AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಇಂದೂ ಇರಲಿದೆ ಮಂಜು ಮುಸುಕಿದ ಹವಾಮಾನ

Karnataka Weather: ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಒಣ ಹವೆ ವಾತಾವರಣವಿರಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಜೊತೆಗೆ ವಿಪರೀತ ಚಳಿಯ ಮುನ್ಸೂಚನೆ ಇದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಇಂದೂ ಇರಲಿದೆ ಮಂಜು ಮುಸುಕಿದ ಹವಾಮಾನ
ಬೆಂಗಳೂರಿನಲ್ಲಿ ಇಂದೂ ಇರಲಿದೆ ಮಂಜು ಮುಸುಕಿದ ಹವಾಮಾನ
ಭಾವನಾ ಹೆಗಡೆ
|

Updated on: Dec 08, 2025 | 7:22 AM

Share

ಬೆಂಗಳೂರು, ಡಿಸೆಂಬರ್ 08: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆ ಸೇರಿದಂತೆ ರಾಜ್ಯದೆಲ್ಲೆಡೆ ಎರಡು ದಿನಗಳಿಂದ ಒಣ ಹವೆಯ ವಾತಾವರಣ (Weather Forecast) ಮನೆಮಾಡಿದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದೂ ಮಂಜು ಮುಸುಕಿದ ವಾತಾವರಣ ಇರಲಿದ್ದು, ವಿಪರೀತ ಚಳಿ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಒಣ ಹವೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಬೆಂಗಳೂರಲ್ಲಿ ಹಲವು ದಿನಗಳಿಂದ ಮಂಜು ಕವಿದ ವಾತಾವರಣವಿದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 8 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 16.4°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು