AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

Monsoon 2026: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.

Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಭಾವನಾ ಹೆಗಡೆ
|

Updated on: Jun 12, 2026 | 7:27 AM

Share

ಬೆಂಗಳೂರು, ಜೂನ್ 12: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ಮುಖ್ಯಾಂಶಗಳು

  • ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ, ಭಾರಿ ಮಳೆಯ ಮುನ್ಸೂಚನೆ.
  • ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
  • ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹವಾಮಾನ ಇಲಾಖೆ ಸೂಚನೆ.

ಕರಾವಳಿಗೆ ಆರೆಂಜ್ ಅಲರ್ಟ್​

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಭಾರೀ ಮಳೆ

ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಮಲೆನಾಡು ಭಾಗಕ್ಕೆ ಹೈ ಅಲರ್ಟ್

ಮಲೆನಾಡು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ.

ಭಾರಿ ಮಳೆ ಮತ್ತು ಗಾಳಿಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಮತ್ತು ರೈತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹಾಗೂ ಹಳೆಯ ಕಟ್ಟಡ/ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಹವಾಮಾನ ಇಲಾಖೆ ಸೂಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ