AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಡಿ.1ರವರೆಗೆ ರಾಜ್ಯದಾದ್ಯಂತ ಒಣಹವೆ, ಮಳೆಯ ಮುನ್ಸೂಚನೆ ಇದೆಯೇ?

ಕರ್ನಾಟಕದಲ್ಲಿ ಡಿಸೆಂಬರ್ 1ರವರೆಗೆ ಹವಾಮಾನ ಹೇಗಿರಲಿದೆ? ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ದಿನಗಳ ಹವಾಮಾನ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಹವಾಮಾನ ವರದಿ: ಡಿ.1ರವರೆಗೆ ರಾಜ್ಯದಾದ್ಯಂತ ಒಣಹವೆ, ಮಳೆಯ ಮುನ್ಸೂಚನೆ ಇದೆಯೇ?
ಸಾಂದರ್ಭಿಕ ಚಿತ್ರ
ಭಾವನಾ ಹೆಗಡೆ
|

Updated on:Nov 29, 2026 | 7:29 AM

Share

ಮುಖ್ಯಾಂಶಗಳು

  • ಡಿಸೆಂಬರ್ 1ರವರೆಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ.
  • ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ಇಲ್ಲ.
  • ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಒಣಹವೆಯ ವಾತಾವರಣ ಇರಲಿದೆ.

ಬೆಂಗಳೂರು, ನವೆಂಬರ್ 29: ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮುಂದಿನ ಮೂರು ದಿನಗಳ ಹವಾಮಾನ ಮುನ್ಸೂಚನೆ ನೀಡಿದೆ. ಇಂದಿನಿಂದ ಡಿಸೆಂಬರ್ 1ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದು, ಜನರು ಒಣಹವೆಯ ವಾತಾವರಣವನ್ನು ನಿರೀಕ್ಷಿಸಬಹುದು. ಹಾಗಾದರೆ ಯಾವ ಭಾಗದಲ್ಲಿ ಹೇಗಿರಲಿದೆ ಹವಾಮಾನ? ಇಲ್ಲಿದೆ ಸಂಪೂರ್ಣ ಮಾಹಿತಿ.

ಮೂರು ಜಿಲ್ಲೆಗಳಲ್ಲಿ ಒಣಹವೆ

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಈ ಮೂರು ಜಿಲ್ಲೆಗಳಲ್ಲಿಯೂ ಮಳೆಯಾಗುವ ಯಾವುದೇ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿಲ್ಲ. ಹೀಗಾಗಿ ಕರಾವಳಿ ಭಾಗದ ಜನರು ಮುಂದಿನ ಮೂರು ದಿನಗಳ ಕಾಲ ಮಳೆಯ ಆತಂಕವಿಲ್ಲದೆ ದೈನಂದಿನ ಚಟುವಟಿಕೆಗಳನ್ನು ಮುಂದುವರಿಸಬಹುದು. ಮೀನುಗಾರಿಕೆ, ಕೃಷಿ ಸೇರಿದಂತೆ ಹೊರಾಂಗಣ ಚಟುವಟಿಕೆಗಳಿಗೆ ಮಳೆಯ ಅಡ್ಡಿಯಾಗುವ ಸಾಧ್ಯತೆ ಸದ್ಯಕ್ಕೆ ಕಂಡುಬರುತ್ತಿಲ್ಲ.

ಉತ್ತರ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ಇಲ್ಲ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಮಳೆಯಾಗುವ ಸಾಧ್ಯತೆ ಇಲ್ಲ. ಈ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬಹುತೇಕ ಒಣಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲೂ ಒಣಹವೆ

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇಲ್ಲ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಸಾಧ್ಯತೆ ಕಡಿಮೆಯಿದ್ದು, ಒಣಹವೆಯ ವಾತಾವರಣ ಇರಲಿದೆ.

ನಾಳೆಯ ಹವಾಮಾನ ಹೇಗಿರಲಿದೆ?

ಸೋಮವಾರವೂ ರಾಜ್ಯದಾದ್ಯಂತ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಯಾವುದೇ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿಯೂ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 1ರವರೆಗೂ ಇದೇ ಪರಿಸ್ಥಿತಿ ಮುಂದುವರಿಯುವ ನಿರೀಕ್ಷೆಯಿದೆ. ಹೀಗಾಗಿ ರೈತರು, ವಾಹನ ಸವಾರರು ಹಾಗೂ ಸಾರ್ವಜನಿಕರು ಮುಂದಿನ ದಿನಗಳಲ್ಲಿ ಮಳೆಯ ಆತಂಕವಿಲ್ಲದೆ ತಮ್ಮ ದೈನಂದಿನ ಕೆಲಸಗಳನ್ನು ಯೋಜಿಸಬಹುದು. ಆದರೂ ಹವಾಮಾನದಲ್ಲಿ ಆಗುವ ಬದಲಾವಣೆಗಳ ಬಗ್ಗೆ ಇಲಾಖೆ ನೀಡುವ ಮುಂದಿನ ಮುನ್ಸೂಚನೆಗಳ ಮೇಲೆ ಗಮನಹರಿಸುವುದು ಉತ್ತಮ.

ಕರ್ನಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:27 am, Sun, 29 November 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಪತ್ರಿಕೋದ್ಯಮ ಇವರು ಇಷ್ಟಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್‌ನಲ್ಲಿ ವೃತ್ತಿ ಜೀವನ ಆರಂಭಿಸಿರುವ ಇವರು, ಸಂಸ್ಥೆಯಲ್ಲಿ ಒಂದು ವರ್ಷದ ವೃತ್ತಿ ಅನುಭವ ಹೊಂದಿದ್ದಾರೆ. ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಕ್ಷೇತ್ರ ಮರುವಿಂಗಡಣೆ ವಿರುದ್ಧ ಸಮರ; ನಾಳೆ ದಕ್ಷಿಣ ಭಾರತದ ಸಿಎಂಗಳ ಸಭೆ
ಕ್ಷೇತ್ರ ಮರುವಿಂಗಡಣೆ ವಿರುದ್ಧ ಸಮರ; ನಾಳೆ ದಕ್ಷಿಣ ಭಾರತದ ಸಿಎಂಗಳ ಸಭೆ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ