AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ! 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

Karnataka Weather: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಆಲಿಕಲ್ಲು ಮಳೆಯೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಆದಾಗ್ಯೂ ಕಲಬುರಗಿ ಸೇರಿದಂತೆ ಹಲವೆಡೆ ಮುಂಬರುವ 3 ದಿನಗಳಲ್ಲಿ ತಾಪಮಾನ ಏರಿಕೆಯಾಗಲಿದ್ದು, ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ! 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ
ಭಾವನಾ ಹೆಗಡೆ
|

Updated on: May 01, 2026 | 7:26 AM

Share

ಬೆಂಗಳೂರು, ಮೇ 01: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 2 ದಿನಗಳಿಂದ ಆಲಿಕಲ್ಲು  (Karnataka Weather) ಮಳೆಯಾಗುತ್ತಿದ್ದು, ಇಂದೂ ಸಹ ಕರಾವಳಿ ಹೊರತುಪಡಿಸಿ ಉಳಿದೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಆಲಿಕಲ್ಲು ಮಳೆಯ ಅಲರ್ಟ್​!

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಎಲ್ಲೆಡೆ ಶುಷ್ಕ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಾಮರಾಜನಗರದಲ್ಲಿ ಗುಡುಗು ಸಿಡಿಲು, ಆಲಿಕಲ್ಲು ಸಹಿತ ಜೋರು ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ನೀಡಲಾಗಿದೆ. ಮಂಡ್ಯ ಮತ್ತು ತುಮಕೂರಿನಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮಂಡ್ಯ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರು ಮಳೆಗೆ ಮತ್ತೊಂದು ಸಾವು; ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ದುರ್ಮರಣ, ಒಟ್ಟು 9 ಬಲಿ!

ಮಳೆಯ ಅವಾಂತರ!

ಬುಧವಾರ ಸಂಜೆ ಬೆಂಗಳೂರಿನಲ್ಲಿ ಸುರಿದ ಮಳೆ ಹಲವರನ್ನು ಬಲಿ ಪಡೆದಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !