ಕರ್ನಾಟಕದಲ್ಲಿ ನೀರಿನ ಸಮಸ್ಯೆ: ಕೃಷ್ಣಾ ನದಿಗೆ ಹೆಚ್ಚು ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದ ಸಚಿವ ಪ್ರಲ್ಹಾದ್​ ಜೋಶಿ

|

Updated on: Apr 24, 2023 | 10:42 PM

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮನುಷ್ಯರಿಗೆ ಮಾತ್ರವಲ್ಲದೆ, ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಆಗಿದ್ದು, ವಾರ್ಣಾ, ಕೋಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಪತ್ರ ಬರೆದಿದ್ದಾರೆ.

ಕರ್ನಾಟಕದಲ್ಲಿ ನೀರಿನ ಸಮಸ್ಯೆ: ಕೃಷ್ಣಾ ನದಿಗೆ ಹೆಚ್ಚು ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದ ಸಚಿವ ಪ್ರಲ್ಹಾದ್​ ಜೋಶಿ
ಸಚಿವ ಪ್ರಲ್ಹಾದ್​ ಜೋಶಿ
Follow us on

ಬೆಂಗಳೂರು: ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ (water crisis) ಎದುರಾಗಿದೆ. ಈ ಕುರಿತು ಮಹಾರಾಷ್ಟ್ರದ ವಾರ್ಣಾ, ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 3 ಟಿಎಂಸಿ ಹಾಗೂ ಉಜ್ಜಿನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರು ಹರಿಸುವಂತೆ ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ (Eknath Shinde) ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಪತ್ರ ಬರೆದಿದ್ದಾರೆ. ಈ ಕುರಿತು ಪ್ರಲ್ಹಾದ್​ ಜೋಶಿ ತಮ್ಮ ಟ್ವೀಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕರೆ ಮಾಡಿ ಮಾತನಾಡಿದ್ದು, ಬೇಡಿಕೆಗೆ ಸ್ಪಂದಿಸಿ ನೀರು ಒದಗಿಸಲು ಒಪ್ಪಿದ್ದಾರೆ ಎಂದು ಹೇಳಿದ್ದಾರೆ.

ಸಚಿವ ಪ್ರಲ್ಹಾದ್​ ಜೋಶಿ ಬರೆದ ಪತ್ರದಲ್ಲೇನಿದೆ?

ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಯಾದಗಿರಿ ಮತ್ತು ರಾಯಚೂರಿನಲ್ಲಿ ಏಪ್ರಿಲ್ 2023ರ ಆರಂಭದ ದಿನಗಳಲ್ಲಿ ತೀವ್ರ ಬೇಸಿಗೆಯ ಕಾರಣದಿಂದ ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿದೆ ಎಂದು ನಾನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ.

ಇದನ್ನೂ ಓದಿ: Mann Ki Baat@100: ಮನ್ ಕಿ ಬಾತ್ 100 ಕೋಟಿ ಕೇಳುಗರನ್ನು ತಲುಪಿದೆ: IIM ಸಮೀಕ್ಷೆ

ಕೃಷ್ಣಾ ನದಿಗೆ ವಾರ್ಣಾ ಮತ್ತು ಕೊಯ್ನಾ ಜಲಾಶಯದಿಂದ 3 ಟಿಎಂಸಿ ನೀರು ಮತ್ತು ಉಜ್ಜಿನಿಯಿಂದ 3 ಟಿಎಂಸಿ ನೀರು ಬಿಡುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ದಿನಾಂಕ:18.04.2023 ರ ಪತ್ರದ ಮೂಲಕ ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಲಾಗಿದೆ.  ಮಹಾರಾಷ್ಟ್ರದಿಂದ ಕರ್ನಾಟಕದ ಭೀಮಾ ನದಿ ಜಲಾಶಯಕ್ಕೆ ಮನುಷ್ಯರು ಮತ್ತು ಜಾನುವಾರುಗಳು ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವಂತೆ ತಿಳಿಸಲಾಗಿದೆ.


ಹಿಂದೆ, ಇಂತಹ ಸಂದರ್ಭಗಳಲ್ಲಿ, ಮಹಾರಾಷ್ಟ್ರ ರಾಜ್ಯವು ಉದಾತ್ತತೆಯನ್ನು ತೋರಿದೆ. ಮತ್ತು ಕರ್ನಾಟಕ ರಾಜ್ಯದ ಮನವಿಗೆ ಸ್ಪಂದಿಸಿ ನೀರು ಬಿಡಲಾಗಿತ್ತು. ಕರ್ನಾಟಕದಲ್ಲಿ ಸಂಕಷ್ಟದ ಸಮಯದಲ್ಲಿ ಮನುಷ್ಯರು ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆ ಇದೆ.

ಇದನ್ನೂ ಓದಿ: ಏಪ್ರಿಲ್ 26ರಂದು ಕರ್ನಾಟಕಕ್ಕೆ ಬುಲ್ಡೋಜರ್ ಖ್ಯಾತಿಯ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ

ಮಾನವೀಯ ನೆಲೆಯಲ್ಲಿ ಕರ್ನಾಟಕದ ಮನವಿಯನ್ನು ಪರಿಗಣಿಸಲು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ತುರ್ತು ಅವಶ್ಯಕತೆಗಳನ್ನು ಪೂರೈಸಲು ನೀರನ್ನು ಬಿಡುಗಡೆ ಮಾಡಲು ಸಂಬಂಧಿಸಿದ ಸಚಿವಾಲಯ ಅಥವಾ ಅಧಿಕಾರಿಗಳಿಗೆ ನಿರ್ದೇಶಿಸಲು ನಾನು ನಿಮ್ಮನ್ನು ವಿನಂತಿಸುತ್ತೇನೆ ಎಂದು ಸಚಿವ ಪ್ರಲ್ಹಾದ್​ ಜೋಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:19 pm, Mon, 24 April 23