AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ರಾಜ್ಯದ ಹಲವು ಭಾಗಗಳಲ್ಲಿ ಒಣ ಹವೆಯ ಮುನ್ಸೂಚನೆ

Karnataka Weather: ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಧ್ಯಕ್ಕೆ ಮಳೆಯಾರ್ಭಟ ನಿಂತಿದ್ದು, ಇಂದು ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ವಾತಾವರಣ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿಯೂ ಮೋಡ ಕವಿದ ವಾತಾವರಣವಿರಲಿದೆ ಎಂಬ ಮುನ್ಸೂಚನೆ ಇದೆ.

Karnataka Weather Today: ರಾಜ್ಯದ ಹಲವು ಭಾಗಗಳಲ್ಲಿ ಒಣ ಹವೆಯ ಮುನ್ಸೂಚನೆ
ರಾಜ್ಯದ ಹಲವು ಭಾಗಗಳಲ್ಲಿ ಒಣ ಹವೆಯ ಮುನ್ಸೂಚನೆ
ಭಾವನಾ ಹೆಗಡೆ
|

Updated on: Nov 25, 2025 | 7:37 AM

Share

ಬೆಂಗಳೂರು, ನವೆಂಬರ್ 25: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇಂದು ಮಳೆರಾಯನಿಗೆ ಸ್ವಲ್ಪ ಬಿಡುವು ಸಿಕ್ಕಂತಿದೆ. ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿರಲಿದೆ  (Weather Forecast) ಎಂದು ಹವಾಮಾನ ಇಲಾಖೆ ವರದಿ ಮಾಡಿದ್ದು, ಬೆಂಗಳೂರಿನ ಕೆಲವೆಡೆ ಮೋಡ ಕವಿದ ವಾತಾವರಣ ಇರಬಹುದು ಎನ್ನಲಾಗಿದೆ.

ಯಾವೆಲ್ಲಾ ಪ್ರದೇಶಗಳಲ್ಲಿ ಒಣ ಹವೆ?

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಉಳಿದ ಭಾಗಗಳಂತೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದ್ದು, ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ Karnataka Weather Today: ರಾಜ್ಯದ ಹಲವೆಡೆ ಸಾಧಾರಣ ಮಳೆ; ಉತ್ತರ ಒಳನಾಡಿನಲ್ಲಿ ಒಣ ಹವೆಯ ವಾತಾವರಣ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯ ವೇಗ ಪ್ರತಿ ಗಂಟೆಗೆ 14 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 18°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ