
ಬೆಂಗಳೂರು, ಸೆಪ್ಟೆಂಬರ್ 09: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಇತ್ತೀಚೆಗೆ ಮತದಾರರ ಮೊದಲ ಕರಡು ಪಟ್ಟಿ ಬಿಡುಗಡೆ ಮಾಡಲಾಗಿತ್ತು. ರಾಜ್ಯ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಈಗಾಗಲೇ 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ. ಹೀಗಿರುವಾಗ ಎಸ್ಐಆರ್ ಬಗ್ಗೆ ಜನರಲ್ಲಿ ಇನ್ನೂ ಗೊಂದಲಗಳಿವೆ. ಹೀಗಾಗಿ ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೇಶನ್ ಎಸ್ಐಆರ್ ಕುರಿತಾಗಿ ಒಂದು ವಿಶೇಷ ಆನ್ಲೈನ್ ವೆಬಿನಾರ್ ಆಯೋಜನೆಗೆ ಮುಂದಾಗಿದ್ದು, ಸಾರ್ವಜನಿಕರು ಭಾಗವಹಿಸಿ ತಮ್ಮ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕುರಿತಂತೆ ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೇಶನ್ ವತಿಯಿಂದ ಆನ್ಲೈನ್ ವೆಬಿನಾರ್ ಆಯೋಜಿಸಲಾಗಿದೆ. ಈ ವೆಬಿನಾರ್ ಸೆಪ್ಟೆಂಬರ್ 12ರ ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ರಮೇಶ್ ಕೆ.ಎನ್ ಅವರು ಮುಖ್ಯ ವಿಷಯ ತಜ್ಞರಾಗಿ ಭಾಗವಹಿಸಲಿದ್ದಾರೆ.
ಈ ಆನ್ಲೈನ್ ವೆಬಿನಾರ್ನ ಮುಖ್ಯ ಉದ್ದೇಶವೆಂದರೆ ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯ ಸ್ಥಿತಿಗತಿ, ಕರಡು ಪಟ್ಟಿ, ನೋಟಿಸ್ಗಳು, ವಿಚಾರಣೆ, ಅಗತ್ಯ ದಾಖಲೆಗಳು ಹಾಗೂ ಮುಂದಿನ ಹಂತಗಳ ಕುರಿತು ಮಾಹಿತಿ ನೀಡಲಾಗುತ್ತದೆ. ಜೊತೆಗೆ ಸಾಮಾನ್ಯವಾಗಿ ಕೇಳುವ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಲಾಗುತ್ತದೆ.
ಇನ್ನು ಎಸ್ಐಆರ್ ಆನ್ಲೈನ್ ವೆಬಿನಾರ್ನಲ್ಲಿ ಭಾಗವಹಿಸುವವರು tinyurl.com/BAF-Parihara ಲಿಂಕ್ ಮೂಲಕ ಅಥವಾ ಪೋಸ್ಟರ್ನಲ್ಲಿರುವ ಕ್ಯೂಆರ್ (QR) ಕೋಡ್ ಸ್ಕ್ಯಾನ್ ಮಾಡಿ ನೋಂದಾಯಿಸಿಕೊಳ್ಳಬಹುದು. ನೋಂದಾಯಿತರಿಗೆ ಮೀಟಿಂಗ್ ಆರಂಭವಾಗುವ ಮುನ್ನ ಆನ್ಲೈನ್ ಲಿಂಕ್ ಕಳುಹಿಸಲಾಗುತ್ತದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:17 pm, Wed, 9 September 26