AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕರಿಗೊಂದು ಅವಕಾಶ: ಆನ್​​ಲೈನ್​ ವೆಬಿನಾರ್ ಮೂಲಕ SIR ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಿ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ಜನರಿಗಿರುವ ಗೊಂದಲ ನಿವಾರಿಸಲು ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಶನ್​ ವತಿಯಿಂದ ಸೆಪ್ಟೆಂಬರ್ 12ರಂದು ಆನ್‌ಲೈನ್ ವೆಬಿನಾರ್ ಆಯೋಜಿಸಲಾಗಿದೆ. ಕರಡು ಪಟ್ಟಿ, ಅಗತ್ಯ ದಾಖಲೆಗಳು, ಮುಂದಿನ ಹಂತಗಳ ಕುರಿತು ತಜ್ಞರು ಮಾಹಿತಿ ನೀಡಲಿದ್ದಾರೆ. ಮುಖ್ಯವಾಗಿ ಜನಸಾಮಾನ್ಯರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

ಸಾರ್ವಜನಿಕರಿಗೊಂದು ಅವಕಾಶ: ಆನ್​​ಲೈನ್​ ವೆಬಿನಾರ್ ಮೂಲಕ SIR ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಿ
ಎಸ್​ಐಆರ್​​Image Credit source: x.com/BAFBLR
ಗಂಗಾಧರ​ ಬ. ಸಾಬೋಜಿ
|

Updated on:Sep 09, 2026 | 7:23 PM

Share

ಬೆಂಗಳೂರು, ಸೆಪ್ಟೆಂಬರ್​ 09: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಇತ್ತೀಚೆಗೆ ಮತದಾರರ ಮೊದಲ ಕರಡು ಪಟ್ಟಿ ಬಿಡುಗಡೆ ಮಾಡಲಾಗಿತ್ತು. ರಾಜ್ಯ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಈಗಾಗಲೇ 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್​ ಮಾಡಲಾಗಿದೆ. ಹೀಗಿರುವಾಗ ಎಸ್​ಐಆರ್​ ಬಗ್ಗೆ ಜನರಲ್ಲಿ ಇನ್ನೂ ಗೊಂದಲಗಳಿವೆ. ಹೀಗಾಗಿ ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಶನ್​​ ಎಸ್​ಐಆರ್ ಕುರಿತಾಗಿ ಒಂದು ವಿಶೇಷ ಆನ್‌ಲೈನ್​​ ವೆಬಿನಾರ್​ ಆಯೋಜನೆಗೆ ಮುಂದಾಗಿದ್ದು, ಸಾರ್ವಜನಿಕರು ಭಾಗವಹಿಸಿ ತಮ್ಮ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.

ಎಸ್​ಐಆರ್ ಆನ್‌ಲೈನ್ ವೆಬಿನಾರ್​ ಯಾವಾಗ? 

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕುರಿತಂತೆ ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಶನ್  ವತಿಯಿಂದ ಆನ್‌ಲೈನ್ ವೆಬಿನಾರ್ ಆಯೋಜಿಸಲಾಗಿದೆ. ಈ ವೆಬಿನಾರ್ ಸೆಪ್ಟೆಂಬರ್ 12ರ ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ರಮೇಶ್ ಕೆ.ಎನ್ ಅವರು ಮುಖ್ಯ ವಿಷಯ ತಜ್ಞರಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಶನ್ ಟ್ವೀಟ್​

ಈ ಆನ್‌ಲೈನ್​​ ವೆಬಿನಾರ್​​ನ ಮುಖ್ಯ ಉದ್ದೇಶವೆಂದರೆ ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಸ್ಥಿತಿಗತಿ, ಕರಡು ಪಟ್ಟಿ, ನೋಟಿಸ್‌ಗಳು, ವಿಚಾರಣೆ, ಅಗತ್ಯ ದಾಖಲೆಗಳು ಹಾಗೂ ಮುಂದಿನ ಹಂತಗಳ ಕುರಿತು ಮಾಹಿತಿ ನೀಡಲಾಗುತ್ತದೆ. ಜೊತೆಗೆ ಸಾಮಾನ್ಯವಾಗಿ ಕೇಳುವ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಲಾಗುತ್ತದೆ.

LIVE TV

ಎಸ್​ಐಆರ್ ಆನ್‌ಲೈನ್ ವೆಬಿನಾರ್​​ಗೆ​​ ನೋಂದಣಿ ಹೇಗೆ?

ಇನ್ನು ಎಸ್​ಐಆರ್ ಆನ್‌ಲೈನ್ ವೆಬಿನಾರ್​​​ನಲ್ಲಿ ಭಾಗವಹಿಸುವವರು tinyurl.com/BAF-Parihara ಲಿಂಕ್ ಮೂಲಕ ಅಥವಾ ಪೋಸ್ಟರ್‌ನಲ್ಲಿರುವ ಕ್ಯೂಆರ್ (QR) ಕೋಡ್ ಸ್ಕ್ಯಾನ್ ಮಾಡಿ ನೋಂದಾಯಿಸಿಕೊಳ್ಳಬಹುದು. ನೋಂದಾಯಿತರಿಗೆ ಮೀಟಿಂಗ್ ಆರಂಭವಾಗುವ ಮುನ್ನ ಆನ್‌ಲೈನ್ ಲಿಂಕ್​​​ ಕಳುಹಿಸಲಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:17 pm, Wed, 9 September 26

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ