AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಲ್ಲಿ 2 ದಿನ ಭಾರಿ ಮಳೆ ನಿರೀಕ್ಷೆ

Monsoon 2026: ಬೆಂಗಳೂರಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಹಲವೆಡೆ ನಿರೀಕ್ಷಿತ ಪ್ರಮಾಣದ ಮಳೆಯಾಗದಿರುವ ಬಗ್ಗೆ ಪ್ರತಿಕ್ರಿಯಿಸಿರುವ ತಜ್ಞರು, ಅರಬ್ಬಿ ಸಮುದ್ರದಿಂದ ಬರುತ್ತಿರುವ ಗಾಳಿಯಲ್ಲಿ ಸಾಕಷ್ಟು ತೇವಾಂಶ ಇಲ್ಲದ ಕಾರಣ ನಿರೀಕ್ಷಿತ ಪ್ರಮಾಣದ ಮಳೆ ಬೀಳುತ್ತಿಲ್ಲ ಎಂದು ತಿಳಿಸಿದ್ದಾರೆ.

Karnataka Weather Forecast: ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಲ್ಲಿ 2 ದಿನ ಭಾರಿ ಮಳೆ ನಿರೀಕ್ಷೆ
ಮಳೆImage Credit source: dinamalar.com
ಪ್ರಸನ್ನ ಹೆಗಡೆ
|

Updated on: Jun 16, 2026 | 6:57 AM

Share

ಬೆಂಗಳೂರು, ಜೂನ್​​ 16: ರಾಜ್ಯ ರಾಜಧಾನಿ ಬೆಂಗಳೂರಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಗರದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು-ಮಿಂಚಿನೊಂದಿಗೆ ವರುಣಾರ್ಭಟ ಇರುವ ಬಗ್ಗೆ ಅಂದಾಜಿಸಲಾಗಿದ್ದು, ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ, ದಕ್ಷಿಣ ಒಳನಾಡಲ್ಲಿ ಭಾರೀ ಮಳೆ ನಿರೀಕ್ಷೆ

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಅವಧಿಯಲ್ಲಿ ಬಹುತೇಕ ಕಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ದಕ್ಷಿಣ ಒಳನಾಡು ಕರ್ನಾಟಕದಲ್ಲಿಯೂ ಗುರುವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು IMD ಎಚ್ಚರಿಕೆ ನೀಡಿದೆ. ಕೊಡಗು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬುಧವಾರದವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಮಂತ್ರಾಲಯದಲ್ಲಿ ವರುಣನ ಅಬ್ಬರಕ್ಕೆ ಭಕ್ತರು ಕಂಗಾಲು; ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೂ ಪರದಾಟ

ಹಲವೆಡೆ ಸುರಿಯದ ನಿರೀಕ್ಷಿತ ಮಳೆ

ಇತ್ತೀಚಿನ ಎರಡು ವಾರಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಿಗೆ IMD ಕೆಂಪು, ಕಿತ್ತಳೆ ಹಾಗೂ ಹಳದಿ ಎಚ್ಚರಿಕೆಗಳನ್ನು ನೀಡುತ್ತಿದ್ದರೂ, ಅನೇಕ ಪ್ರದೇಶಗಳಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಸುರಿದಿಲ್ಲ. ಕೆಲವು ಕಡೆಗಳಲ್ಲಿ ಮಳೆಯೇ ಆಗಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ತಜ್ಞರು, ಹವಾಮಾನ ಮಾದರಿಗಳು (Weather Models) ಸುಮಾರು 3 ರಿಂದ 4 ಕಿ.ಮೀ ಎತ್ತರದಲ್ಲಿ ಬಲವಾದ ವಾಯು ಚಲನೆಗಳಿರುವುದನ್ನು ತೋರಿಸುತ್ತಿವೆ. ಸಾಮಾನ್ಯವಾಗಿ ಇಂತಹ ಪರಿಸ್ಥಿತಿಗಳು ಭಾರೀ ಮಳೆಗೆ ಕಾರಣವಾಗುತ್ತವೆ. ಆದರೆ ಅರಬ್ಬಿ ಸಮುದ್ರದಿಂದ ಬರುತ್ತಿರುವ ಗಾಳಿಯಲ್ಲಿ ಸಾಕಷ್ಟು ತೇವಾಂಶ ಇಲ್ಲದ ಕಾರಣ ನಿರೀಕ್ಷಿತ ಪ್ರಮಾಣದ ಮಳೆ ಬೀಳುತ್ತಿಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ