AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಚಳಿಗೆ ನಲುಗಿದ ಕರ್ನಾಟಕ, ಪ್ರಯಾಣ ಮಾಡುವವರು ಎಚ್ಚರ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಒಣಹವೆ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮಂಜು ಕವಿದಿದ್ದು, ತಾಪಮಾನ ಕುಸಿಯಲಿದೆ. ಬೀದರ್, ಹಾವೇರಿ, ದಾವಣಗೆರೆಯಲ್ಲಿ ಶೀತ ಅಲೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿಯೂ ಚಳಿ ಹೆಚ್ಚಾಗಲಿದೆ. ರಾಜ್ಯದಲ್ಲಿ ಮಳೆಯ ಸಾಧ್ಯತೆ ಶೂನ್ಯ. ಬೆಳಗಿನ ಪ್ರಯಾಣದ ಮಾಡುವವರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಕರ್ನಾಟಕ ಹವಾಮಾನ ವರದಿ: ಚಳಿಗೆ ನಲುಗಿದ ಕರ್ನಾಟಕ, ಪ್ರಯಾಣ ಮಾಡುವವರು ಎಚ್ಚರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Dec 18, 2025 | 6:32 AM

Share

ಬೆಂಗಳೂರು, ಡಿ.18: ಬೆಂಗಳೂರು ಸೇರಿದಂತೆ ರಾಜ್ಯದ (Karnataka weather forecast) ಹಲವು ಭಾಗಗಳಲ್ಲಿ ಇಂದು ಒಣಹವೆ ವಾತಾವರಣ ಇರಲಿದೆ. ಜತೆಗೆ ಗಾಳಿ ಗುಣಮಟ್ಟದಲ್ಲಿ ಬದಲಾವಣೆಗಳು ಆಗಲಿದೆ. ಕೆಲವು ಜಿಲ್ಲೆಗಳಲ್ಲಿ ಮಂಜು ಕಾಣಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ 15°C, ಬೆಂಗಳೂರು ಗ್ರಾಮಾಂತರ 14°C ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಇಂದು ತಾಪಮಾನ ಶೇಕಾಡ 24.4ರಷ್ಟು ಇರಲಿದೆ. ಹಾಗೂ ಬೆಂಗಳೂರು ಗ್ರಾಮೀಣ ಭಾಗದಲ್ಲಿ ಶೇಕಾಡ 24.6ರಷ್ಟು ಇದೆ. ಶುಕ್ರವಾರ (ಡಿ.19) ಹಾಗೂ ಶನಿವಾರ (ಡಿ.20) ಕೂಡ ಇದೆ ತಾಪಮಾನ ಇರಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ನಗರದ ಭಾಗದಲ್ಲಿ ಇಂದು ಮಂಜಿನ ವಾತಾವರಣ ಇರಲಿದೆ. ಗ್ರಾಮೀಣ ಭಾಗದಲ್ಲಿ ಮಂಜು ಮತ್ತು ಮಬ್ಬು ಎರಡು ಕೂಡ ಕಾಣಿಸಲಿದೆ.

ಇನ್ನು ಉತ್ತರ ಕರ್ನಾಟಕ ಭಾಗಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಕೂಡ ಒಣ ಹವಾಮಾನ ಮುಂದುವರಿಯಲಿದೆ ಎಂದು ಇಲಾಖೆ ಹೇಳಿದೆ. ಇನ್ನು ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಹೆಚ್ಚಾಗಿ ಒಣ ಹವೆ ಇರುತ್ತದೆ, ಆಕಾಶವು ಶುಭ್ರವಾಗಿರುತ್ತದೆ, ಸೂರ್ಯಾಸ್ತದ ನಂತರ ತಾಪಮಾನದಲ್ಲಿ ತೀವ್ರ ಕುಸಿತ ಕಂಡುಬರುತ್ತದೆ. ಇಲ್ಲಿಗೆ ಹೋಲಿಸಿದರೆ ಕರಾವಳಿ ಭಾಗದಲ್ಲಿ ಮಧ್ಯಮ ಉಷ್ಣತೆ ಮತ್ತು ತೇವಾಂಶ ಇರುತ್ತದೆ. ಮಂಗಳೂರಿನಂತಹ ನಗರಗಳಲ್ಲಿ ಗರಿಷ್ಠ ತಾಪಮಾನ 33°C ಸಮೀಪ ಇರುತ್ತದೆ .

ಇದನ್ನೂ ಓದಿ: ದಟ್ಟ ಮಂಜಿನಿಂದ 4ನೇ ಟಿ20 ಪಂದ್ಯ ರದ್ದು; ಸರಣಿಯಲ್ಲಿ ಭಾರತದ ಮೇಲುಗೈ

ಬೀದರ್,ಹಾವೇರಿ, ಮತ್ತು ದಾವಣಗೆರೆಯಲ್ಲಿ ಮುಂದಿನ 24 ಗಂಟೆಗಳ ಕಾಲ, ಶೀತ ಅಲೆಗಳ ಸ್ಥಿತಿ ಮುಂದುವರಿಯುವ ಬಗ್ಗೆ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಒಳನಾಡಿನ ಜಿಲ್ಲೆಗಳಲ್ಲಿ ಮುಂಜಾನೆ ಮಂಜು ಅಥವಾ ಮಂಜು ಕವಿದಿರುವ ಸಾಧ್ಯತೆ ಇದ್ದು, ಬೆಳಗಿನ ಪ್ರಯಾಣದ ಮಾಡುವವರು ತುಂಬಾ ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಇಲಾಖೆ ಹೇಳಿದೆ. ಇನ್ನು ಇಂದು ರಾಜ್ಯದ ಯಾವುದೇ ಭಾಗದಲ್ಲೂ ಇಂದು ಮಳೆಯಾಗುವ ಸಾಧ್ಯತೆಗಳು ಇಲ್ಲ. ಮಳೆಯಾಗುವ ಸಾಧ್ಯತೆ 0% ರಷ್ಟಿದೆ ಎಂದು ಇಲಾಖೆ ಹೇಳಿದೆ.

ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾಗಶಃ ಮೋಡ ಇರಲಿದ್ದು, ತಂಪು ವಾತಾವರಣದ ಅನುಭವವಾಗಲಿದೆ. ಉತ್ತರ ಒಳನಾಡಿನ ಇತರ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ರಾಯಚೂರು, ಕಲಬುರಗಿ ಮತ್ತು ಯಾದಗಿರಿಗಳಲ್ಲಿ ಕನಿಷ್ಠ ತಾಪಮಾನ 12°C ಮತ್ತು 14°C ನಡುವೆ ಇರುತ್ತದೆ ಎಂದು ವರದಿಯಾಗಿದೆ. ಈ ಪ್ರದೇಶಗಳಲ್ಲಿ ಬೆಳಿಗ್ಗೆ ಅಸಾಮಾನ್ಯವಾಗಿ ಶೀತ, ಕೆಲವು ಸ್ಥಳಗಳಲ್ಲಿ ಮಂಜು ಕವಿದ ವಾತಾವರಣ ಮತ್ತು ಸೂರ್ಯಾಸ್ತದ ನಂತರ ತೀವ್ರ ಚಳಿ ಇರುತ್ತದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 am, Thu, 18 December 25

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್