AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್! ಹೊಸ ಎಸ್​ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಚಾರಣ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕಾರ್ಯಾಚರಣೆ ವಿಧಾನ (SOP) ಜಾರಿಗೊಳಿಸಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ, ಚಾರಣಕ್ಕೆ ಆನ್‌ಲೈನ್ ಬುಕಿಂಗ್, ಪ್ರತಿ 10 ಮಂದಿಗೆ ಒಬ್ಬ ಗೈಡ್ ಹಾಗೂ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯವಾಗಿದೆ. ಸುರಕ್ಷಿತ ಚಾರಣಕ್ಕೆ ಅಗತ್ಯ ಉಪಕರಣಗಳು ಮತ್ತು ಕ್ಯಾರಿಂಗ್ ಕೆಪಾಸಿಟಿ ನಿಯಂತ್ರಣವೂ ಜಾರಿಗೆ ತರಲಾಗಿದೆ.

ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್! ಹೊಸ ಎಸ್​ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ
ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್! ಹೊಸ ಎಸ್​ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ
ಪ್ರಸನ್ನ ಗಾಂವ್ಕರ್​
| Edited By: |

Updated on:Apr 17, 2026 | 11:38 AM

Share

ಬೆಂಗಳೂರು, ಏಪ್ರಿಲ್ 17: ರಾಜ್ಯದಲ್ಲಿ ಚಾರಣಕ್ಕೆ (Trekking) ತೆರಳಿ ಸಂಭವಿಸುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಜಾರಿಗೆ ತಂದಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್‌ನಲ್ಲಿ ಎಸ್‌ಒಪಿ ಬಿಡುಗಡೆ ಮಾಡಿ ಮಹತ್ವದ ಮಾಹಿತಿ ನೀಡಿದ್ದಾರೆ.

ಸಚಿವರು ಹೇಳಿದ್ದೇನು?

ರಾಜ್ಯದಲ್ಲಿ ಪ್ರಸ್ತುತ 44 ಚಾರಣ ಪಾಯಿಂಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಕೊಡಗು ತಡಿಯಾಂಡಮೊಳ್ ಸೇರಿದಂತೆ ಹಲವು ಕಡೆಗಳಲ್ಲಿ ಚಾರಣಕ್ಕೆ ತೆರಳಿದವರು ನಾಪತ್ತೆಯಾಗಿರುವುದು ಹಾಗೂ ಚಿಕ್ಕಮಗಳೂರಿನಲ್ಲಿ ಬಾಲಕಿ ಸಾವನ್ನಪ್ಪಿದ ಘಟನೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಹೊಸ ನಿಯಮಗಳ ಪ್ರಕಾರ, ಚಾರಣಿಗರು ಆನ್‌ಲೈನ್ ಮೂಲಕವೇ ಬುಕ್ಕಿಂಗ್ ಮಾಡಬೇಕು. 10 ಮಂದಿಗೆ ಒಬ್ಬ ಗೈಡ್ ಕಡ್ಡಾಯವಾಗಿದ್ದು, ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ. ಟ್ರೆಕಿಂಗ್ ಹೋಗುವವರ ಮೊಬೈಲ್‌ಗಳಲ್ಲಿ ಟ್ರ್ಯಾಕಿಂಗ್ ಆಪ್ ಅಳವಡಿಕೆ ಮಾಡಲಾಗುತ್ತದೆ. ಜೊತೆಗೆ ಗೈಡ್‌ಗಳಿಗೆ ಜಿಪಿಎಸ್ ಸೌಲಭ್ಯ ಇರುವ ವಾಕಿಟಾಕಿ ನೀಡಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ ಮೂರು ದಿನಗಳಾದರೂ ಚಿಕ್ಕಮಗಳೂರಿನಲ್ಲಿ ನಾಪತ್ತೆಯಾದ ಬಾಲಕಿಯ ಸುಳಿವಿಲ್ಲ! ಕಿಡ್ನ್ಯಾಪ್ ಆಗಿರಬಹುದೇ?

ಪ್ರತಿ ಸ್ಥಳದ ಕ್ಯಾರಿಂಗ್ ಕೆಪಾಸಿಟಿಯನ್ನು ನಿಯಂತ್ರಿಸಲಾಗಿದ್ದು, ಒಮ್ಮೆ 150 ಮಂದಿಗೆ ಮಾತ್ರ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ. ಒಂದು ತಂಡ ಮರಳಿದ ಬಳಿಕವೇ ಮತ್ತೊಂದು ತಂಡವನ್ನು ಕಳುಹಿಸಲಾಗುತ್ತದೆ. ಟಾರ್ಚ್, ಹೆಡ್ ಲ್ಯಾಂಪ್ ಸೇರಿದಂತೆ ಅಗತ್ಯ ಸುರಕ್ಷತಾ ಉಪಕರಣಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಹೇಳಿರು ಖಂಡ್ರೆ, ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದಾಗಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:10 am, Fri, 17 April 26

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ