AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ: 10 ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆ; ಉತ್ತರ ಕರ್ನಾಟದಲ್ಲಿ ಬಿಸಿಲಿನಬ್ಬರ

Karnataka Weather: ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆ ನಿರೀಕ್ಷಿಸಲಾಗಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲಿನ ಅಬ್ಬರ ಮುಂದುವರಿಯಲಿದ್ದರೆ, ಬೆಂಗಳೂರಿನಲ್ಲಿ ಒಣ ಹವೆ ಇರಲಿದೆ. ನಗರದಲ್ಲಿ ಮಳೆ ಸಾಧ್ಯತೆ ಕಡಿಮೆ. ಇನ್ನು ಕರ್ನಾಟಕದಲ್ಲಿ ಮೇ 11ರ ವರೆಗೆ ಮಳೆ ಮುಂದುವರೆಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ: 10 ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆ; ಉತ್ತರ ಕರ್ನಾಟದಲ್ಲಿ ಬಿಸಿಲಿನಬ್ಬರ
ಮಳೆImage Credit source: shutterstock.com
ಪ್ರಸನ್ನ ಹೆಗಡೆ
|

Updated on: May 08, 2026 | 6:35 PM

Share

ಬೆಂಗಳೂರು, ಮೇ 08: ರಾಜ್ಯದ ಹಲವೆಡೆ ಬಿಸಿಲಿನ ಅಬ್ಬರದ ನಡುವೆಯೂ ಕರಾವಳಿ ಸೇರಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಮೇ 11ರ ವರೆಗೂ ಕೆಲವೆಡೆ ಗುಡುಗು ಸಹಿತ ಮಳೆಯನ್ನು ಅಂದಾಜಿಸಲಾಗಿದೆ. ಅದಾಗಿಯೂ ಕರಾವಳಿ ಸೇರಿ ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ತೀವ್ರ ತಾಪಮಾನ ಕಂಡುಬರಲಿದೆ ಎನ್ನಲಾಗಿದೆ.

ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಹಾಗೆಯೇ ಉತ್ತರ ಒಳನಾಡು ಭಾಗದ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿಯೂ ವರುಣ ಆರ್ಭಟಿಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿಯೂ ಮಳೆ ಸಾಧ್ಯತೆ ಅಂದಾಜಿಸಲಾಗಿದೆ.

ಇದನ್ನೂ ಓದಿ:  ಮಳೆ ವೇಳೆ 15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಆಟೋ ದರ 1,200 ರೂ.!; ಈ ಹಣದಲ್ಲಿ ಏರ್‌ಪೋರ್ಟ್‌ಗೇ ಹೋಗಬಹುದು ಎಂದ ನೆಟ್ಟಿಗರು

ಉಳಿದಂತೆ ಉತ್ತರ ಕನ್ನಡ, ಬಾಗಲಕೋಟೆ, ಬೀದರ್​​, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬೆಂಗಳೂರಲ್ಲಿ ಮಳೆ ಸಾಧ್ಯತೆ ಇದ್ಯಾ?

ರಾಜಧಾನಿ ಬೆಂಗಳೂರಲ್ಲಿ ನಾಳೆ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ. ನಗರದ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್​​ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್​​ ಇರಲಿದೆ. ಗಾಳಿಯ ವೇಗ ಗಂಟೆಗೆ 10-16 ಕಿಲೋ ಮೀಟರ್​​ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More