
ಬೆಂಗಳೂರು, ನವೆಂಬರ್ 27: ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣವಿರಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದ್ದು, ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಉಳಿದ ಭಾಗಗಳಂತೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ Karnataka Weather Today: ರಾಜ್ಯದಲ್ಲಿ ಇಂದೂ ಮುಂದುವರೆಯಲಿರುವ ಒಣ ಹವೆಯ ವಾತಾವರಣ
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿರಲಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 16 ಕಿ.ಮೀ ಇರಲಿದ್ದು, ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 17°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.