ಉಪಲೋಕಾಯುಕ್ತ ಬಿ.ಎಸ್. ಪಾಟೀಲ್ ದೊಡ್ಡಮಟ್ಟದ ಅಧಿಕಾರಿಗಳೊಂದಿಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಳಿ
Lokayukta Raid: ಮೆಡಿಸಿನ್ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನ ಉಪಲೋಕಾಯುಕ್ತರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಸರಿಯಾದ ನಿರ್ವಹಣೆ ಇಲ್ಲದಿರುವುದು ಕಂಡು ಬಂದಲ್ಲಿ ಸೂಕ್ರ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರಿಂದ ಸಮಸ್ಯೆಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆ ಲೋಕಾಯುಕ್ತ ದಾಳಿ ನಡೆದಿದೆ.
ಬೆಂಗಳೂರು: ಉಪಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರು (Karnataka Uplokayukta Justice BS Patil) ದೊಡ್ಡಮಟ್ಟದ ಅಧಿಕಾರಿಗಳ ತಂಡದೊಂದಿಗೆ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ. ಆಸ್ಪತ್ರೆಯ ಹೊರರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಹೊರ ರೋಗಿಗಳ ದಾಖಲಾತಿ ಪರಿಶೀಲನೆ ನಡೆಸಿದ್ದಾರೆ. ಉಪಲೋಕಾಯುಕ್ತರು ಆಸ್ಪತ್ರೆಯ ಆಡಳಿತ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ಮಾಡ್ತಿದ್ದಾರೆ. ವಿಕ್ಟೋರಿಯಾ ಮೆಡಿಕಲ್ ಸೂಪರ್ ಡೆಂಟ್ ರಮೇಶ್ ಕೃಷ್ಣರಿಂದ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದಾರೆ. 40 ಜನ ಉಪಲೋಕಾಯುಕ್ತ ನೇತೃತ್ವದ ಪೊಲೀಸರ ತಂಡ ದಿಢೀರ್ ಭೇಟಿ ನೀಡಿದೆ. ಓರ್ವ ರಿಜಿಸ್ಟ್ರಾರ್, 3 ಜಡ್ಜ್, 2 ಎಸ್ಪಿ, 8 ಡಿಎಸ್ ಪಿ, 15 ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ಪರಿಶೀಲನೆ ನಡೆದಿದೆ.
ಮೆಡಿಸಿನ್ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನ ಉಪಲೋಕಾಯುಕ್ತರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಸರಿಯಾದ ನಿರ್ವಹಣೆ ಇಲ್ಲದಿರುವುದು ಕಂಡು ಬಂದಲ್ಲಿ ಸೂಕ್ರ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರಿಂದ ಸಮಸ್ಯೆಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆ ಲೋಕಾಯುಕ್ತ ದಾಳಿ ನಡೆದಿದೆ.
ಸರಿಯಾದ ನಿರ್ವಹಣೆ ಇಲ್ಲದಿರುವುದು ಕಂಡು ಬಂದ್ರೆ ಕ್ರಮ ಎಂದ ಅಧಿಕಾರಿಗಳು
ಟ್ರಾನ್ಸ್ಫಾರ್ಮರ್ ಸ್ಫೋಟ: ಗಂಭೀರವಾಗಿ ಗಾಯಗೊಂಡಿರುವ ಅಪ್ಪ-ಮಗಳಿಗೆ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆಂಗಳೂರಿನ ಮಂಗನಹಳ್ಳಿ ಬ್ರಿಡ್ಜ್ ಬಳಿ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ತಂದೆ-ಮಗಳಿಗೆ ಗಂಭೀರ ಗಾಯಗಳಾಗಿವೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಂದೆ ಶಿವರಾಜ್ (55) ಹಾಗೂ ಚೈತನ್ಯಾ (18) ಗಂಭೀರವಾಗಿ ಗಾಯಗೊಂಡವರು.
ವಿಕ್ಟೊರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ ನಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಸಾವು ಬದುಕಿನ ಮಧ್ಯೆ ಅಪ್ಪ-ಮಗಳು ಹೋರಾಟ ನಡೆಸಿದ್ದಾರೆ. ಏಪ್ರಿಲ್ ತಿಂಗಳಲ್ಲಿ ಗಾಯಾಳು ಚೈತನ್ಯಾಗೆ ಎಂಗೇಜ್ಮೆಂಟ್ ಫಿಕ್ಸ್ ಆಗಿತ್ತು. ಮುಂದಿನ ವಾರ ಸಂಬಂಧಿಕರ ಮದುವೆಯೊಂದು ನಿಗದಿಯಾಗಿದೆ. ಈ ಸಂಭ್ರಮದಲ್ಲಿ ಬಟ್ಟೆ ಖರೀದಿಗಾಗಿ ಹೋಗಿ ವಾಪಸ್ ಬರ್ತಿದ್ದಾಗ ಅವಘಡ ಸಂಭವಿಸಿದೆ.
ಟ್ರಾನ್ಸ್ಫಾರ್ಮರ್ ಬಳಿ ಹಂಪ್ ಇದ್ದು ಬೈಕ್ ನಿಧಾನ ಮಾಡಿದ್ದಾಗ ದಿಢೀರನೆ ಟ್ರಾನ್ಸ್ಫಾರ್ಮರ್ ಬ್ಲಾಸ್ಟ್ ಆಗಿದೆ. ಟ್ರಾನ್ಸ್ಫಾರ್ಮರ್ ಆಯಿಲ್ ಇಬ್ಬರ ಮೇಲೂ ಬಿದ್ದು ಬೆಂಕಿ ಹೊತ್ತಿಕೊಂಡಿದೆ. ಇಬ್ಬರೂ ಸಂಪೂರ್ಣವಾಗಿ ಸುಟ್ಟಿದ್ದು, ಇಬ್ಬರಿಗೂ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ದಡಿ ಕೇಸ್ ದಾಖಲಿಸುತ್ತೇವೆ ಎಂದು ಗಾಯಾಳು ಯುವತಿಯ ಚಿಕ್ಕಪ್ಪ ಶ್ರೀಧರ್ ಟಿವಿ9 ಜೊತೆ ಮಾತನಾಡುತ್ತಾ ಹೇಳಿದ್ದಾರೆ.
Published On - 4:48 pm, Wed, 23 March 22