ಟಿನಲ್ಲಿ ರಾಜ್ಯದ 4 ರಸ್ತೆ ಸಾರಿಗೆ ನಿಗಮಗಳು
ಭಾವನಾ ಹೆಗಡೆ
|

Updated on: Sep 25, 2026 | 10:31 AM

Share

ಮುಖ್ಯಾಂಶಗಳು

  • ರಾಜ್ಯದ 4 ರಸ್ತೆ ಸಾರಿಗೆ ನಿಗಮಗಳಿಗೆ 8,000 ಕೋಟಿ ರೂಪಾಯಿ ನಷ್ಟ.
  • ಡೀಸೆಲ್ ದರ ಏರಿಕೆಯಾಗಿದ್ದರೂ ಸಾರಿಗೆ ಸಂಸ್ಥೆಗಳಿಂದ ಟಿಕೆಟ್ ದರ ಹೆಚ್ಚಳವಿಲ್ಲ.
  • ಸಿಬ್ಬಂದಿಗೆ ಸಂಬಳ ನೀಡಲು ಹಣವಿಲ್ಲದೆ ಹೊಸ ನೇಮಕಾತಿ ಆದೇಶಗಳು ವಿಳಂಬ.

ಬೆಂಗಳೂರು, ಸೆಪ್ಟೆಂಬರ್ 25: ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ನಾಲ್ಕೂ ರಸ್ತೆ ಸಾರಿಗೆ ನಿಗಮಗಳು ತೀವ್ರ ಹಣಕಾಸಿನ ಬಿಕ್ಕಟ್ಟು ಎದುರಿಸುತ್ತಿದ್ದು, ಒಟ್ಟು 8,000 ಕೋಟಿ ರೂಪಾಯಿಗಳ ಭಾರಿ ನಷ್ಟದಲ್ಲಿವೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಪ್ರಸ್ತುತ ನೌಕರರಿಗೆ ಸಂಬಳ ನೀಡಲೂ ನಿಗಮಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಡೀಸೆಲ್ ದರ ಹೆಚ್ಚಾದರೂ ಟಿಕೆಟ್ ದರ ಕಡಿಮೆ

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಎಸ್‌. ರವಿ ಅವರು ರೈತರ ವಿಷಯ ಹಾಗೂ ಹಾಲಿನ ಒಕ್ಕೂಟಗಳ ಸಂಕಷ್ಟದ ಕುರಿತು ಪ್ರಸ್ತಾಪಿಸಿದಾಗ, ಸಾರಿಗೆ ನಿಗಮಗಳು ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಸಚಿವರು ವಿವರಿಸಿದರು. ಡೀಸೆಲ್ ದರ ನಾಲ್ಕು ಬಾರಿ ಏರಿಕೆಯಾಗಿದ್ದರೂ ಕೆಎಸ್‌ಆರ್‌ಟಿಸಿ , ಬಿಎಂಟಿಸಿ , ವಾಯುವ್ಯ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳುಪ್ರಯಾಣಿಕರ ಟಿಕೆಟ್ ದರವನ್ನು ಹೆಚ್ಚಿಸಿಲ್ಲ. “ಪ್ರಯಾಣ ದರ ಹೆಚ್ಚಿಸಿದರೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಬಹುದು ಎಂಬ ಆತಂಕವಿದೆ. ಈ ವಿಚಾರವಾಗಿ ಶೀಘ್ರದಲ್ಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು,” ಎಂದು ಸುರೇಶಗ ತಿಳಿಸಿದ್ದಾರೆ ಎಂದು ದ ಹಿಂದು ವರದಿ ಮಾಡಿದೆ.

ನೇಮಕಾತಿ ವಿಳಂಬದ ಕುರಿತು ಸ್ಪಷ್ಟನೆ

ಇದೇ ವೇಳೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ಸಾರಿಗೆ ನಿಗಮಗಳಲ್ಲಿ ವಿವಿಧ ಹುದ್ದೆಗಳಿಗೆ ಪರೀಕ್ಷೆ ಬರೆದು, ಸಂದರ್ಶನ ಮುಗಿಸಿ 3 ವರ್ಷಗಳಾದರೂ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿಲ್ಲ,” ಎಂದು ಧ್ವನಿ ಎತ್ತಿದರು.

ಇದಕ್ಕೆ ಉತ್ತರಿಸಿದ ಸಚಿವರು, “ಸಂಸ್ಥೆಯಲ್ಲಿ ಈಗಾಗಲೇ ಕೆಲಸ ಮಾಡುತ್ತಿರುವ ಸಿಬ್ಬಂದಿಗೇ ವೇತನ ನೀಡಲು ಹಣವಿಲ್ಲದೆ ಕಷ್ಟಪಡುತ್ತಿರುವಾಗ, ಹೊಸದಾಗಿ ಅಭ್ಯರ್ಥಿಗಳನ್ನು ಹೇಗೆ ನೇಮಕ ಮಾಡಿಕೊಳ್ಳಲು ಸಾಧ್ಯ?” ಎಂದು ಪ್ರಶ್ನಿಸುವ ಮೂಲಕ ಆರ್ಥಿಕ ಮುಗ್ಗಟ್ಟಿನ ನೈಜ ಚಿತ್ರಣ ತೆರೆದಿಟ್ಟರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ವೀಕೆಂಡ್ ಎಪಿಸೋಡ್​ನಲ್ಲಿ ಮತ್ತಿಬ್ಬರು ಹೊರ ಹೋಗ್ತಾರೆ; ಬಿಗ್ ಬಾಸ್ ಸೂಚನೆ
ವೀಕೆಂಡ್ ಎಪಿಸೋಡ್​ನಲ್ಲಿ ಮತ್ತಿಬ್ಬರು ಹೊರ ಹೋಗ್ತಾರೆ; ಬಿಗ್ ಬಾಸ್ ಸೂಚನೆ
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಭಾರೀ ಭೂಕುಸಿತ, ತಡೆಗೋಡೆ ಕುಸಿತದಿಂದ ಒಡಿಶಾದ ಕಳಿಂಗ ಘಾಟ್ ರಸ್ತೆ ಬಂದ್
ಭಾರೀ ಭೂಕುಸಿತ, ತಡೆಗೋಡೆ ಕುಸಿತದಿಂದ ಒಡಿಶಾದ ಕಳಿಂಗ ಘಾಟ್ ರಸ್ತೆ ಬಂದ್
ಚಿತ್ರದುರ್ಗ ಎಸ್ಪಿ ವಿರುದ್ಧ ಶಾಸಕ ವೀರೇಂದ್ರ ಪಪ್ಪಿ ಕೆಂಡಾಮಂಡಲ
ಚಿತ್ರದುರ್ಗ ಎಸ್ಪಿ ವಿರುದ್ಧ ಶಾಸಕ ವೀರೇಂದ್ರ ಪಪ್ಪಿ ಕೆಂಡಾಮಂಡಲ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ