AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರದಲ್ಲಿ ಹಳೆಯ ವಾಹನಗಳ ಸಂಖ್ಯೆ ಹೆಚ್ಚಳ: ಮೂರು ವರ್ಷದಲ್ಲಿ 14,042 ವಾಹನಗಳು ಗುಜರಿಗೆ

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಹಳೆಯ ವಾಹನಗಳಿಂದ ವಾಯುಮಾಲಿನ್ಯ ನಿಯಂತ್ರಿಸಲು ಸಾರಿಗೆ ಇಲಾಖೆ ಜಾರಿಗೆ ತಂದಿರುವ ಗುಜರಿ ನೀತಿಯಡಿ ಮೂರು ವರ್ಷಗಳಲ್ಲಿ 14,042 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ. ಇದರೊಂದಿಗೆ, ನಗರದಲ್ಲಿ ಹಳೆಯ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದೂ ಬೆಳಕಿಗೆ ಬಂದಿದೆ. ಗುಜರಿ ನೀತಿಯಡಿ ಹೊಸ ವಾಹನ ಖರೀದಿಗೆ ತೆರಿಗೆ ವಿನಾಯಿತಿಯನ್ನೂ ನೀಡಲಾಗುತ್ತಿದೆ.

ಬೆಂಗಳೂರು ನಗರದಲ್ಲಿ ಹಳೆಯ ವಾಹನಗಳ ಸಂಖ್ಯೆ ಹೆಚ್ಚಳ: ಮೂರು ವರ್ಷದಲ್ಲಿ 14,042 ವಾಹನಗಳು ಗುಜರಿಗೆ
ಸಾಂದರ್ಭಿಕ ಚಿತ್ರImage Credit source: TV9 Network
ಕಿರಣ್​ ಸೂರ್ಯ
| Edited By: |

Updated on: Sep 12, 2026 | 8:12 AM

Share

ಮುಖ್ಯಾಂಶಗಳು

  • ಮೂರು ವರ್ಷದಲ್ಲಿ 14,042 ವಾಹನಗಳು ಗುಜರಿಗೆ
  • ಖಾಸಗಿ ವಾಹನಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸ್ಕ್ರ್ಯಾಪ್
  • ಹಳೆಯ ವಾಹನ ಗುಜರಿಗೆ ಹಾಕಿ ಹೊಸತು ಖರೀದಿಸುವವರಿಗೆ ತೆರಿಗೆ ವಿನಾಯಿತಿ

ಬೆಂಗಳೂರು, ಸೆಪ್ಟೆಂಬರ್ 12: ಬೆಂಗಳೂರು ನಗರದಲ್ಲಿ ಪ್ರತಿದಿನ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿರುವುದರಿಂದ ಹಳೆಯ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದರಿಂದ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ವಾಹನ ಗುಜರಿ ನೀತಿಯನ್ನು ಜಾರಿಗೆ ತಂದಿದೆ. ಈ ನೀತಿಯಡಿ ಕಳೆದ ಮೂರು ವರ್ಷಗಳಲ್ಲಿ ಸಾವಿರಾರು ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ.

ಮೂರು ವರ್ಷದಲ್ಲಿ 14,042 ವಾಹನಗಳು ಸ್ಕ್ರ್ಯಾಪ್

ನಗರದಲ್ಲಿ ಹೆಚ್ಚುತ್ತಿರುವ ಹಳೆಯ ವಾಹನಗಳಿಂದ ಉಂಟಾಗುವ ವಾಯುಮಾಲಿನ್ಯಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ರಾಜ್ಯ ಸಾರಿಗೆ ಇಲಾಖೆ 2022ರ ಡಿಸೆಂಬರ್‌ನಲ್ಲಿ ವಾಹನ ಗುಜರಿ ನೀತಿಯನ್ನು ಜಾರಿಗೆ ತಂದಿತ್ತು. ಅದರಡಿ, 2023ರ ಸೆಪ್ಟೆಂಬರ್ 1ರಿಂದ 2026ರ ಜುಲೈ 31ರವರೆಗೆ ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಕೇಂದ್ರಗಳ ಮೂಲಕ ಒಟ್ಟು 14,042 ಹಳೆಯ ವಾಹನಗಳನ್ನು ಗುಜರಿಗೆ ಹಾಕಲಾಗಿದೆ. ಇದರಲ್ಲಿ 9,976 ಖಾಸಗಿ ವಾಹನಗಳು ಹಾಗೂ 3,390 ಸರ್ಕಾರಿ ಹಳೆಯ ವಾಹನಗಳು ಸೇರಿವೆ.

ಹಳೆಯ ವಾಹನಗಳ ಗುಜರಿಗೆ ಪ್ರೋತ್ಸಾಹ

ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವ ವ್ಯವಸ್ಥೆ ಜಾರಿಯಲ್ಲಿದೆ. ಇದರ ಜೊತೆಗೆ, ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಸ್ಕ್ರ್ಯಾಪ್ ಮಾಡಿಸಿಕೊಳ್ಳಬಹುದು. ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ಸಾರಿಗೆ ಇಲಾಖೆ ತೆರಿಗೆ ವಿನಾಯಿತಿಯನ್ನೂ ನೀಡುತ್ತಿದೆ. ದ್ವಿಚಕ್ರ ವಾಹನಗಳನ್ನು ಸ್ಕ್ರ್ಯಾಪ್ ಮಾಡಿದರೆ 1 ಸಾವಿರದಿಂದ 5 ಸಾವಿರ ರೂಪಾಯಿವರೆಗೆ, ನಾಲ್ಕು ಚಕ್ರದ ವಾಹನಗಳನ್ನು ಗುಜರಿಗೆ ಹಾಕಿದರೆ 10 ಸಾವಿರದಿಂದ 50 ಸಾವಿರ ರೂಪಾಯಿವರೆಗೆ ಹೊಸ ವಾಹನ ಖರೀದಿ ವೇಳೆ ತೆರಿಗೆ ವಿನಾಯಿತಿ ಸಿಗಲಿದೆ.

ವೈಜ್ಞಾನಿಕ ಮರುಬಳಕೆಗೆ ವ್ಯವಸ್ಥೆ

ಬಳಕೆಯ ಅವಧಿ ಮುಗಿದ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಪ್ರೋತ್ಸಾಹಿಸುವುದು ಹಾಗೂ ವಾಹನಗಳ ವೈಜ್ಞಾನಿಕ ಮರುಬಳಕೆಗೆ ಸೂಕ್ತ ವ್ಯವಸ್ಥೆ ರೂಪಿಸುವುದು ನೀತಿಯ ಉದ್ದೇಶವಾಗಿದೆ.

ವಾಹನ ಸ್ಕ್ರ್ಯಾಪಿಂಗ್ ಎಂದರೆ ಬಳಕೆಯಲ್ಲಿಲ್ಲದ ಅಥವಾ ಬಳಕೆಯ ಅವಧಿ ಮುಗಿದ ವಾಹನಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ, ಅದರ ವಿವಿಧ ಭಾಗಗಳು ಮತ್ತು ಲೋಹಗಳನ್ನು ಮರುಬಳಕೆ ಮಾಡುವುದು. ಇದರಿಂದ ಹಳೆಯ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಸಹಾಯವಾಗಲಿದೆ.

15 ಮತ್ತು 20 ವರ್ಷ ಹಳೆಯ ವಾಹನಗಳಿಗೆ ಕಡ್ಡಾಯ ಗುಜರಿ?

ಈ ಕುರಿತು ಮಾತನಾಡಿದ ವಾಹನ ಮಾಲೀಕರು, ದೆಹಲಿ ಮಾದರಿಯಲ್ಲಿ 15 ಮತ್ತು 20 ವರ್ಷಕ್ಕಿಂತ ಹಳೆಯದಾದ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕುವ ಆದೇಶವನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಪ್ರಮುಖ ನಗರಗಳ ಇಂದಿನ ವಾಯು ಗುಣಮಟ್ಟ ಹೀಗಿದೆ

ನಗರದಲ್ಲಿ ಹಳೆಯ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ವಾಯುಮಾಲಿನ್ಯವೂ ಹೆಚ್ಚಾಗುತ್ತಿದೆ. ಹೀಗಾಗಿ ಹಳೆಯ ವಾಹನಗಳನ್ನು ಹಂತ ಹಂತವಾಗಿ ಗುಜರಿಗೆ ಸೇರಿಸುವ ಮೂಲಕ ಮಾಲಿನ್ಯ ನಿಯಂತ್ರಣಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು