ಶಕ್ತಿಯೋಜನೆಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ: ಸೀಟ್ ಇದ್ದಷ್ಟೇ ಪ್ರಯಾಣಿಕರು ಇರಬೇಕೆಂಬ ಹೊಸ ನಿಯಮ!

ಶಕ್ತಿ ಯೋಜನೆಯಿಂದ ಬಸ್‌ಗಳಲ್ಲಿ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಹೊಸ ಆದೇಶ ಹೊರಡಿಸಿದೆ. ಇನ್ಮುಂದೆ ಆಸನ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಪ್ರಯಾಣಿಕರನ್ನು ಕರೆದೊಯ್ಯಬೇಕು ಎಂದು ಸೂಚಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ.

ಶಕ್ತಿಯೋಜನೆಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ: ಸೀಟ್ ಇದ್ದಷ್ಟೇ ಪ್ರಯಾಣಿಕರು ಇರಬೇಕೆಂಬ ಹೊಸ ನಿಯಮ!
ಸಾಂದರ್ಭಿಕ ಚಿತ್ರ
Edited By:

Updated on: Nov 24, 2026 | 8:23 AM

ಮುಖ್ಯಾಂಶಗಳು

  • ಬಸ್‌ಗಳಲ್ಲಿ ಆಸನ ಸಾಮರ್ಥ್ಯಕ್ಕೆ ತಕ್ಕಂತೆ ಪ್ರಯಾಣಿಕರ ಕರೆದೊಯ್ಯುವ ನಿಯಮ
  • ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮದ ಎಚ್ಚರಿಕೆ
  • ಪ್ರಯಾಣಿಕರ ಸುರಕ್ಷತೆಗೆ ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಬೆಂಗಳೂರು, ನವೆಂಬರ್ 24: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜಾರಿಯಾದ ಬಳಿಕ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಹೊಸ ಆದೇಶ ಹೊರಡಿಸಿದೆ. ಇನ್ಮುಂದೆ ಬಸ್‌ಗಳಲ್ಲಿ ಆಸನ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಪ್ರಯಾಣಿಕರನ್ನು ಕರೆದೊಯ್ಯಬೇಕು ಎಂದು ಸೂಚನೆ ನೀಡಿದೆ.

ಶಕ್ತಿ ಯೋಜನೆ ಜಾರಿಯಾದ ನಂತರ ರಾಜ್ಯದಲ್ಲಿ ಮಹಿಳೆಯರ ಬಸ್ ಪ್ರಯಾಣ ಗಣನೀಯವಾಗಿ ಹೆಚ್ಚಾಗಿದೆ. ಉಚಿತ ಪ್ರಯಾಣದ ಸೌಲಭ್ಯದಿಂದಾಗಿ ಬಸ್‌ಗಳಲ್ಲಿ ನಿಗದಿತ ಸಂಖ್ಯೆಯನ್ನು ಮೀರಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ ಎಂಬ ದೂರುಗಳು ಸಾರಿಗೆ ಇಲಾಖೆಯ ಗಮನಕ್ಕೆ ಬಂದಿದ್ದವು. ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಹೊಸ ಆದೇಶ ಜಾರಿಗೊಳಿಸಿದೆ.

Loading...

ಆಸನ ಸಾಮರ್ಥ್ಯಕ್ಕೆ ತಕ್ಕಂತೆ ಮಾತ್ರ ಪ್ರಯಾಣಿಕರಿಗೆ ಪ್ರವೇಶ

ಸಾರಿಗೆ ಇಲಾಖೆಯ ಹೊಸ ಆದೇಶದ ಪ್ರಕಾರ, ರಾಜ್ಯದಲ್ಲಿ ಸಂಚರಿಸುವ ಎಲ್ಲ ಮಾದರಿಯ ಸಾರಿಗೆ ವಾಹನಗಳಲ್ಲಿ ಆಸನ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಪ್ರಯಾಣಿಕರನ್ನು ಕರೆದೊಯ್ಯಬೇಕು. ಈ ಕುರಿತು ರಾಜ್ಯದ ಎಲ್ಲ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಲಾಗಿದೆ.

ಇದರ ಜತೆಗೆ, ಹೊಸ ನಿಯಮದ ಕುರಿತು ಪ್ರಯಾಣಿಕರಲ್ಲಿ ಅರಿವು ಮೂಡಿಸುವಂತೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ನಿಯಮ ಜಾರಿಯಾದರೆ ಬಸ್‌ಗಳಲ್ಲಿ ಪ್ರಯಾಣಿಸುವ ಪುರುಷರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರಿಗೂ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ

ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಇದೀಗ ಇಲಾಖೆಯ ಆದೇಶವನ್ನು ರಾಜ್ಯದ ಸಾರಿಗೆ ನಿಗಮಗಳು ಹೇಗೆ ಕಾರ್ಯಗತಗೊಳಿಸುತ್ತವೆ ಎಂಬುದು ಕುತೂಹಲ ಮೂಡಿಸಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳು ಹೊಸ ನಿಯಮದ ಅನುಷ್ಠಾನಕ್ಕೆ ಯಾವ ಕ್ರಮ ಕೈಗೊಳ್ಳಲಿವೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಶಕ್ತಿ ಯೋಜನೆ: ನಾಲ್ಕು ಸಾರಿಗೆ ನಿಗಮಗಳಿಗೆ 430 ಕೋಟಿ ಬಿಡುಗಡೆಗೆ ಸರ್ಕಾರ ಆದೇಶ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Loading...
Unable to load recommendations.
Follow Us