AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಶೀತದ ಅಲೆಯ ಸಾಧ್ಯತೆ

Karnataka Weather: ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಮುನ್ಸೂಚನೆ ಇದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ಶೀತದಲೆ ಉಂಟಾಗುವ ಸಾಧ್ಯತೆ ಇದೆ.

ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಶೀತದ ಅಲೆಯ ಸಾಧ್ಯತೆ
ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಶೀತದ ಅಲೆಯ ಸಾಧ್ಯತೆ
ಭಾವನಾ ಹೆಗಡೆ
|

Updated on: Dec 12, 2025 | 7:33 AM

Share

ಬೆಂಗಳೂರು, ಡಿಸೆಂಬರ್ 12: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವಿದ್ದು (Weather Forecast) , ಮೈಕೊರೆಯುವ ಚಳಿಯೂ ಕಂಡು ಬರುತ್ತಿದೆ. ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವೆಲ್ಲಾ ಪ್ರದೇಶಗಳಲ್ಲಿ ಶೀತದಲೆ

ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಕಲಬುರ್ಗಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೀತ ಅಲೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದ್ದು, ನಂತರದ ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗುವುದಿಲ್ಲ.

ಎಲ್ಲೆಲ್ಲಿ ಒಣ ಹವೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ ಬೆಂಗಳೂರಿಗರೇ ಸಿದ್ದರಾಗಿ: ಮುಂದಿನವಾರ ರಾಜಧಾನಿಯಲ್ಲಿ ಇರಲಿದೆ ದಾಖಲೆಯ ಚಳಿ; ಕನಿಷ್ಠ ತಾಪಮಾನ ಎಷ್ಟು ಗೊತ್ತಾ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಬೆಂಗಳೂರಲ್ಲಿ ಇಂದು ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣ ಜಾಸ್ತಿ ಇದೆ. ಗಾಳಿಯ ವೇಗ ಪ್ರತಿ ಗಂಟೆಗೆ 11 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 15.°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ