Karnataka Weather Update: ಬೆಂಗಳೂರಲ್ಲಿ ಅಬ್ಬರಿಸಿದ ವರುಣ; ರಾಜ್ಯದ ಎಲ್ಲೆಲ್ಲಿ ನಾಳೆ ಮಳೆ?
ಬೆಂಗಳೂರಲ್ಲಿ ಭಾರೀ ಮಳೆಯಾಗಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಮಳೆ ಮುನ್ಸೂಚನೆ ಇದೆ. ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹೆಚ್ಚಾಗಲಿದ್ದು, ಏಪ್ರಿಲ್ 10-12ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆಯಿದ್ದರೆ, ಉತ್ತರ ಒಳನಾಡಿನಲ್ಲಿ ಒಣ ಹವಾಮಾನವಿರಲಿದೆ.

ಬೆಂಗಳೂರು, ಏಪ್ರಿಲ್ 10: ರಾಜಧಾನಿ ಬೆಂಗಳೂರಿನ (Bengaluru) ಹಲವೆಡೆ ವರುಣ ಅಬ್ಬರಿಸಿದ್ದು, ಮೆಜೆಸ್ಟಿಕ್, ರಾಜಾಜಿನಗರ, ವಸಂತನಗರ, ಕಲಾಸಿಪಾಳ್ಯ, ಟೌನ್ಹಾಲ್, ವಿಜಯನಗರ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಏಕಾಏಕಿ ಮಳೆ ಸುರಿದ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಮಂದಗತಿಯಲ್ಲಿ ವಾಹನಗಳು ಸಾಗಿವೆ. ರಾಜ್ಯದ ಹಲವೆಡೆ ಇನ್ನೂ ಕೆಲ ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ
🚨ಬಿಸಿ ಗಾಳಿ & ಆರ್ದ್ರತೆ ಎಚ್ಚರಿಕೆ 🚨 #Hot and #Humid #Warning@dcudupi @DCDKOfficial @dcuttarakannada #KSNDMC #Heatwave@KarnatakaVarthe #Premonsoon pic.twitter.com/nXxGzh7iYs
— Karnataka State Natural Disaster Monitoring Centre (@KarnatakaSNDMC) April 10, 2026
ಇನ್ನು ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ (Hot and Humid) ಹೆಚ್ಚಿರಲಿದೆ. ಹವಾಮಾನವು ಸಾಮಾನ್ಯವಾಗಿ ಒಣಗಿದ್ದರೂ, ಸೆಖೆಯ ಅನುಭವ ಹೆಚ್ಚಾಗಿರಲಿದೆ. ಹೀಗಾಗಿ ಏಪ್ರಿಲ್ 10ರಿಂದ 12ರ ವರೆಗೆ ಈ ಭಾಗದಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.
ಇದನ್ನೂ ಓದಿ: ಉತ್ತರ ಒಳನಾಡಿನಲ್ಲಿ ಕೆಂಡದಂಥಾ ಬಿಸಿಲು, ದಕ್ಷಿಣದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ದಕ್ಷಿಣ ಒಳನಾಡು ಭಾಗದ ಬೆಂಗಳೂರು, ಮೈಸೂರು, ಕೊಡಗು ಮತ್ತು ಚಾಮರಾಜನಗರದ ಕೆಲವು ಭಾಗಗಳಲ್ಲಿ ಭಾಗಶಃ ಮೋಡದಿಂದ ಆಕಾಶ ಕೂಡಿರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಂಪೂರ್ಣ ಒಣ ಹವಾಮಾನದ ಜೊತೆಗೆ ತಾಪಮಾನದಲ್ಲಿ ಏರಿಕೆ ಕಂಡುಬರಲಿದೆ. ಹಾಗೆಯೇ ಬೆಂಗಳೂರಿನಲ್ಲಿ ಹಗಲಿನ ವೇಳೆ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ನಗರದ ಗರಿಷ್ಠ ಉಷ್ಣಾಂಷ 35 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಷ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 6-13 ಕಿಲೋ ಮೀಟರ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:29 pm, Fri, 10 April 26




